ಕಂದಕಕ್ಕೆ ಬಿದ್ದ ಬಸ್: ಕನಿಷ್ಠ 20 ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ

Published : Jun 20, 2019, 07:12 PM IST
ಕಂದಕಕ್ಕೆ ಬಿದ್ದ ಬಸ್: ಕನಿಷ್ಠ 20 ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ

ಸಾರಾಂಶ

50 ಜನರಿದ್ದ ಖಾಸಗಿ ಬಸ್‌ವೊಂದು 500 ಮೀಟರ್ ಆಳವಿರುವ ಕಂದಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಸುಮಾರು 20 ಪ್ರಯಾಣಿಕರು ಸಾವನ್ನಪ್ಪಿದ್ರೆ, 25ಕ್ಕೂ ಜನರು ಗಾಯಗೊಂಡಿದ್ದಾರೆ.

ಕುಲು(ಹಿಮಾಚಲ ಪ್ರದೇಶ), [ಜೂ.20]: ಖಾಸಗಿ ಬಸ್‌ವೊಂದು​ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 20 ಮಂದಿ ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು  ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಬಂಜಾರ ಪ್ರದೇಶದಲ್ಲಿ ಗುರುವಾರ ನಡೆದಿದೆ.

50 ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಖಾಸಗಿ ಬಸ್, 500 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದರಿಂದ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು,ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಲುವೆಗೆ ಉರುಳಿದ ವ್ಯಾನ್: 22 ಮಂದಿ ರಕ್ಷಣೆ, 7 ಮಕ್ಕಳು ನಾಪತ್ತೆ!

 ಬಸ್ ಬಂಜಾರ್ ದಿಂದ ಗಡಗುಶಾನಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 15 ಮೃತ ದೇಹಗಳನ್ನು ಕಂದಕದಿಂದ ಹೊರತೆಗೆಯಲಾಗಿದ್ದು, ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇನ್ನು ಸ್ಥಳಕ್ಕೆ 5 ಆ್ಯಂಬುಲೆನ್ಸ್ ಸಮೇತ 7 ವೈದ್ಯರ ತಂಡ ಆಗಮಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
click me!

Recommended Stories

ಥೈಲ್ಯಾಂಡ್‌ನಿಂದ ಚೀಲದಲ್ಲಿ 48 ವಿಷಕಾರಿ ಹಾವನ್ನು ತಂದ ಪ್ರಯಾಣಿಕ; ಇಲ್ಲಿವೆ ಫೋಟೋಗಳು
Bride Calls Off Wedding: ಮದುವೆ ಮಂಟಪದಲ್ಲೇ ವರನ ಅಸಲಿಯತ್ತು ಕಂಡುಹಿಡಿದ ವಧು! ಮದುವೆ ನಿಂತೋಯ್ತು!