ಬಿಜೆಪಿ ಕಚೇರಿಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ

Published : Aug 18, 2023, 01:59 PM ISTUpdated : Aug 18, 2023, 02:26 PM IST
ಬಿಜೆಪಿ ಕಚೇರಿಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ

ಸಾರಾಂಶ

ಬಿಜೆಪಿ ಕಚೇರಿಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾದಂತಹ ಘಟನೆ ನಡೆದದೆ. ,ಅಸ್ಸಾಂ ಕಛರ್ ಜಿಲ್ಲೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಈ ಘಟನೆ ನಡೆದಿದೆ.

ಅಸ್ಸಾಂ: ಬಿಜೆಪಿ ಕಚೇರಿಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾದಂತಹ ಘಟನೆ ನಡೆದದೆ. ,ಅಸ್ಸಾಂ ಕಛರ್ ಜಿಲ್ಲೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು 48 ವರ್ಷದ ಸುಧಾಂಗ್ಶು ದಾಸ್ ಎಂದು ಗುರುತಿಸಲಾಗಿದ್ದು, ಬಿಜೆಪಿ ಕಚೇರಿಯ ವಿಐಪಿ ಕೊಠಡಿಯಲ್ಲಿ ಇವರ ಶವ ಪತ್ತೆಯಾಗಿದೆ. ಮೃತದೇಹದ ಮೇಲೆ ಒಂದು ತುಂಡು ಬಟ್ಟೆ ಇಲ್ಲದಿದ್ದುದ್ದು ಅಚ್ಚರಿ ಮೂಡಿಸಿದೆ.  ಸಿಲ್ಚಾರ್ ನಗರದ ಇಟ್ಖೊಲಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಈ ಘಟನೆ ಹಲವು ಅನುಮಾನಕ್ಕೆ ಕಾರಣವಾಗಿದೆ. 

ಈ ಘಟನೆಯನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗಿದೆ ಆದರೂ ಅದು ಮಾಧ್ಯಮಗಳ ಮುಂದೆ ಬಂದಿದೆ ಎಂಬ ಆರೋಪ ಕೇಳಿ ಬಂದಿದೆ. ಘಟನೆ ಬಗ್ಗೆ ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಕಾರ್ಯಕರ್ತರಾಗಲಿ, ಪಕ್ಷದ ನಾಯಕರಾಗಲಿ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ ಎಂದು ಮೊದಲಿಗೆ ವರದಿ ಆಗಿತ್ತು. 

ಮರ ಮುಪ್ಪಾದರೆ ಹುಳಿ ಮುಪ್ಪೆ: ಬೆತ್ತಲೆ ಕಾಣುವ ಕನ್ನಡಿ ಆಸೆಗೆ ಲಕ್ಷ ಲಕ್ಷ ಕಳೆದುಕೊಂಡ ವೃದ್ಧ

ಆದರೆ ನಂತರ ಜಿಲ್ಲಾ ಬಿಜೆಪಿ ಅಧ್ಯಕ್ಷರು, ಪಕ್ಷದ ಕಾರ್ಯಕರ್ತರು ವಿಐಪಿ ಕೊಠಡಿಗೆ ಹೋದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿಮೆಲೆಂದು ರಾಯ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಮೃತನನ್ನು ಸುಧಾಂಗ್ಶು ದಾಸ್ ಎಂದು ಗುರುತಿಸಲಾಗಿದ್ದು, ಬಿಜೆಪಿ ಕಚೇರಿಯ ವಾಚ್‌ಮನ್‌ ನಂಥು ರಾಯ್ ಜೊತೆ ಇವರು ಆಗಾಗ ಬಿಜೆಪಿ ಕಚೇರಿಗೆ ಬಂದು ಇಲ್ಲೇ ಉಳಿಯುತ್ತಿದ್ದರು. ಆದರೆ ಇವರು ಬಿಜೆಪಿ ಕಚೇರಿಯ ಸಿಬ್ಬಂದಿಯೂ ಅಲ್ಲ, ಕಾರ್ಯಕರ್ತನೂ ಅಲ್ಲ ಎಂದು ಹೇಳಿದ್ದಾರೆ.

ಇಂದು ಬೆಳಗ್ಗೆ ವಾಚ್‌ಮನ್‌ ನಂಥು ಅವರು ನನಗೆ ಕರೆ ಮಾಡಿ ಸುಧಾಂಶು ದಾಸ್ ಕೊಠಡಿಯ ಬಾಗಿಲು ತೆಗೆಯುತ್ತಿಲ್ಲ ಎಂದು ಮಾಹಿತಿ ನೀಡಿದ, ಆತ ನೀಡಿದ ಹೇಳಿಕೆಯ ಮೇಲೆ ನಾನು ಪೊಲೀಸರಿಗೆ ಮಾಹಿತಿ ನೀಡಿದೆ. ನಂತರ ಬಂದ ಪೊಲೀಸರು ಬಾಗಿಲು ಒಡೆದು ನೋಡಿದಾಗ ಸುದಾಂಗ್ಶು ದಾಸ್ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. 

ಬೆತ್ತಲಾಗಿ ಮಾಡುವ ಈ ಕೆಲಸಗಳು ಮಹಾಪಾಪಕ್ಕೆ ದಾರಿ; ವ್ಯಭಿಚಾರಿ ಮಗನ ಜನನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

18 ದಿನದಲ್ಲಿ 10 ಲಕ್ಷ ಪ್ರಯಾಣಿಕರ ಇಂಡಿಗೋ ಟಿಕೆಟ್‌ ರದ್ದು
ಬೆಂಗ್ಳೂರಲ್ಲಿ ಸಿ-130 ವಿಮಾನ ವಿರ್ವಹಣಾ ಕೇಂದ್ರಕ್ಕೆ ಶಂಕು