
ಈ ಕ್ರಮ ಏಕೆ?
ಗುವಾಹಟಿ (ಜೂ.14): ರಾಜ್ಯದಲ್ಲಿ ಇನ್ನು ಮುಂದೆ 18 ವರ್ಷ ಮೇಲ್ಪಟ್ಟವರಿಗೆ ಹೊಸದಾಗಿ ಆಧಾರ್ ಕಾರ್ಡ್ ವಿತರಣೆ ಮಾಡದೇ ಇರಲು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಸರ್ಕಾರ ನಿರ್ಧರಿಸಿದೆ.
ಅಕ್ರಮ ವಲಸೆಗೆ ಕಡಿವಾಣ, ಬಾಂಗ್ಲಾದೇಶೀಯರು ಸೇರಿದಂತೆ ನೆರೆಯ ದೇಶಗಳ ಜನರು ಅಕ್ರಮ ಮಾರ್ಗದಲ್ಲಿ ಭಾರತದಲ್ಲಿ ದಾಖಲೆ ಪಡೆಯದಂತೆ ತಡೆಯುವ ಉದ್ದೇಶದಿಂದ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
ಒಂದೊಮ್ಮೆ ಅಗತ್ಯವಿದ್ದಲ್ಲಿ, ಅಂಥವರಿಗೆ ಆಧಾರ್ ಕೊಡುವ ಮೊದಲು ಜಿಲ್ಲಾಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮತಿ ಪಡೆಯುವುದು ಕಡ್ಡಾಯ. ಬಳಿಕ ಸರ್ಕಾರ ಅದನ್ನು ಕೂಲಂಕಷವಾಗಿ ಪರಿಶೀಲಿಸಿ ತೀರ್ಮಾನಿಸಲಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಜತೆಗೆ, ಚಹಾ ತೋಟದ ಸಮುದಾಯ ಮತ್ತು ಪರಿಶಿಷ್ಟ ಪಂಗಡದವರಿಗೆ ಮಾತ್ರ ಮುಂದಿನ ವರ್ಷದ ಏ.1ರ ವರೆಗೆ ಆಧಾರ್ ಕಾರ್ಡ್ ವಿತರಿಸಲಾಗುವುದು ಎಂದು ತಿಳಿಸಿದರು. 18 ವರ್ಷಕ್ಕಿಂತ ಕೆಳಗಿನವರು ಆಧಾರ್ ಪಡೆಯಲು ಯಾವುದೇ ನಿರ್ಬಂಧ ಇಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ