ಅಸ್ಸಾಂ ಪ್ರವಾಹ ಮತ್ತಷ್ಟು ಗಂಭೀರ: ರಕ್ಷಣೆಗೆ ವಾಯುಪಡೆ ಸನ್ನದ್ಧ!

By Suvarna NewsFirst Published Jul 22, 2020, 4:19 PM IST
Highlights

ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ| ಅಸ್ಸಾಂ ಸೇರಿದಂತೆ ಈಶಾನ್ಯದ ಹಲವು ರಾಜ್ಯಗಳಲ್ಲಿ ಭಾರೀ ಮಳೆ| ಕೊರೋನಾತ<ಕ ನಡುವೆ ಚಿಂತೆ ಹೆಚ್ಚಿಸಿದೆ ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ(ಜು.22): ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿಯೇ ಮುಂದುವರೆದಿದೆ. ಈ ನಡುವೆ ಅಸ್ಸಾಂ ಸೇರಿದಂತೆ ಈಶಾನ್ಯದ ಹಲವು ರಾಜ್ಯಗಳು, ದೆಹಲಿ, ಹಿಮಾಚಲಪ್ರದೇಶ, ಉತ್ತರಾಖಂಡ, ಪಂಜಾಬ್‌, ಹರ್ಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ ಕೆಲ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಸ್ಸಾಂ ಜಲ ಪ್ರಳಯ: 25 ಲಕ್ಷ ಜನ ಸಂಕಷ್ಟಕ್ಕೆ!

ಹೀಗಾಗಿ ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಎದುರಾಗಬಹುದಾದ ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿ ಇರುವುದಾಗಿ ಭಾರತೀಯ ವಾಯುಪಡೆ ಹೇಳಿದೆ.

ಅಸ್ಸಾಂನಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ 24 ಜಿಲ್ಲೆಗಳ 24 ಲಕ್ಷ ಜನರು ಸಂಕಷ್ಟದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. 1 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆದಿದ್ದ ಬೆಳೆ ಜಲಾವೃತವಾಗಿದೆ. ಈಗಾಗಲೇ ಪ್ರವಾಹ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ದೂರವಾಣಿಯಲ್ಲಿ ಮಾತುಕತೆ ನಡೆಸಿ ವಿವರ ಪಡೆದುಕೊಂಡಿದ್ದಾರೆ. ಅಲ್ಲದೆ ಎಲ್ಲಾ ನೆರವಿನ ಭರವಸೆ ನೀಡಿದ್ದಾರೆ.

click me!