ಶ್ರೀರಾಮನ ನೆಲೆ ವಾಸ್ತು ಶಿಲ್ಪದ ಅದ್ಭುತ ಸೆಲೆ: 32 ಮೆಟ್ಟಿಲು ಏರಿದರೆ ರಾಮದರ್ಶನ

Published : Jan 23, 2024, 08:56 AM ISTUpdated : Jan 23, 2024, 10:16 AM IST
ಶ್ರೀರಾಮನ ನೆಲೆ ವಾಸ್ತು ಶಿಲ್ಪದ ಅದ್ಭುತ ಸೆಲೆ:  32 ಮೆಟ್ಟಿಲು ಏರಿದರೆ ರಾಮದರ್ಶನ

ಸಾರಾಂಶ

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಂಡಿರುವ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ದೇಗುಲ ನವಯುಗದ ವಾಸ್ತುಶಿಲ್ಪದ ಅದ್ಭುತ ಎಂಬ ಹಿರಿಮೆ ಪಡೆದುಕೊಂಡಿದೆ. ಹಲವಾರು ತಾಂತ್ರಿಕ ಸವಾಲುಗಳನ್ನು ಮೆಟ್ಟಿ ಈ ದೇಗುಲ ತಲೆ ಎತ್ತಿರುವುದು ವಿಶೇಷ.

ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಂಡಿರುವ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ದೇಗುಲ ನವಯುಗದ ವಾಸ್ತುಶಿಲ್ಪದ ಅದ್ಭುತ ಎಂಬ ಹಿರಿಮೆ ಪಡೆದುಕೊಂಡಿದೆ. ಹಲವಾರು ತಾಂತ್ರಿಕ ಸವಾಲುಗಳನ್ನು ಮೆಟ್ಟಿ ಈ ದೇಗುಲ ತಲೆ ಎತ್ತಿರುವುದು ವಿಶೇಷ.

ಇಡೀ ದೇಗುಲ ಒಟ್ಟು ಮೂರು ಅಂತಸ್ತನ್ನು ಒಳಗೊಂಡಿದೆ. ದೇಗುಲಕ್ಕೆ ಬರುವ ಯಾತ್ರಿಕರು ಸಿಂಹದ್ವಾರದ ಮೂಲಕ 32 ಮೆಟ್ಟಿಲುಗಳನ್ನು ಏರಿದರೆ ಅಲ್ಲಿ ಐದು ಮಂಟಪಗಳು ಸಿಗುತ್ತವೆ. ನೃತ್ಯ ಮಂಟಪ, ರಂಗ ಮಂಟಪ, ಸಭಾ ಮಂಟಪ, ಪ್ರಾರ್ಥನಾ ಮಂಟಪ ಹಾಗೂ ಕೀರ್ತನೆ ಮಂಟಪ ಅವು. ಅಲ್ಲೇ ಒಂದು ಕಡೆ ಸೀತಾಬಾವಿ ಇದೆ. ಅದನ್ನು ಭಕ್ತಾದಿಗಳು ವೀಕ್ಷಣೆ ಮಾಡಬಹುದು. ಈ ದೇಗಲ ನಾಗರ ಶೈಲಿಯಲ್ಲಿದೆ. ಪೂರ್ವದಿಂದ ಪಶ್ಚಿಮಕ್ಕೆ 380 ಅಡಿ ಉದ್ದ, 250 ಅಡಿ ಅಗಲ, 161 ಅಡಿ ಎತ್ತರವಿದೆ. ಪ್ರತಿಯೊಂದು ಮಹಡಿಯೂ 20 ಅಡಿ ಎತ್ತರವಿದ್ದು, ಒಟ್ಟಾರೆ 392 ಕಂಬಗಳು ಹಾಗೂ 44 ದ್ವಾರಗಳನ್ನು ಹೊಂದಿವೆ.

ಇಂದು ಭಕ್ತರಿಗೆ ತೆರೆಯಲಿದೆ ಅಯೋಧ್ಯೆ ರಾಮಮಂದಿರ: ಶತಮಾನಗಳ ಆಸೆ ಈಡೇರಿಸಿಕೊಳ್ಳುವ ತವಕದಲ್ಲಿ ಭಕ್ತರು

ದೇಗುಲಕ್ಕೆ ಚೌಕಾಕಾರದ ಪರಿಧಿ ಇದೆ. ಇಂತಹ ಪರಿಧಿ ದಕ್ಷಿಣ ಭಾರತದಲ್ಲಿ ಮಾತ್ರ ಕಾಣ ಸಿಗುವಂತಹದ್ದು. ದೇಗುಲ ನಿರ್ಮಾಣ ವೇಳೆ ಎಂಜಿನಿಯರ್‌ಗಳಿಗೆ ಬಹುದೊಡ್ಡ ಅಡ್ಡಿಯೇ ಎದುರಾಗಿತ್ತು. ತೇವಾಂಶ ಇದ್ದ ಕಾರಣ ಅಲ್ಲಿ ಅಡಿಪಾಯ ಹಾಕುವುದೇ ಕಷ್ಟವಿತ್ತು. ಹೀಗಾಗಿ ಎಂಜಿನಿಯರ್‌ಗಳು ಕಲ್ಲುಗಳನ್ನು ಬಳಸಿ ಕೃತಕ ಅಡಿಪಾಯವನ್ನು ಹಾಕಿದರು ಎನ್ನುತ್ತಾರೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್.

ಸಿಂಹದ್ವಾರದ ಮೂಲಕ 32 ಮೆಟ್ಟಿಲು ಏರುವ ಸ್ಥಳದಲ್ಲಿ ಆನೆ, ಸಿಂಹ, ಹನುಮಂತ ಹಾಗೂ ಗರುಡ ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಮರಳುಶಿಲೆಯಿಂದಲೇ ಈ ಮೂರ್ತಿ ಗಳನ್ನು ಕೆತ್ತಲಾಗಿದೆ ಎಂಬುದು ವಿಶೇಷ.

ಇಂದಿನಿಂದ 48 ದಿನ ಅಯೋಧ್ಯೆಯಲ್ಲಿ ಬ್ರಹ್ಮಕಲಶಾಭಿಷೇಕೋತ್ಸವ: 400 ಋತ್ವಿಜರಲ್ಲಿ 360 ಮಂದಿ ಕನ್ನಡಿಗರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ
ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ