
ಕಳೆದ ವಾರ ಸುಪ್ರೀಂ ಕೋರ್ಟ್(Supreme court)ನಲ್ಲಿ ನಡೆದಿದ್ದ ಪ್ರಕರಣವೊಂದರ ವಿಚಾರಣೆ ವೇಳೆ ಗಲಾಟೆ ಮಾಡಿದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೋರ್ಟ್ ಕಲಾಪಕ್ಕೆ ಅಡ್ಡಿಪಡಿಸಿ, ನ್ಯಾಯಾಧೀಶರಿಗೆ ಅವಾಚ್ಯವಾಗಿ ನಿಂದಿಸಿ, ಪೇಪರ್‌ಗಳನ್ನ ಕೋರ್ಟ್‌ನಲ್ಲಿ ತೂರಿದ್ದ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಮುಖ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ದೆಹಲಿ ಪೊಲೀಸರ ಪ್ರಕಾರ, ಜುಲೈ 10ರಂದು ಸುಪ್ರೀಂ ಕೋರ್ಟ್‌ನ ಕೋರ್ಟ್ ನಂಬರ್ 13ರಲ್ಲಿ ಈ ಘಟನೆ ನಡೆದಿದೆ. ಪ್ರಬಲ್ ಪ್ರತಾಪ್ ಮತ್ತು ಇತರರು vs ಉತ್ತರ ಪ್ರದೇಶ ಸರ್ಕಾರ' ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಈ ವೇಳೆ ನಡೆದ ಗಲಾಟೆ ಬಗ್ಗೆ ಸುಪ್ರೀಂ ಕೋರ್ಟ್‌ನ ಭದ್ರತಾ ಸಿಬ್ಬಂದಿಯೊಬ್ಬರು ದೂರು ನೀಡಿದ್ದು, ಅದರ ಆಧಾರದ ಮೇಲೆ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಲಕ್ನೋ ವಿಶ್ವವಿದ್ಯಾಲಯದ ಮೂರನೇ ವರ್ಷದ ಕಾನೂನು ವಿದ್ಯಾರ್ಥಿ ಪ್ರಬಲ್ ಪ್ರತಾಪ್ ಸಿಂಗ್ (24) ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ಅರ್ಜಿದಾರನಾಗಿ ಖುದ್ದು ವಿಚಾರಣೆಗೆ ಹಾಜರಾಗಿದ್ದ.
ಎಫ್‌ಐಆರ್ ಪ್ರಕಾರ, ಕೋರ್ಟ್ ಕಲಾಪ ನಡೆಯುವ ವೇಳೆ ಅರ್ಜಿದಾರನಾಗಿ ಹಾಜರಾಗಿದ್ದ ಆರೋಪಿ ಪ್ರಬಲ್ ಪ್ರತಾಪ್(Prabal pratap singh), ಉದ್ದೇಶಪೂರ್ವಕವಾಗಿಯೇ ಕಲಾಪಕ್ಕೆ ಅಡ್ಡಿಪಡಿಸಿದ್ದಾನೆ. ಅಸಭ್ಯ ಮತ್ತು ಅಸಂಸದೀಯ ಭಾಷೆ ಬಳಸಿ, ಕೋರ್ಟ್ ಹಾಲ್‌ನೊಳಗೆ ಪೇಪರ್‌ಗಳನ್ನು ಎಸೆದು ಗದ್ದಲ ಸೃಷ್ಟಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಭದ್ರತಾ ಸಿಬ್ಬಂದಿ ಕಾನೂನು ಸುವ್ಯವಸ್ಥೆ ಕಾಪಾಡಲು ಆರೋಪಿ ಪ್ರಬಲ್ ಪ್ರತಾಪ್‌ನನ್ನ ತಡೆಯಲು ಪ್ರಯತ್ನಿಸಿದಾಗ, ಆರೋಪಿ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದೂ ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಲಕ್ನೋ ವಿಶ್ವವಿದ್ಯಾಲಯದ ಎರಡನೇ ವರ್ಷದ ಕಾನೂನು ವಿದ್ಯಾರ್ಥಿ ಚಂದರ್ ಭಾನ್ (23) ಎಂಬಾತನನ್ನೂ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 132, 221, 224 ಮತ್ತು 3(5) ಹಾಗೂ ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
(ಈ ವರದಿಯ ಹೆಡ್‌ಲೈನ್ ಹೊರತುಪಡಿಸಿ, ಏಷ್ಯಾನೆಟ್ ನ್ಯೂಸಬಲ್ ಇಂಗ್ಲಿಷ್ ಸಿಬ್ಬಂದಿ ಈ ಲೇಖನವನ್ನು ಸಂಪಾದಿಸಿಲ್ಲ ಮತ್ತು ಸಿಂಡಿಕೇಟೆಡ್ ಫೀಡ್‌ನಿಂದ ಪ್ರಕಟಿಸಲಾಗಿದೆ.)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ