
ಹೈದರಾಬಾದ್ (ಅ.22): ತೆಲಂಗಾಣದಲ್ಲಿ ವರುಣನ ಆರ್ಭಟದಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಿದೆ.
ಈ ಹಿನ್ನೆಲೆಯಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ 1.5 ಕೋಟಿ ರು. ಹಣವನ್ನು ತೆಲಂಗಾಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ. ಅಷ್ಟೆಅಲ್ಲದೆ ಅಗತ್ಯವಿದ್ದವರಿಗೆ ನೆರವು ನೀಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
ಈ ಹಿಂದೆಯೂ ಕೊರೋನಾ ಲಾಕ್‌ಡೌನ್ ಬಿಕ್ಕಟ್ಟಿನ ಸಮಯದಲ್ಲಿ ಪ್ರಭಾಸ್ 4 ಕೋಟಿ ರು. ದೇಣಿಗೆ ನೀಡಿದ್ದರು. ಸದ್ಯ ಪ್ರಭಾಸ್ ‘ರಾಧೆ ಶ್ಯಾಂ’ ಸಿನಿಮಾ ಚಿತ್ರೀಕರಣ ನಿಮಿತ್ತ ಇಟಲಿಯಲ್ಲಿದ್ದಾರೆ.
ಪ್ರವಾಹದಿಂದ ಮನೆಗೆ ಹಾನಿಯಾಗಿದ್ದರೆ 5 ಲಕ್ಷ ರು. ..
ದೇಶದಲ್ಲಿ ವಿವಿಧ ಪ್ರದೇಶಗಳಲ್ಲಿ ಈಗಾಗಲೇ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜನಜೀವನ ತತ್ತರಿಸಿದೆ. ಜನರು ಮನೆಗಳನ್ನು ಕಳೆದುಕೊಂಡು ನೆಲೆ ಇಲ್ಲದೇ ಪರದಾಡುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ