
ಆಯೋಧ್ಯೆ(ಮಾ.24) ಆಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಟೆ ಬಳಿಕ ಇದೇ ಮೊದಲ ಬಾರಿಗೆ ಅದ್ಧೂರಿ ಹೋಳಿ ಹಬ್ಬ ಆಚರಣೆಗೆ ಸಿದ್ಧತೆ ಮಾಡಲಾಗಿದೆ. ಭವ್ಯ ರಾಮ ಮಂದಿರದಲ್ಲಿ ನಡೆಯುತ್ತಿರುವ ಮೊದಲ ಹೋಳಿ ಹಬ್ಬ ಆಚರಣೆಯಿಂದ ಅದ್ಧೂರಿಯಾಗಿ ಆಚರಿಸಲು ರಾಮಜನ್ಮಭೂಮಿ ಟ್ರಸ್ಟ್ ನಿರ್ಧರಿಸಿದೆ. ಇದಕ್ಕಾಗಿ ಎಲ್ಲಾ ತಯಾರಿ ಮಾಡಿಕೊಂಡಿದೆ. ರಾಮ ಮಂದಿರ ಪ್ರಧಾನ ಅರ್ಚಕ ಅಚಾರ್ಯ ಸತ್ಯೇಂದ್ರ ದಾಸ್ ಈ ಕುರಿತು ಮಾಹಿತಿ ನೀಡಿದ್ದಾರೆ.
ಭವ್ಯ ಮಂದಿರದಲ್ಲಿ ಶ್ರೀರಾಮನಿಗೆ ಮೊದಲ ಹೋಳಿ ಹಬ್ಬ ಆಚರಣೆಯಾಗಿದೆ. ಹೀಗಾಗಿ ವಿಶೇಷವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಹೋಳಿ ಹಬ್ಬ ಆಚರಣೆ ವೇಳೆ ರಾಮಲಲ್ಲಾಗೆ ಬಣ್ಣ ಹಚ್ಚಲಾಗುತ್ತದೆ. ಇದೇ ವೇಳೆ ಕಚೋರಿ, ಗುಜಿಯಾ, ಪುರಿ, ಕಡುಬು ಸೇರಿದಂತೆ ಇತರ ಭಕ್ಷ್ಯಗಳನ್ನು ನೈವೇದ್ಯಗಳೊಂದಿಗೆ ಅರ್ಪಿಸಲಾಗುತ್ತದೆ. ವಿಶೇಷ ಪೂಜೆ ಬಳಿಕ ಈ ಪ್ರಸಾದವನ್ನು ರಾಮ ಭಕ್ತರಿಗೆ ವಿತರಿಸಲಾಗುತ್ತದೆ ಎಂದು ಆತಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.
ಆಯೋಧ್ಯೆ ರಾಮ ಮಂದಿರ ದಿನದ 24 ಗಂಟೆ ತೆರಯಲು ಸಿಎಂ ಯೋಗಿ ಸೂಚನೆ, ಈ ಮೂರು ದಿನ ಮಾತ್ರ!
ಶಾಸ್ತ್ರೋಕ್ತವಾಗಿ ಹಬ್ಬ ಆಚರಿಸಲಾಗುತ್ತದೆ. ಹೀಗಾಗಿ ಭಕ್ತರು ಸಹಕರಿಸಬೇಕು ಎಂದು ತೀರ್ಥ ಕ್ಷೇತ್ರ ಟ್ರಸ್ಟ್ ಮನವಿ ಮಾಡಿದೆ. ಶ್ರೀರಾಮನ ಪ್ರಾಣಪ್ರತಿಷ್ಠೆ ಬಳಿಕ ಆಗಮಿಸಿರುವ ಮೊದಲ ಹೋಳಿ ಹಬ್ಬವಾಗಿದೆ. ದಶರಥನ ಕಾಲದಲ್ಲಿ ಆಯೋಧ್ಯೆಯಲ್ಲಿದ್ದ ಗತವೈಭವ ಮರುಕಳಿಸಿದೆ. ಈ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದು ಆಚಾರ್ಯರು ಹೇಳಿದ್ದಾರೆ.
ಈಗಾಗಲೇ ಆಯೋಧ್ಯೆ ರಾಮ ಮಂದಿರಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಪ್ರಾರಂಭವಾಗಿರುವ ಕಾರಣ ಕುಟುಂಬ ಸಮೇತ ರಾಮ ಭಕ್ತರು ಮಂದಿರಕ್ಕೆ ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ.ಉರಿ ಬಿಸಿಲಿನ ಕಾರಣ ಭಕ್ತರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ. ಮುಂದಿರದ ಆವರಣದಲ್ಲಿ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಇನ್ನು ಭಕ್ತರು 2.5 ಕಿಲೋಮೀಟರ್ ಹೆಚ್ಚು ಕ್ಯೂನಲ್ಲಿ ನಿಲ್ಲದಂತೆ ಸೂಚಿಸಲಾಗಿದೆ. ಉರಿ ಬಿಸಿಲಿನ ಕಾರಣ ಅಸ್ವಸ್ಥಗೊಳ್ಳುವ ಅಪಾಯವಿದೆ. ಹೀಗಾಗಿ ಭಕ್ತರಿಗೆ ಸುಗಮವಾಗಿ ಶ್ರೀರಾಮನ ದರ್ಶನ ಪಡೆಯಲು ಎಲ್ಲಾ ವ್ಯವಸ್ಥೆ ಮಾಡಲಾಗಿದೆ.
ಅಯೋಧ್ಯೆ ರಾಮಮಂದಿರ ನಿರ್ಮಾಣ ಕ್ರೆಡಿಟ್ ಮೋದಿಗೆ ಮಾತ್ರವಲ್ಲ, ಯೋಗಿಗೂ ಸಲ್ಲುತ್ತೆ: ಚಕ್ರವರ್ತಿ ಸೂಲಿಬೆಲೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ