
ನವದೆಹಲಿ(ಜ.15): ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ರಾಮಮಂದಿರಕ್ಕೆ ಭಕ್ತರಿಂದ ದೇಣಿಗೆ ಸಂಗ್ರಹಿಸುವ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಅದರ ಸಹಯೋಗಿ ಸಂಘಟನೆಗಳ ಕಾರ್ಯಕರ್ತರು ಫೆ.27ರವರೆಗೆ ಈ ದೇಶವ್ಯಾಪಿ ದೇಣಿಗೆ ಸಂಗ್ರಹ ಅಭಿಯಾನದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಈ ಅಭಿಯಾನದಡಿ ಕಾರ್ಯಕರ್ತರು ದೇಶದ 4 ಲಕ್ಷ ಹಳ್ಳಿಗಳು ಮತ್ತು 10 ಕೋಟಿ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಆಸಕ್ತರು 10, 100 ಮತ್ತು 1000 ರು. ಮೌಲ್ಯದ ಕೂಪನ್‌ಗಳನ್ನು ಪಡೆದುಕೊಂಡು, ಮುಖಬೆಲೆ ಮೊತ್ತದ ದೇಣಿಗೆ ನೀಡಬಹುದಾಗಿದೆ.
CBI ಅಧಿಕಾರಿಗಳ ಮೇಲೆ CBI ದಾಳಿ: ನಾಲ್ವರ ವಿರುದ್ಧ ಕೇಸ್
ಅಯೋಧ್ಯೆಯಲ್ಲಿ ರಾಮಮಂದಿರ ಸಂಕೀರ್ಣವನ್ನು ಒಟ್ಟು 1100 ಕೋಟಿ ರು.ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಈ ಪೈಕಿ 2.7 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ರಾಮಮಂದಿರದ ವೆಚ್ಚವೇ 300-400 ಕೋಟಿ ರು. ಆಗಬಹುದು ಎಂದು ಅಂದಾಜಿಸಲಾಗಿದೆ.
ಈ ದೇಗುಲವನ್ನು 2024ರೊಳಗೆ ಪೂರ್ಣಗೊಳಿಸುವ ಉದ್ದೇಶವನ್ನು ರಾಮಮಂದಿರ ನಿರ್ಮಾಣ ಟ್ರಸ್ಟ್ ಹೊಂದಿದೆ. ದೇಗುಲಕ್ಕೆ ಕಳೆದ ವರ್ಷದ ಆ.5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆ ನೆರವೇರಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ