ಬಜರಂಗದಳ ನಿಷೇಧಿಸಲ್ಲ, ಆದರೆ ಸಂಘಟನೆಯ ಗೂಂಡಾಗಳನ್ನು ಬಿಡಲ್ಲ: ದಿಗ್ವಿಜಯ ಸಿಂಗ್‌

Published : Aug 17, 2023, 11:56 AM IST
ಬಜರಂಗದಳ ನಿಷೇಧಿಸಲ್ಲ, ಆದರೆ ಸಂಘಟನೆಯ ಗೂಂಡಾಗಳನ್ನು ಬಿಡಲ್ಲ: ದಿಗ್ವಿಜಯ ಸಿಂಗ್‌

ಸಾರಾಂಶ

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಜರಂಗದಳ ಸಂಘಟನೆಯನ್ನು ನಿಷೇಧಿಸುವುದಿಲ್ಲ. ಆದರೆ ಸಂಘಟನೆಯಲ್ಲಿನ ಗೂಂಡಾಗಳು ಹಾಗೂ ಗಲಭೆಕೋರರನ್ನು ಬಿಡುವುದಿಲ್ಲ ಎಂದು ಕಾಂಗ್ರೆಸ್‌ ಮುಖಂಡ ದಿಗ್ವಿಜಯ ಸಿಂಗ್‌ (Digvijaya Singh) ಬುಧವಾರ ಹೇಳಿದ್ದಾರೆ.

ಭೋಪಾಲ್‌: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಜರಂಗದಳ ಸಂಘಟನೆಯನ್ನು ನಿಷೇಧಿಸುವುದಿಲ್ಲ. ಆದರೆ ಸಂಘಟನೆಯಲ್ಲಿನ ಗೂಂಡಾಗಳು ಹಾಗೂ ಗಲಭೆಕೋರರನ್ನು ಬಿಡುವುದಿಲ್ಲ ಎಂದು ಕಾಂಗ್ರೆಸ್‌ ಮುಖಂಡ ದಿಗ್ವಿಜಯ ಸಿಂಗ್‌ (Digvijaya Singh) ಹೇಳಿದ್ದಾರೆ.

ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ (Madhya Pradesh) ಈ ವರ್ಷದ ಅಂತ್ಯಕ್ಕೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ದಿಗ್ಬಿಜಯ ಹೇಳಿಕೆ ಮಹತ್ವ ಪಡೆದಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್‌ ಪಕ್ಷ (Congress Party) ಬಜರಂಗದಳ ನಿಷೇಧಿಸಲಾಗುತ್ತದೆ ಎಂದು ಪ್ರಣಾಳಿಕೆಯಲ್ಲಿ ಘೋಷಿಸಿ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿತ್ತು ಎಂಬುದು ಇಲ್ಲಿ ಗಮನಾರ್ಹ.

ಭಜರಂಗದಳ ಕಾರ್ಯಕರ್ತರ ಗಡಿಪಾರು; ಶಾಂತಿ ಕದಡೋರಿಗೆ ಖಡಕ್ ವಾರ್ನ್ ಕೊಟ್ಟ ಮಂಗಳೂರು ಕಮಿಷನರ್

ಸುದ್ದಿಗಾರರ ಜೊತೆ ಮಾತನಾಡಿದ ದಿಗ್ವಿಜಯ್‌, ಬಜರಂಗದಳ ಗೂಂಡಾಗಳು (Bajarangadal) ಮತ್ತು ಸಮಾಜ ವಿರೋಧಿ ಕೃತ್ಯಗಳನ್ನು ಎಸಗುವ ಜನರ ಗುಂಪು. ಆದರೆ ಈ ದೇಶ ಎಲ್ಲರಿಗೂ ಸೇರಿದ್ದಾಗಿದೆ. ಹಾಗಾಗಿ ಮೋದಿ ಹಾಗೂ ಶಿವರಾಜ್‌ (ಮ.ಪ್ರ. ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌) ಅವರು ದೇಶವನ್ನು ವಿಭಜಿಸುವ ಕೆಲಸವನ್ನು ಬಿಡಬೇಕು ಎಂದು ಹೇಳಿದರು. ಇದೇ ವೇಳೆ ಬಜರಂಗದಳ ನಿಷೇಧದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಆ ಸಂಘಟನೆಯನ್ನು ನಿಷೇಧಿಸುವುದಿಲ್ಲ. ಆ ಸಂಘಟನೆಯಲ್ಲಿ ಒಳ್ಳೆಯವರೂ ಇದ್ದಾರೆ. ಆದರೆ ಸಂಘಟನೆಯಲ್ಲಿನ ಗೂಂಡಾಗಳು ಹಾಗೂ ಗಲಭೆಕೋರರನ್ನು ಸುಮ್ಮನೇ ಬಿಡುವುದಿಲ್ಲ ಎಂದರು.

ಮಂಗಳೂರು: ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಮಾರಣಾಂತಿಕ ದಾಳಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಚ್ಚೇದನ ಪ್ರಕರಣದ ಕ್ಲೈಂಟ್ ಜೊತೆ ರೋಮ್ಯಾಂಟಿಕ್ ರಿಲೇಷನ್‌ ಶಿಪ್‌: ಮಹಿಳಾ ವಕೀಲೆಗೆ ಸುಪ್ರೀಂಕೋರ್ಟ್ ತರಾಟೆ
ಹಿರಿಯ ನಾಗರಿಕರು, 45+ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ರೈಲ್ವೆ; ಇಲ್ಲಿದೆ ಸೂಪರ್ ಅಪ್‌ಡೇಟ್