
ಲಕ್ನೋ (ಜೂ.29): ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ರಾಮಪಥದ ರಸ್ತೆ ಹಲವೆಡೆ ಕುಸಿದಿದ್ದು, ಮಳೆಯಿಂದಾಗಿ ಹಲೆವೆಡೆ ನೀರು ನಿಂತ ದೃಶ್ಯಗಳು ಸಾಮಾನ್ಯವಾಗಿದೆ. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ ಎದುರಿಸಿದ್ದಾರೆ. ನಿರ್ಲಕ್ಷ್ಯದ ಆರೋಪದ ಮೇಲೆ ಪೌರ ಸಂಸ್ಥೆಗಳ ಆರು ಅಧಿಕಾರಿಗಳನ್ನು ಉತ್ತರ ಪ್ರದೇಶ ಸರ್ಕಾರ ಅಮಾನತು ಮಾಡಿದೆ. ಜೂನ್ 23 ಮತ್ತು ಜೂನ್ 25 ರಂದು ಮಳೆಯ ನಂತರ, ರಾಮಪಥದ ಉದ್ದಕ್ಕೂ ಸುಮಾರು 15 ರಸ್ತೆಗಳು ಮತ್ತು ಬೀದಿಗಳು ಜಲಾವೃತವಾಗಿದೆ.. ರಸ್ತೆ ಬದಿಯ ಮನೆಗಳಿಗೂ ನೀರು ನುಗ್ಗಿದೆ. 14 ಕಿ.ಮೀ ಉದ್ದದ ಈ ರಸ್ತೆಯ ಹಲವು ಭಾಗಗಳು ಹಲವೆಡೆ ಕುಸಿದಿವೆ.
ಸುದ್ದಿಸಂಸ್ಥೆ ವರದಿಯ ಪ್ರಕಾರ, ಯುಪಿ ಸರ್ಕಾರ ಆರು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದೆ. ರಾಜ್ಯ ಸರ್ಕಾರವು ಅಮಾನತುಗೊಳಿಸಿದ ಅಧಿಕಾರಿಗಳಲ್ಲಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಕಾರ್ಯನಿರ್ವಾಹಕ ಎಂಜಿನಿಯರ್ ಧ್ರುವ ಅಗರ್ವಾಲ್, ಸಹಾಯಕ ಎಂಜಿನಿಯರ್ ಅನುಜ್ ದೇಶ್ವಾಲ್ ಮತ್ತು ಜೂನಿಯರ್ ಎಂಜಿನಿಯರ್ ಪ್ರಭಾತ್ ಪಾಂಡೆ ಮತ್ತು ಉತ್ತರ ಪ್ರದೇಶ ಜಲ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಆನಂದ್ ಕುಮಾರ್ ದುಬೆ, ಸಹಾಯಕ ಎಂಜಿನಿಯರ್ ರಾಜೇಂದ್ರ ಕುಮಾರ್ ಯಾದವ್ ಮತ್ತು ಕಿರಿಯ ಎಂಜಿನಿಯರ್ ಮೊಹಮ್ಮದ್ ಶಾಹಿದ್ ಸೇರಿದ್ದಾರೆ.
ವಿಶೇಷ ಕಾರ್ಯದರ್ಶಿ ವಿನೋದ್ ಕುಮಾರ್ ಅವರ ಆದೇಶದ ಮೇರೆಗೆ ಕಾರ್ಯಪಾಲಕ ಎಂಜಿನಿಯರ್ ಧ್ರುವ್ ಅಗರ್ವಾಲ್ ಮತ್ತು ಸಹಾಯಕ ಎಂಜಿನಿಯರ್ ಅನುಜ್ ದೇಶ್ವಾಲ್ ಅವರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ಕಿರಿಯ ಎಂಜಿನಿಯರ್ ಪ್ರಭಾತ್ ಪಾಂಡೆ ಅವರ ಅಮಾನತು ಆದೇಶವನ್ನು ಪಿಡಬ್ಲ್ಯುಡಿ ಮುಖ್ಯ ಎಂಜಿನಿಯರ್ (ಅಭಿವೃದ್ಧಿ) ವಿಕೆ ಶ್ರೀವಾಸ್ತವ ಹೊರಡಿಸಿದ್ದಾರೆ. ಉತ್ತರ ಪ್ರದೇಶದ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಕುಮಾರ್ ಮಿಶ್ರಾ ಅವರು ಮೂವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
'ನಿಮ್ಮನ್ನೆಂದೂ ಭಾರತೀಯರು ನಂಬುವುದಿಲ್ಲ' ಅಯೋಧ್ಯೆ ನಿವಾಸಿಗಳ ಮೇಲೆ 'ರಾಮಾಯಣದ ಲಕ್ಷ್ಮಣ' ಗರಂ
ಈ ಪ್ರಕರಣದಲ್ಲಿ ರಾಜ್ಯ ಸರ್ಕಾರವು ಅಹಮದಾಬಾದ್ ಮೂಲದ ಗುತ್ತಿಗೆದಾರ ಭುವನ್ ಇನ್ಫ್ರಾಕಾಮ್ ಪ್ರೈವೇಟ್ ಲಿಮಿಟೆಡ್‌ಗೆ ನೋಟಿಸ್ ಜಾರಿ ಮಾಡಿದೆ. ಪಿಡಬ್ಲ್ಯೂಡಿ ಅಧಿಕೃತ ಆದೇಶವು ನಿರ್ಮಾಣದ ನಂತರ ರಾಮಪಥದ ಮೇಲಿನ ಪದರವು ಹಾನಿಗೊಳಗಾಗಿದೆ ಎನ್ನಲಾಗಿದೆ. ಇದು ಉತ್ತರ ಪ್ರದೇಶ ಸರ್ಕಾರದ ಪ್ರಮುಖ ಆದ್ಯತೆಯ ಕೆಲಸದಲ್ಲಿ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಇದು ಸಾಮಾನ್ಯ ಜನರಲ್ಲಿ ರಾಜ್ಯದ ಇಮೇಜ್ ಅನ್ನು ಹಾಳು ಮಾಡಲು ಕಾರಣವಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪಿಡಬ್ಲ್ಯುಡಿ ಪ್ರಧಾನ ಕಾರ್ಯದರ್ಶಿ ಅಜಯ್ ಚೌಹಾಣ್ ಹೇಳಿದ್ದಾರೆ. ಕೃತಕ ನೆರೆ ಸೃಷ್ಟಿಯಾದ ಬೆನ್ನಲ್ಲೇ ಮಳೆ ನೀರನ್ನು ಹೊರಕ್ಕೆ ಪಂಪ್ ಮಾಡುವ ಕೆಲಸ ನಡೆಸಲಾಗಿದೆ ಎಂದು ಅಯೋಧ್ಯೆಯ ಮೇಯರ್ ಗಿರೀಶ್ ಪತಿ ತ್ರಿಪಾಠಿ ಹೇಳಿದ್ದಾರೆ.
ರಾಮಮಂದಿರ ಪ್ರಾಣಪ್ರತಿಷ್ಠೆ ನೆರವೇರಿಸಿದ ಅರ್ಚಕ ಲಕ್ಷ್ಮಿಕಾಂತ್ ದೀಕ್ಷಿತ್ ನಿಧನ, ಮೋದಿ ಸಂತಾಪ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ