
ನವದೆಹಲಿ(ಜು.21): ದೇಶದಲ್ಲಿ ಅಗತ್ಯವಿರುವಷ್ಟುಕೊರೋನ ಲಸಿಕೆ ಲಭ್ಯವಿದೆ. ಆದರೆ ಲಸಿಕೆ ವಿಚಾರದಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿರುವುದು ದುರದೃಷ್ಟಕರ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಿಡಿಕಾರಿದ್ದಾರೆ.
ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಲಸಿಕೆ ಲಭ್ಯತೆ ಬಗ್ಗೆ ಯಾರಿಗೂ ಆತಂಕ ಬೇಡ. ನಮಗೆ ಬೇಕಾದಷ್ಟು ಲಸಿಕೆ ದಾಸ್ತಾನು ಇದೆ ಎಂದು ಸ್ಪಷ್ಟಪಡಿಸಿದರು. ಅಲ್ಲದೇ, ಜನರಿಗೆ ಪರಿಣಾಮಕಾರಿಯಾಗಿ ಲಸಿಕೆ ತಲುಪುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಪಕ್ಷದ ಮುಖಂಡರಿಗೆ ಸೂಚನೆ ನೀಡಿದರು.
ರಾಷ್ಟ್ರದ ರಾಜಧಾನಿಯಲ್ಲಿ ಶೇ.20ರಷ್ಟುಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ಸಿಗದಿರುವುದು ದುರದೃಷ್ಟಕರ ಎಂದು ದಿಲ್ಲಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಜನರು ಬಿಜೆಪಿಯನ್ನು ಎರಡನೇ ಬಾರಿಯೂ ದಾಖಲೆಯ ಅಂತರದಲ್ಲಿ ಅಧಿಕಾರಕ್ಕೆ ತಂದಿದ್ದನ್ನು ಕೇವಲ 2-3 ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ಗೆ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ . ದಾಖಲೆಯ ಅಂತರದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಅನುಭವಿಸಿದ ಕಷ್ಟಅವರಿಗೆ ಅರ್ಥವಾಗುವುದಿಲ್ಲ ಎಂದು ಟೀಕಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ