ಪತ್ನಿಗೆ ಕೊರೋನಾ, ದೆಹಲಿ ಸಿಎಂ ಕೇಜ್ರಿವಾಲ್ ಹೋಮ್ ಕ್ವಾರಂಟೈನ್!

Published : Apr 21, 2021, 12:30 PM IST
ಪತ್ನಿಗೆ ಕೊರೋನಾ, ದೆಹಲಿ ಸಿಎಂ ಕೇಜ್ರಿವಾಲ್ ಹೋಮ್ ಕ್ವಾರಂಟೈನ್!

ಸಾರಾಂಶ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೋಮ್ ಕ್ವಾರಂಟೈನ್| ಅರವಿಂದ್ ಕೇಂಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್ ಗೆ ಪಾಸಿಟಿವ್ ಬಂದ ಹಿನ್ನಲೆ ಸಿಎಂ ಕ್ವಾರಂಟೈನ್| ನಿನ್ನೆ ಸುನಿತಾ ಕೇಜ್ರಿವಾಲ್ ಗೆ ಕೊರೊನಾ ಧೃಡಪಟ್ಟಿದೆ| ಮನೆಯಿಂದಲೇ ವಿಡಿಯೋ ಕ್ವಾನ್ಫರೆನ್ಸ್ ಮೂಲಕ ಸಭೆಯಲ್ಲಿ ಸಿಎಂ ಭಾಗಿ

ನವದೆಹಲಿ(ಏ.21): ದೇಶಾದ್ಯಂತ ಕೊರೋನಾ ಅಟ್ಟಹಾಸ ಮಿತಿ ಮೀರಿದೆ. ಈ ಮಹಾಮಾರಿಯನ್ನು ತಡೆಯಲು ಸರ್ಕಾರಗಳು ಎಲ್ಲಾ ಯತ್ನಗಳನ್ನು ನಡೆಸುತ್ತಿದೆ. ಹೀಗಿದ್ದರೂ ಕೊರೋನಾ ಹಾವಳಿ ದಿನೇ ದಿನೇ ಹೆಚ್ಚುತ್ತಿದೆ. ಅದರಲ್ಲೂ ವಿಶೇಷವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ನಾಲ್ಕನೇ ಅಲೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಹೀಗಿರುವಾಗಲೇ ಸದ್ಯ ಸಿಎಂ ಅರವಿಂದ ಕೇಜ್ರೀವಾಲ್‌ ಪತ್ನಿ ಸುನಇತಾ ಕೇಜ್ರೀವಾಲ್‌ಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆ ದೆಹಲಿ ಸಿಎಂ ಕೇಜ್ರೀವಾಲ್ ಹೋಂ ಕ್ವಾರಂಟೈನ್ ಆಗಿದ್ದಾರೆ.

ಕೇಜ್ರಿವಾಲ್ ತಮ್ಮ ವಯಸ್ಸಾದ ತಂದೆ, ತಾಯಿ ಮತ್ತು ಇಬ್ಬರು ಮಕ್ಕಳ ಜೊತೆಗೆ ವಾಸಿಸುತ್ತಿದ್ದಾರೆ. ಹೀಗಿರುವಾಗಲೇ ಪತ್ನಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅಲ್ಲದೇ ಅತ್ತ ಕೆಲವು ಆಪ್‌ ಶಾಸಕರಿಗೂ ಸೋಂಕು ತಗುಲಿದೆ. ಇವೆಲ್ಲಾ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಸಿಎಂ ಕೇಜ್ರೀವಾಲ್ ಸ್ವಯಂ ಕ್ವಾರಂಟೈನ್ ಆಗಿದ್ದಾರೆ. ಅಲ್ಲದೇ ದೆಹಲಿಯಲ್ಲಿ ಕೊರೋನಾ ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಡನೆ ವಿಡಿಯೋ ಕಾನ್ಫರೆನ್ಸ್‌ ಮೂಲಕವೇ ಸಭೆ ನಡೆಸುತ್ತಿದ್ದಾರೆ.

ಇನ್ನು ದೆಹಲಿಯಲ್ಲಿ ಕಳೆದ ಇಪ್ಪತ್ನಾಲ್ಕು ಗಂಟೆಯಲ್ಲಿ 28,395 ಕೊರೋನಾ ಪ್ರಕರಣಗಳು ದಾಖಲಾಗಿದ್ದು, ರಾಜ್ಯದ ಜನತೆಯನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಅಲ್ಲದೇ ಅತ್ತ ಸಿಎಂ ಕೇಜ್ರೀವಾಲ್‌ ಕೂಡಾ ದೆಹಲಿಯ ಆಸ್ಪತ್ರೆಗಳು ಆಮ್ಲಜನಕ ಕೊರತೆ ಎದುರಿಸುತ್ತಿದ್ದು, ಶೀಘ್ರವಾಗಿ ಆಕ್ಸಿಜನ್ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

PUBG ಗೇಮ್​ನಿಂದ 6ನೇ ಮಗುವಿನತ್ತ ಪಯಣ: ಅಕ್ರಮವಾಗಿ ಭಾರತಕ್ಕೆ ಬಂದಿದ್ದಾಕೆ ಮತ್ತೊಮ್ಮೆ ಗರ್ಭಿಣಿ!
ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ