ಇಂದು ಪಂಚರಾಜ್ಯ ಸಮರ ಫಲಿತಾಂಶ: ಸಂಭ್ರಮಾಚರಣೆ ನಿಷೇಧ!

By Kannadaprabha NewsFirst Published May 2, 2021, 6:36 AM IST
Highlights

ಇಂದು ಪಂಚರಾಜ್ಯ ಸಮರ ಫಲಿತಾಂಶ| ಬೆಳಗ್ಗೆ 8ರಿಂದ ಎಣಿಕೆ, ಮಧ್ಯಾಹ್ನ ಸ್ಪಷ್ಟ ಚಿತ್ರಣ| ಕೋವಿಡ್‌ ಹಿನ್ನೆಲೆ: ಸಂಭ್ರಮಾಚರಣೆ ನಿಷೇಧ

ನವದೆಹಲಿ(ಮೇ. 02): ಕಳೆದ 2 ತಿಂಗಳಿಂದ ನಡೆಯುತ್ತಿದ್ದ ಪಂಚರಾಜ್ಯ ವಿಧಾನಸಭೆ ಚುನಾವಣೆ ಕಸರತ್ತು ಭಾನುವಾರ ಮುಕ್ತಾಯಗೊಳ್ಳಲಿದ್ದು, ಎಲ್ಲ ಕಡೆ ಈ ದಿನ ಮತ ಎಣಿಕೆ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಸೋಲು-ಗೆಲುವಿನ ಸ್ಪಷ್ಟಚಿತ್ರಣ ಲಭ್ಯವಾಗಲಿದೆ.

ಪಶ್ಚಿಮ ಬಂಗಾಳ: ಮೋದಿ VS ದೀದಿ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇಶದ ಮುಂದಿನ ರಾಜಕೀಯ ದಿಕ್ಸೂಚಿ ಎಂದೇ ಪರಿಗಣಿತವಾಗಿರುವ ಈ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರತಿಪಕ್ಷಗಳ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ಮತ ಎಣಿಕೆ ತೀವ್ರ ಕುತೂಹಲ ಕೆರಳಿಸಿದೆ. ಆದರೆ ಕೊರೋನಾ ಹಿನ್ನೆಲೆಯಲ್ಲಿ ಫಲಿತಾಂಶ ಪ್ರಕಟದ ಬಳಿಕ ಎಲ್ಲಾ ರೀತಿಯ ಸಂಭ್ರಮಾಚರಣೆ ಮೇಲೆ ಚುನಾವಣಾ ಆಯೋಗ ನಿಷೇಧ ಹೇರಿದೆ. ಅಲ್ಲದೆ ಮತ ಎಣಿಕೆ ಕೇಂದ್ರ ಪ್ರವೇಶಿಸುವ ಅಭ್ಯರ್ಥಿಗಳು ಮತ್ತು ಏಜೆಂಟ್‌ಗಳಿಗೆ ಕೊರೋನಾ ನೆಗೆಟಿವ್‌ ವರದಿ ಅಥವಾ ಕೊರೋನಾ 2 ಡೋಸ್‌ ಲಸಿಕೆ ಪಡೆದ ದಾಖಲೆ ಹಾಜರಿ ಕಡ್ಡಾಯ ಮಾಡಲಾಗಿದೆ.

ಬಂಗಾಳದಲ್ಲಿ ಗೆಲ್ಲೋದ್ಯಾರು?:

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ನ ಮಮತಾ ಬ್ಯಾನರ್ಜಿ ಅವರನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಶತಾಯಗತಾಯ ಯತ್ನಿಸುತ್ತಿದೆ. ಎಡರಂಗ-ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿದ್ದರೂ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಹಲವು ಚುನಾವಣೋತ್ತರ ಸಮೀಕ್ಷೆಗಳು ಮಮತಾ ಗೆಲ್ಲುತ್ತಾರೆ ಎಂದು ಹೇಳಿವೆ. ಕೆಲವು ಬಿಜೆಪಿ ಪರ ಒಲವು ವ್ಯಕ್ತಪಡಿಸಿವೆ.

ಒಟ್ಟು ಕ್ಷೇತ್ರಗಳು: 292

ಗೆಲುವಿಗೆ ಬೇಕಾದ ಮ್ಯಾಜಿಕ್ ನಂಬರ್: 147

ಕೇರಳ ಚುನಾವಣೆ: ಎಡರಂಗಕ್ಕೆ ಕಾಂಗ್ರೆಸ್‌, ಬಿಜೆಪಿ ಸವಾಲು!: ಒಂದೇ ಕ್ಲಿಕ್‌ನಲ್ಲಿ ಎಲ್ಲಾ ಸುದ್ದಿಗಳು

ಕೇರಳದಲ್ಲಿ ಮತ್ತೆ ಎರಡಂಗ?:

ಕೇರಳದಲ್ಲಿ 140 ಕ್ಷೇತ್ರಗಳಿಗೆ 597 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಸಮೀಕ್ಷೆಗಳಲ್ಲಿ ಹಾಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಮತ್ತೆ ಜಯಗಳಿಸಲಿದೆ, ಕಾಂಗ್ರೆಸ್‌ ಸೋಲಲಿದೆ, ಇಲ್ಲಿ ಅಬ್ಬರ ಮಾಡಿದ್ದ ಬಿಜೆಪಿ ನಿರೀಕ್ಷಿತ ಸ್ಥಾನ ಪಡೆಯುವಲ್ಲಿ ವಿಫಲವಾಗಲಿದೆ ಎಂದು ಸಮೀಕ್ಷೆಗಳು ನುಡಿದಿವೆ.

ಒಟ್ಟು ಕ್ಷೇತ್ರಗಳು: 140

ಗೆಲುವಿಗೆ ಬೇಕಾದ ಮ್ಯಾಜಿಕ್ ನಂಬರ್: 71

ಪುದುಚೇರಿ ಫೈಟ್: ಕೇಂದ್ರಾಡಳಿತ ಪ್ರದೇಶ ಯಾರ ಪಾಲಾಗುತ್ತೆ? ಎಲ್ಲಾ ಸುಉದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪುದುಚೇರಿಯಲ್ಲಿ ‘ರಂಗ’ನಾಯಕ?:

ಪುದುಚೇರಿಯಲ್ಲಿ ಎನ್‌ಆರ್‌ ಕಾಂಗ್ರೆಸ್‌-ಬಿಜೆಪಿ ಒಟ್ಟಾಗಿ ಸ್ಪರ್ಧಿಸಿದ್ದು, ಡಿಎಂಕೆ-ಕಾಂಗ್ರೆಸ್ಸನ್ನು ಮಣಿಸಿ ಜಯಗಳಿಸುವ ಸಾಧ್ಯತೆ ಇದೆ ಎಂದು ಸಮೀಕ್ಷೆಗಳು ಹೇಳಿವೆ. ಇದು ಸಾಕಾರವಾದರೆ ಈ ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಬಾರಿ ಬಿಜೆಪಿ ಗೆದ್ದಾಂತಾಗುತ್ತದೆ. ಇಲ್ಲಿ 30 ಸ್ಥಾನಗಳಿಗೆ ಚುನಾವಣೆ ನಡೆದಿದೆ.

ಒಟ್ಟು ಕ್ಷೇತ್ರಗಳು: 30

ಗೆಲುವಿಗೆ ಬೇಕಾದ ಮ್ಯಾಜಿಕ್ ನಂಬರ್: 16

ತಮಿಳುನಾಡಿನ ಗದ್ದುಗೆ ಯಾರಿಗೆ? ಚುನಾವಣೆ ಸಂಬಂಧಿತ ಎಲ್ಲಾ ಸುದ್ದಿಗಳು ಒಂದೇ ಕ್ಲಿಕ್‌ನಲ್ಲಿ

ತಮಿಳುನಾಡಿನಲ್ಲಿ ಡಿಎಂಕೆ ಅಲೆ?:

ತಮಿಳುನಾಡಿನ 234 ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಾಗೂ ಕನ್ಯಾಕುಮಾರಿ ಲೋಕಸಭೆ ಕ್ಷೇತ್ರಕೆ ಉಪಚುನಾವಣೆ ನಡೆದಿತ್ತು. ಸಮೀಕ್ಷೆಗಳ ಪ್ರಕಾರ ಇಲ್ಲಿ ಡಿಎಂಕೆ ಗೆಲ್ಲಲಿದ್ದು, ಅಣ್ಣಾಡಿಎಂಕೆ-ಬಿಜೆಪಿ ಕೂಟ ಭಾರೀ ಸೋಲು ಅನುಭವಿಸಲಿದೆ ಎಂದು ಸಮೀಕ್ಷೆಗಳು ಹೇಳಿವೆ.

ಒಟ್ಟು ಕ್ಷೇತ್ರಗಳು: 234

ಗೆಲುವಿಗೆ ಬೇಕಾದ ಮ್ಯಾಜಿಕ್ ನಂಬರ್: 118

ಅಸ್ಸಾಂನಲ್ಲಿ ಬಿಜೆಪಿ, ಕಾಂಗ್ರೆಸ್‌ ಫೈಟ್‌: ಚುನಾವಣಾ ಕಣ ಹೇಗಿತ್ತು? ತಿಳಿಯಿರಿ ಒಂದೇ ಕ್ಲಿಕ್‌ನಲ್ಲಿ

ಅಸ್ಸಾಂ ಮತ್ತೆ ಬಿಜೆಪಿಗೆ?:

ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಹುದು. ಕಾಂಗ್ರೆಸ್‌ ಸೋಲಬಹುದು ಎಂದು ಸಮೀಕ್ಷೆಗಳು ನುಡಿದಿವೆ. 126 ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ.

ಒಟ್ಟು ಕ್ಷೇತ್ರಗಳು: 126

ಗೆಲುವಿಗೆ ಬೇಕಾದ ಮ್ಯಾಜಿಕ್ ನಂಬರ್: 64

click me!