
ನವದೆಹಲಿ(ಡಿ.07)ಇಸ್ಲಾಮಿಕ್ ಬಂಡಾಯ ಗುಂಪು ಸಿರಿಯಾ ಸರ್ಕಾರದ ವಿರುದ್ಧ ದಂಗೆದ್ದಿದೆ. ಇದರ ಪರಿಣಾಮ ಸಿರಿಯಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ತೀವ್ರ ಆತಂಕದ ವಾತಾವರಣ ಸೃಷ್ಟಿಯಾಗಿರುವ ಕಾರಣ ಭಾರತೀಯ ವಿದೇಶಾಂಗ ಇಲಾಖೆ ಡಿಸೆಂಬರ್ 6ರ ಮಧ್ಯರಾತ್ರಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸಿರಿಯಾಗೆ ಅಥವಾ ಸಿರಿಯಾ ಮೂಲಕ ಯಾರೂ ಪ್ರಯಾಣಿಸಬೇಡಿ ಎಂದು ಎಚ್ಚರಿಸಿದೆ. ಇದರ ಜೊತೆಗೆ ಸಿರಿಯಾಲ್ಲಿರುವ ಭಾರತೀಯ ನಾಗರೀಕರು ಈ ತಕ್ಷಣವೇ ಹೊರಟುಬರಲು ಸೂಚಿಸಿದೆ. ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ತಕ್ಷಣವೆ ಹೊರಟು ಬರಲು ಸೂಚನೆ ನೀಡಲಾಗಿದೆ.
ಸಿರಿಯಾದಲ್ಲಿರುವ ಭಾರತೀಯ ನಾಗರೀಕರು ಭಾರತದ ರಾಯಭಾರ ಕಚೇರಿ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರಲು ಸೂಚಿಸಿದೆ. ಸುರಕ್ಷತೆಯ ಸ್ಥಳದಲ್ಲಿರುವಂತೆ ಎಚ್ಚರಿಸಿದೆ. ಈ ತಕ್ಷಣಕ್ಕೆ ಹೊರಡಲು ಸಾಧ್ಯವಾಗುವ ಭಾರತೀಯರಿಗೆ ವಾಣಿಜ್ಯ ವಿಮಾನಗಳು ಲಭ್ಯವಿದೆ. ಈ ವಿಮಾನದ ಮೂಲಕ ಭಾರತಕ್ಕೆ ವಾಪಾಸ್ ಆಗುವಂತೆ ವಿದೇಶಾಂಗ ಇಲಾಖೆ ಮಾರ್ಗಸೂಚಿ ಬಿಡುಡೆ ಮಾಡಿದೆ. ಯಾರಿಗ ತಕ್ಷಣಕ್ಕೆ ಹೊರಡಲು ಸಾಧ್ಯವಾಗುವುದಿಲ್ಲ, ಅವರು ಭಾರತೀಯ ರಾಯಭಾರ ಕಚೇರಿ ಸಂಪರ್ಕಿಸಿ ಸಲಹೆ ಪಾಲಿಸಲು ಸೂಚಿಸಿದೆ. ಇದೇ ವೇಳೆ ಸಿರಿಯಾದ ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಹಾಯವಾಣಿ ಸಂಖ್ಯೆಯನ್ನು ನೀಡಲಾಗದೆ. ಈ ಸಂಖ್ಯೆಗೆ +963 993385973 ಕರೆ ಮಾಡಿ ಸಲಹೆ ಪಡೆಯಲು ಸೂಚಿಸಿದೆ. ಇನ್ನು hoc.damascus@mea.gov.in ಇಮೇಲ್ ಮೂಲಕವೂ ಸಂಪರ್ಕಿಸಲು ಕೋರಲಾಗಿದೆ.
ಲೆಬನಾನ್, ಸಿರಿಯಾ ದೇಶದಲ್ಲಿ ಹಿಜ್ಜುಲ್ಲಾ ಉಗ್ರರ ಪೇಜರ್‌ಗಳು ಏಕಕಾಲಕ್ಕೆ ಬ್ಲಾಸ್ಟ್: ಏನಿದು ಪೇಜರ್ ದಾಳಿ?
ಸಿರಿಯಾದಲ್ಲಿ ರಷ್ಯಾ ಹಾಗೂ ಇರಾನ್ ಬೆಂಬಲಿತ ಬಶರ್ ಅಲ್ ಅಸ್ಸಾದ್ ನೇತೃತ್ವದ ಸರ್ಕಾರವಿದೆ. ಆದರೆ ಈ ಸರ್ಕಾರ ವಿರುದ್ಧ ಸ್ಥಳೀಯ ಇಸ್ಲಾಮಿಕ್ ಭಯೋತ್ಪಾದಕ ಗುಂಪು ತಿರುಗಿ ಬಿದ್ದಿದೆ. ಟರ್ಬಿ ಬೆಂಬಿಲಿತ ಈ ಇಸ್ಲಾಮಿಕ್ ಬಂಡಾಯ ಗುಂಪು ಕಳೆದ ವಾರ ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ಕಿತ್ತೆಸೆಯುವ ಎಚ್ಚರಿಕೆ ನೀಡಿತ್ತು. ಸಿರಿಯಾದ ಹಲವು ನಗರಗಳ ಮೇಲೆ ಈ ಗುಂಪು ದಾಳಿ ನಡೆಸಿದೆ. ಭಾರಿ ಹಿಂಸಾಚಾರದ ಮೂಲಕ ನಗರಗಳನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಸರ್ಕಾರದ ಪ್ರಮುಖ ಕೇಂದ್ರಗಳನ್ನು ಟಾರ್ಗೆಟ್ ಮಾಡಿದ್ದಾರೆ.
ಈಗಾಗಲೇ ಹಲವು ನಗರಗಳು ಈ ಭಯೋತ್ಪಾದಕರ ಕೈಸೇರಿದೆ. ಅಲೆಪ್ಪೋ, ಹಮಾ ಸೇರಿದಂತೆ ಕೆಲ ನಗರಗಳು ಇದೀಗ ಬಂಡಾಯ ಗುಂಪಿನ ಕೈಯಲ್ಲಿದೆ. ಇಲ್ಲಿ ಹಿಂಸಾಚಾರ ಹೆಚ್ಚಾಗಿದೆ. ಈ ಗುಂಪು ಡಮಾಸ್ಕಸ್ ಸೇರಿದಂತೆ ಕೆಲ ನಗರಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಹಲವು ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಅಧ್ಯಕ್ಷ ಬಶರ್ ಅಲ್ ಆಡಳಿತ ಕೇಂದ್ರಗಳಿಂದ ಕೇವಲ 5 ರಿಂದ 10 ಕಿಲೋಮೀಟರ್ ದೂರದ ವರೆಗೂ ಈ ಬಂಡಾಯ ಗುಂಪು ಹಿಡಿತ ಸಾಧಿಸಿದೆ.
ಬಶರ್ ಅಲ್ ಅಸ್ಸಾದ್ ಕಿತ್ತೆಸೆಯಲು ಹಲವು ಹೋರಾಟಗಳು ನಡೆಯುತ್ತಿದೆ. ಇದಕ್ಕೆ ಬಂಡಾಯ ಗುಂಪು, ಇಸ್ಲಾಮಿಕ್ ಭಯೋತ್ಪಾದಕ ಗುಂಪುಗಳು ಸೇರಿಕೊಂಡಿದೆ. ಸಂಪೂರ್ಣ ಸಿರಿಯಾ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಈ ಬಂಡಾಯ ಹಾಗೂ ಇಸ್ಲಾಮಿಕ್ ಬಯೋತ್ಪಾದಕ ಗುಂಪುಗಳು ಸಜ್ಜಾಗಿದೆ. ಹೀಗಾಗಿ ಸಿರಿಯಾದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ. ಇದೇ ಕಾರಣದಿಂದ ಭಾರತೀಯ ವಿದೇಶಾಂಗ ಇಲಾಖೆ, ಎಚ್ಚರಿಕೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸಿರಿಯಾದಲ್ಲಿ ಭಾರತೀಯ ಸಂಖ್ಯೆ ಕಡಿಮೆ ಇದೆ. ಇನ್ನು ಸಿರಿಯಾದಲ್ಲಿ ಪದೇ ಪದೇ ಈ ರೀತಿಯ ದಾಳಿ ಸಂಭವಿಸುತ್ತಲೇ ಇರುತ್ತದೆ. ಕಳೆದ ಹಲವು ವರ್ಷಗಳಲ್ಲಿ ಇಸ್ಲಾಮಿಕ್ ಭಯೋತ್ಪಾದಕರು ಸಿರಿಯಾದಲ್ಲಿ ನಡೆಸಿದ ಕೃತ್ಯಗಳು ಗೌಪ್ಯವಾಗಿ ಉಳಿದಿಲ್ಲ. ಐಸಿಸ್ ಸೇರಿದಂತೆ ಇಸ್ಲಾಮಿಕ್ ಭಯೋತ್ಪಾದಕ ಸಂಘಟನೆಗಳು ಸಿರಿಯಾ ಮಾತ್ರವಲ್ಲ, ವಿಶ್ವದ ಹಲವು ಭಾಗದಲ್ಲಿ ಈ ರೀತಿಯ ದಾಳಿ ಪ್ರಯತ್ನ ಮಾಡಿದೆ. ಇದೀಗ ಸಿರಿಯಾ ಸರ್ಕಾರವೇ ಪತನದ ಅಂಚಿನಲ್ಲಿದೆ. ಹೀಗೆ ಮುಂದುವರಿದರೆ ಸಿರಿಯಾ ಬಂಡಾಯ ಹಾಗೂ ಇಸ್ಲಾಮಿಕ್ ಭಯೋತ್ಪಾದಕರ ಕೈಸೇರಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ