
ಲಖನೌ(ಮೇ.27): ವೈದ್ಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಉತ್ತರ ಪ್ರದೇಶ ಸಿದ್ಧಾರ್ಥನಗರ ಜಿಲ್ಲೆಯ ಗ್ರಾಮದ 20 ಜನರಿಗೆ ಮೊದಲ ಮತ್ತು 2ನೇ ಡೋಸ್ ವೇಳೆ ಬೇರೆ ಬೇರೆ ಕಂಪನಿಗಳ ಲಸಿಕೆ ನೀಡಿರುವುದು ಬೆಳಕಿಗೆ ಬಂದಿದೆ.
ಇಲ್ಲಿನ ಬದಿನಿ ಪ್ರಾಥಮಿಕ ಕೇಂದ್ರದಲ್ಲಿ ಏ.1ರಂದು ಮೊದಲ ಡೋಸ್ ಆಗಿ ಕೋವಿಶೀಲ್ಡ್ ಪಡೆದ 20 ಜನರಿಗೆ ಮೇ 14ರಂದು 2ನೇ ಡೋಸ್ ವೇಳೆ ಕೋವ್ಯಾಕ್ಸಿನ್ ನೀಡಲಾಗಿದೆ.
ಸದ್ಯಕ್ಕೆ ಲಸಿಕೆ ಪಡೆದ ಎಲ್ಲರೂ ಆರೋಗ್ಯವಾಗಿದ್ದಾರೆ. ಆದಾಗ್ಯೂ ಪ್ರಮಾದ ಸಂಬಂಧ ಜಿಲ್ಲಾ ಮುಖ್ಯಮಂತ್ರಿಗಳ ಕಚೇರಿ ತನಿಖೆಗೆ ಆದೇಶಿಸಿದೆ.
'ಕೊರೋನಾ ಗೆಲ್ಲಲು ಇನ್ನೆರಡು ವರ್ಷ : ಜೈವಿಕ ಲಸಿಕೆ ಜತೆ ಸಾಮಾಜಿಕ ಲಸಿಕೆ ಬೇಕು'
ದೆಹಲಿಗೆ ಶೀಘ್ರವೇ ಸ್ಪುಟ್ನಿಕ್-5 ಲಸಿಕೆ:ಸಿಎಂ ಕೇಜ್ರಿವಾಲ್
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೋವಿಡ್ ಲಸಿಕೆ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ರಷ್ಯಾದ ಸ್ಪುಟ್ನಿಕ್-5 ಲಸಿಕೆ ಕಂಪನಿ ನಗರಕ್ಕೆ ಲಸಿಕೆ ಪೂರೈಸಲಿದೆ. ಆದರೆ ಎಷ್ಟುಪ್ರಮಾಣದ ಲಸಿಕೆ ಎಂದು ಇನ್ನೂ ನಿರ್ಧಾರವಾಗಿಲ್ಲ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ತಿಳಿಸಿದ್ದಾರೆ. ಇದೇ ವೇಳೆ ರಾಜ್ಯಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಿಂದ ಲಸಿಕೆ ಸಂಗ್ರಹ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಸೂಚಿಸಿದೆ.
ಆದರೆ ಈವರೆಗೂ ಯಾವುದೇ ರಾಜ್ಯಗಳಿಗೂ ಕೊಂಡುಕೊಳ್ಳಲು ಆಗಿಲ್ಲ. ಕೋವಿಡ್ ನಿರ್ವಹಣೆ ಕೇಂದ್ರ ಮತ್ತು ರಾಜ್ಯಗಳ ಜವಾಬ್ದಾರಿ. ಆದರೆ ಕೇಂದ್ರ ತನ್ನ ಹೊಣೆಗಾರಿಕೆಯನ್ನು ರಾಜ್ಯಗಳ ಮೇಲೆ ಹಾಕುತ್ತಿರುವುದು ತಪ್ಪು. ಹಾಗಾಗಿ ಕೇಂದ್ರ ಸರ್ಕಾರ ಲಸಿಕೆಯ ತುರ್ತು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ