ಅತೀಕ್ ಅಹ್ಮದ್ ಹತ್ಯೆ ಕೇಸ್‌: ತನಿಖೆಗೆ 3 ಸದಸ್ಯರ ನ್ಯಾಯಾಂಗ ಆಯೋಗ ರಚನೆಗೆ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

By BK Ashwin  |  First Published Apr 16, 2023, 9:05 AM IST

ಈ ಹತ್ಯೆಗೆ ಸಂಬಂಧಿಸಿದಂತೆ ಕನಿಷ್ಠ ಮೂವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ದಾಳಿಕೋರರನ್ನು ಲವಲೇಶ್ ತಿವಾರಿ, ಸನ್ನಿ ಮತ್ತು ಅರುಣ್ ಮೌರ್ಯ ಎಂದು ಗುರುತಿಸಲಾಗಿದೆ. ಈ ಮೂವರೂ ಮಾಧ್ಯಮದವರಂತೆ ಪೋಸ್ ಕೊಟ್ಟರು ಮತ್ತು ನೆಲಕ್ಕೆ ಬಿದ್ದ ಅತೀಕ್‌ ಅಹ್ಮದ್ ಮತ್ತು ಅವರ ಸಹೋದರನ ಮೇಲೆ ಸಮೀಪದಿಂದ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ. ಪೊಲೀಸರು ಶೀಘ್ರದಲ್ಲೇ ದಾಳಿಕೋರರನ್ನು ಹತ್ತಿಕ್ಕಿದ್ದು, ಮೂಲಗಳ ಪ್ರಕಾರ 15 ಜನರ ತಂಡ ಸ್ಥಳಕ್ಕೆ ತಲುಪಿದೆ ಎಂದು ತಿಳಿದುಬಂದಿದೆ.


ಲಖನೌ (ಏಪ್ರಿಲ್ 16, 2023): ಮಾಫಿಯಾ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಸಹೋದರ ಅಶ್ರಫ್ ಅಹ್ಮದ್‌ನನ್ನು ಶನಿವಾರ ರಾತ್ರಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಈ ಸಂಬಂಧ ಮೂವರು ಸದಸ್ಯರ ನ್ಯಾಯಾಂಗ ತನಿಖಾ ಆಯೋಗವನ್ನು ರಚಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅತೀಕ್ ಮತ್ತು ಅಶ್ರಫ್ ಹತ್ಯೆಯಾಗಿದ್ದು ಹೀಗೆ..
ಶನಿವಾರ ರಾತ್ರಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ವೈದ್ಯಕೀಯ ತಪಾಸಣೆಗಾಗಿ ಪ್ರಯಾಗ್‌ರಾಜ್ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯುತ್ತಿದ್ದಾಗ ಅವರು ಮಾಧ್ಯಮಗಳೊಂದಿಗೆ ಸಂವಾದ ನಡೆಸುತ್ತಿದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಪಾಯಿಂಟ್ ಬ್ಲಾಂಕ್ ರೇಂಜ್‌ನಿಂದ ಗ್ಯಾಂಗ್‌ಸ್ಟರ್‌ಗಳ ಮೇಲೆ ಗುಂಡು ಹಾರಿಸಲಾಗಿದೆ. ಅತೀಕ್ ಮತ್ತು ಅಶ್ರಫ್ ಮಾಧ್ಯಮದವರೊಂದಿಗೆ ಸಂವಾದ ನಡೆಸುತ್ತಿದ್ದಾಗ ಈ ದಾಳಿ ನಡೆದಿದ್ದು, ಇಡೀ ಘಟನೆ ಟಿವಿ ಸುದ್ದಿ ವಾಹಿನಿಗಳ ಕ್ಯಾಮರಾಗಳಲ್ಲಿ ಲೈವಾಗಿ ಸೆರೆಹಿಡಿಯಲಾಗಿದೆ.

Tap to resize

Latest Videos

ಇದನ್ನು ಓದಿ: ಉತ್ತರ ಪ್ರದೇಶದಲ್ಲಿ ಮಾಫಿಯಾ ಗಡಗಡ, ಪೊಲೀಸ್ ಕಸ್ಟಡಿಯಲ್ಲಿದ್ದ ಅತೀಕ್ ಅಹಮ್ಮದ್ ಹತ್ಯೆ!

3 ಜನರನ್ನು ಬಂಧಿಸಲಾಗಿದೆ
ಇನ್ನು, ಈ ಹತ್ಯೆಗೆ ಸಂಬಂಧಿಸಿದಂತೆ ಕನಿಷ್ಠ ಮೂವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ದಾಳಿಕೋರರನ್ನು ಲವಲೇಶ್ ತಿವಾರಿ, ಸನ್ನಿ ಮತ್ತು ಅರುಣ್ ಮೌರ್ಯ ಎಂದು ಗುರುತಿಸಲಾಗಿದೆ. ಈ ಮೂವರೂ ಮಾಧ್ಯಮದವರಂತೆ ಪೋಸ್ ಕೊಟ್ಟರು ಮತ್ತು ನೆಲಕ್ಕೆ ಬಿದ್ದ ಅತೀಕ್‌ ಅಹ್ಮದ್ ಮತ್ತು ಅವರ ಸಹೋದರನ ಮೇಲೆ ಸಮೀಪದಿಂದ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ. ಪೊಲೀಸರು ಶೀಘ್ರದಲ್ಲೇ ದಾಳಿಕೋರರನ್ನು ಹತ್ತಿಕ್ಕಿದ್ದು, ಮೂಲಗಳ ಪ್ರಕಾರ 15 ಜನರ ತಂಡ ಸ್ಥಳಕ್ಕೆ ತಲುಪಿದೆ ಎಂದು ತಿಳಿದುಬಂದಿದೆ.

ಸಂವೇದನಾಶೀಲ ಹತ್ಯೆಯ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದ್ದರಿಂದ ಅಹ್ಮದ್ ಮತ್ತು ಅಶ್ರಫ್ ಅವರ ಮೃತದೇಹಗಳನ್ನು ಸ್ಥಳದಿಂದ ತೆಗೆದುಕೊಂಡು ಹೋಗಲಾಯಿತು. ಇನ್ನು, ಈ ವೇಳೆ ಪತ್ರಕರ್ತರೊಬ್ಬರು ಕೆಳಗೆ ಬಿದ್ದಿದ್ದರಿಂದ ಗಾಯಗೊಂಡಿದ್ದಾರೆ ಮತ್ತು ಕಾನ್‌ಸ್ಟೇಬಲ್‌ಗೆ ಬುಲೆಟ್ ಗಾಯವಾಗಿದೆ’’ ಎಂದು ಪ್ರಯಾಗ್‌ರಾಜ್ ಪೊಲೀಸ್ ಕಮಿಷನರ್ ರಮಿತ್ ಶರ್ಮಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಉಮೇಶ್‌ ಪಾಲ್‌ ಕಿಡ್ನ್ಯಾಪ್‌ ಕೇಸ್‌: ಯುಪಿ ಗ್ಯಾಂಗ್‌ಸ್ಟರ್‌ ಅತೀಕ್ ಅಹಮದ್‌ಗೆ ಜೀವಾವಧಿ ಶಿಕ್ಷೆ

ಘಟನೆ ನಡೆದಾಗ ಅಲ್ಲಿದ್ದ ಮೂವರು ಪೊಲೀಸ್ ಪೇದೆಗಳ ವಿಚಾರಣೆ ಆರಂಭವಾಗಿದ್ದು, ಮತ್ತೊಬ್ಬನಿಗೆ ಗಾಯಗಳಾಗಿವೆ. ಈ ಮಧ್ಯೆ, ಪ್ರಯಾಗ್‌ರಾಜ್‌ನ ಹಲವಾರು ಪ್ರದೇಶಗಳಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. 2005ರ ಉಮೇಶ್ ಪಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗಾಗಿ ಇಬ್ಬರನ್ನೂ ಪ್ರಯಾಗ್‌ರಾಜ್‌ಗೆ ಕರೆತರಲಾಗಿತ್ತು.

ಕಾನೂನು - ಸುವ್ಯವಸ್ಥೆ ಕಾಪಾಡುವಂತೆ ಯೋಗಿ ಸೂಚನೆ
ಇನ್ನೊಂದೆಡೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅತೀಕ್ ಅಹ್ಮದ್ ಮತ್ತು ಸಹೋದರ ಅಶ್ರಫ್ ಅವರ ಹತ್ಯೆ ನಂತರ ತಡರಾತ್ರಿ ಸಭೆ ನಡೆಸಿದ್ದಾರೆ. ಈ ವೇಳೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಂತೆ ರಾಜ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಎನ್‌ಕೌಂಟರ್: ಪುತ್ರನ ನನೆದು ಕೋರ್ಟ್‌ನಲ್ಲೇ ಗಳಗಳನೇ ಅತ್ತ ಗ್ಯಾಂಗ್‌ಸ್ಟಾರ್ ಅತೀಕ್

click me!