ಮೊದಲ ಆಮಂತ್ರಣ ಪತ್ರ ಸ್ವೀಕರಿಸಿ ಇದು ಶ್ರೀರಾಮನ ಇಚ್ಚೆ ಎಂದ ಅಯೋಧ್ಯೆ ವಿವಾದ ದಾವೆದಾರ ಇಕ್ಬಾಲ್ ಅನ್ಸಾರಿ!

By Suvarna News  |  First Published Aug 3, 2020, 4:18 PM IST

ಅಯೋಧ್ಯೆ ನಗರ ತಳಿರು ತೋರಣಗಳಿಂದ ಕಂಗೊಳಿಸುತ್ತಿದೆ. ಶತಮಾನದ ವಿವಾದ ಬಗೆಹರಿದು ಇದೀಗ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ತಯಾರಿ ಆರಂಭಗೊಂಡಿದೆ. ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ಭೂಮಿ ಪೂಜೆ ನೇರವೇರಿಸಲಿದ್ದಾರೆ. 170 ರಿಂದ 180 ಗಣ್ಯರು ಈ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಭೂಮಿ ಪೂಜೆಯ ಮೊದಲ ಆಮಂತ್ರಣ ಪತ್ರಿಕೆಯನ್ನು ಅಯೋಧ್ಯೆ ಭೂಮಿ ವಿವಾದ ದಾವೆದಾರ ಇಕ್ಬಾಲ್ ಅನ್ಸಾರಿಗೆ ನೀಡಲಾಗಿದೆ. 


ನವದೆಹಲಿ(ಆ.03): ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಸಕಲ ಸಿದ್ಧತೆ ಆರಂಭಗೊಂಡಿದೆ. ಆಗಸ್ಟ್ 5 ರಂದು ಭೂಮಿ ಪೂಜೆಯೊಂದಿಗೆ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸುಮಾರು 180 ಗಣ್ಯರು ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಭೂಮಿ ಪೂಜೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹಂಚಲಾಗಿದೆ. ವಿಶೇಷ ಅಂದರೆ ಭೂಮಿ ಪೂಜೆಯ ಮೊದಲ ಆಮಂತ್ರಣ ಪತ್ರಿಕೆಯನ್ನು ಆಯೋಧ್ಯೆ ಭೂಮಿ ವಿವಾದ ದಾವೆದಾರ ಇಕ್ಬಾಲ್ ಅನ್ಸಾರಿ ಸ್ವೀಕರಿಸಿದ್ದಾರೆ.

ರಾಮ ಮಂದಿರ ಭೂಮಿ ಪೂಜೆ ಆಮಂತ್ರಣ ಪತ್ರಿಕೆ ವೈರಲ್: ಮೋದಿ ಜೊತೆ ಮೂವರ ಹೆಸರು!

Latest Videos

undefined

ಭೂಮಿ ಪೂಜೆಯ ಮೊದಲ ಆಮಂತ್ರಣ ಪತ್ರಿಕೆ ಪತ್ರಿಕೆ ಪಡೆದ ಇಕ್ಬಾಲ್ ಅನ್ಸಾರಿ ಸಂತಸ ವ್ಯಕ್ತಪಡಿಸಿದ್ದಾರೆ. ಇದು ಶ್ರೀರಾಮ ಇಚ್ಚೆ. ನಾನೇ ಮೊದಲ ಆಮಂತ್ರಣ ಪತ್ರಿಕೆ ಸ್ವೀಕರಿಸುವುದು ಮತ್ತಷ್ಟು ಸಂತಸ ತಂದಿದೆ ಎಂದಿದ್ದಾರೆ.  

ಭೂಮಿಪೂಜೆ ದೂರದರ್ಶನದಲ್ಲಿ ನೇರ ಪ್ರಸಾರ!

ಆಗಸ್ಟ್ 5 ರಂದು ಭೂಮಿ ಪೂಜೆಯಲ್ಲಿ ಪ್ರಧಾನಿ ಮೋದಿ ಅಡಿಗಲ್ಲು ಹಾಕುವ ಮೂಲಕ ಶ್ರೀರಾಮನ ಮಂದಿರ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ. ಮೋದಿ ಸೇರಿದಂತೆ, ಸ್ವಯಂ ಸೇವಕ ಸಂಘ(RSS) ಮುಖ್ಯಸ್ಥ ಮೋಹನ್ ಭಾಗ್‌ವತ್, ಉತ್ತರ ಪ್ರದೇಶ ಮುಖ್ಯಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರು ಪಾಲ್ಗೊಳ್ಳುತ್ತಿದ್ದಾರೆ. ಇನ್ನು ರಾಮ ಜನ್ಮ ಭೂಮಿ ಹೋರಾಟದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಬಿಜೆಪಿ ಹಿರಿಯ ನಾಯಕರಾದ ಎಲ್‌.ಕೆ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ ಕೂಡ ವಿಶೇಷ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ರಾಮ ಮಂದಿರಕ್ಕಾಗಿ ಹೋರಾಡಿದ ಗಣ್ಯರು ಸೇರಿದಂತೆ ಕೆಲವೇ ಕೆಲವು ಗಣ್ಯರಿಗೆ ಆಮಂತ್ರಣ ಪತ್ರಿಕೆ ನೀಡಲು ಪಟ್ಟಿ ಮಾಡಲಾಗಿತ್ತು. ಈ ಪಟ್ಟಿಯಲ್ಲಿ 200ಕ್ಕಿಂತ ಹೆಚ್ಚು ಹೆಸರು ದಾಖಲಾಗಿತ್ತು. ಕೊರೋನಾ ವೈರಸ್ ಕಾರಣ 180 ಮಂದಿಯನ್ನು ಮಾತ್ರ ಆಹ್ವಾನಿಸಲಾಗಿದೆ. 

click me!