
ಅಯೋಧ್ಯಾ: ಅಯೋಧ್ಯೆ ರಾಮಮಂದಿರ ಹುಂಡಿ ಕಳವು ಪ್ರಕರಣ(Ayodhya Ram mandir donation theft case) ತೀವ್ರ ಸಂಚಲನ ಸೃಷ್ಟಿಸಿರುವ ನಡುವೆಯೇ, ಕಾಣಿಕೆ ಹಣ ಲೆಕ್ಕ ಹಾಕುವ ಸಿಬ್ಬಂದಿಗೆ ಜೇಬುರಹಿತ ಬಟ್ಟೆ ಧರಿಸುವುದು ಸೇರಿದಂತೆ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇತ್ತ ನಿಯಮ ಬಿಗಿಗೊಳ್ಳುತ್ತಿದ್ದಂತೆ, ಸುಮಾರು 23 ಸಿಬ್ಬಂದಿ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.
ದೇಗುಲದಲ್ಲಿ ಸಂಭಾವ್ಯ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ಟ್ರಸ್ಟ್ ಹಲವು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇದರ ಭಾಗವಾಗಿ ಕಾಣಿಕೆ ಎಣಿಸಲು ವಿಶೇಷ ತಂಡವನ್ನು ರಚಿಸಲಾಗಿದೆ. ಈ ಮೊದಲು ದೇಗುಲದ ಸ್ವಚ್ಛತಾ ಕಾರ್ಮಿಕರನ್ನೂ ಎಣಿಕೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿತ್ತು. ಇದೀಗ ಅವರನ್ನು ಅವರ ಕೆಲಸಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ಜೇಬು ಇಲ್ಲದ ಬಟ್ಟೆಯನ್ನು ಮಾತ್ರ ಧರಿಸುವುದು ಹಾಗೂ ಪೊಲೀಸರಿಂದ ಪರಿಶೀಲಿಸಲ್ಪಟ್ಟ ನಡವಳಿಕೆ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸಲಾಗಿದೆ.
ಟ್ರಸ್ಟ್‌ನಿಂದ ಬಿಗಿ ನಿಯಮಗಳು ಜಾರಿಯಾಗುತ್ತಿದ್ದಂತೆ ಕಾಣಿಕೆ ಎಣಿಕೆ ಜವಾಬ್ದಾರಿ ಹೊತ್ತಿದ್ದ 23 ಸಿಬ್ಬಂದಿ ರಾಜೀನಾಮೆ ನೀಡಿದ್ದಾರೆ. ಟ್ರಸ್ಟ್ ಈಗ ಕೂಲಂಕಷ ಪರಿಶೀಲನೆ ಬಳಿಕ ಹೊಸ ಸಿಬ್ಬಂದಿಯನ್ನು ನೇಮಿಸಿಕೊಳ್ಳುವ ಸಿದ್ಧತೆಯಲ್ಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ