
ನವದೆಹಲಿ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿ ಕೇಸರಿ ಶಾಲಿಗೆ ನಿರ್ಬಂಧಿಸಿರುವ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ಹರಿಹಾಯ್ದಿದೆ. ಇದು ಔರಂಗಜೇಬ್ ಸರ್ಕಾರ. ಮತಬ್ಯಾಂಕ್ ಮತ್ತು ತುಷ್ಟೀಕರಣ ರಾಜಕಾರಣಕ್ಕಾಗಿ ಸರ್ಕಾರ ಇಂಥ ಆದೇಶ ಹೊರಡಿಸಿದೆ ಎಂದು ಕಿಡಿಕಾರಿದೆ.
ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಅನುಮತಿಸದಿದ್ದರೂ ಈ ಸರ್ಕಾರ ಶಿಕ್ಷಣ ಸಂಸ್ಥೆಯೊಳಗೆ ಹಿಜಾಬ್ ಧರಿಸಲು ಅವಕಾಶ ನೀಡುತ್ತದೆ. ಆದರೆ, ಕೇಸರಿ ಶಾಲಿಗೆ ನಿಷೇಧ ಹೇರಿದೆ. ಇದು ಸಿದ್ದರಾಮಯ್ಯ ಸರ್ಕಾರದ ಮನಸ್ಥಿತಿ. ಇದು ಔರಂಗಜೇಬ್ ಸರ್ಕಾರ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಆರೋಪಿಸಿದ್ದಾರೆ.
ಈ ಸರ್ಕಾರ ತುಷ್ಟೀಕರಣ ರಾಜಕಾರಣಕ್ಕಾಗಿ ಯಾವ ಹಂತಕ್ಕೆ ಬೇಕಿದ್ದರೂ ಇಳಿಯಬಹುದು. ಈ ಹಿಂದೆಯೂ ಸನಾತನ ಧರ್ಮವನ್ನು ಈ ಸರ್ಕಾರ ನಿಂದನೆ ಮಾಡಿತ್ತು. ಅವರು ಹಿಂದೆಯೂ ಹಿಂದೂ ಉಗ್ರವಾದ ಪದ ಬಳಸಿ ಹಿಂದೂ ವಿರೋಧಿ ನಿಲುವು ಪ್ರದರ್ಶಿಸಿದ್ದರು. ತಮಿಳುನಾಡಿನಲ್ಲಿ ಕಾಂಗ್ರೆಸ್ ನಾಯಕರು ಯಾವ ರೀತಿ ಸನಾತನ ಧರ್ಮವನ್ನು ಅವಮಾನಿಸಿದ್ದಾರೆ ಎಂಬುದನ್ನು ನಾವು ನೋಡಿದ್ದೇವೆ. ಸಿದ್ದರಾಮಯ್ಯ ಸರ್ಕಾರವು ತಾರತಮ್ಯ ನೀತಿ ಅನುಸರಿಸುತ್ತಿದೆ. ಈ ಹಿಂದೆ ಈ ಸರ್ಕಾರವು ಮುಸ್ಲಿಂ ಕೇಂದ್ರಿತ ಬಜೆಟ್ ಮತ್ತು ಮುಸ್ಲಿಂ ಕಾಲನಿಗಳನ್ನೂ ಘೋಷಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ