ದೇಶಾದ್ಯಂತ ಸ್ಲೀಪರ್‌ ಸೆಲ್‌ಗೆ ಬಳ್ಳಾರಿ ಉಗ್ರರಿಂದ ಸಂಚು: ಎನ್‌ಐಎ ಆರೋಪ ಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

Published : Jun 14, 2024, 05:45 AM IST
ದೇಶಾದ್ಯಂತ ಸ್ಲೀಪರ್‌ ಸೆಲ್‌ಗೆ ಬಳ್ಳಾರಿ ಉಗ್ರರಿಂದ ಸಂಚು: ಎನ್‌ಐಎ ಆರೋಪ ಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

ಸಾರಾಂಶ

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಭೇದಿಸಲಾದ ಬಳ್ಳಾರಿ ಐಸಿಸ್‌ ಮಾಡ್ಯೂಲ್‌ ಮತ್ತು ಆ ಸಂಬಂಧ ಬಂಧಿತ ಕರ್ನಾಟಕದ ನಾಲ್ವರು ಸೇರಿದಂತೆ 7 ಜನರ ವಿರುದ್ಧ ರಾಷ್ಟ್ರೀಯ ತನಿಖಾ ದಳ ಆರೋಪಪಟ್ಟಿ ದಾಖಲಿಸಿದ್ದು ಅದರಲ್ಲಿ ಈ ಗಂಭೀರ ವಿಷಯ ಬೆಳಕಿಗೆ ಬಂದಿದೆ.  

ನವದೆಹಲಿ (ಜೂ.14): 2025ರ ವೇಳೆಗೆ ಭಾರತದ ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 50 ಸ್ಲೀಪರ್‌ಸೆಲ್‌ ಸ್ಥಾಪನೆ. ಈ ಸೆಲ್‌ ಸದಸ್ಯರ ಬಳಸಿಕೊಂಡು ಸೇನೆ, ಪೊಲೀಸರು ಮತ್ತು ನಿರ್ದಿಷ್ಟ ಸಮುದಾಯದ ಧಾರ್ಮಿಕ ನಾಯಕರ ಮೇಲೆ ದಾಳಿ ನಡೆಸುವಂಥ ಸಂಚನ್ನು ಕಳೆದ ವರ್ಷ ಕರ್ನಾಟಕದ ಬಳ್ಳಾರಿಯಲ್ಲಿ ಬಯಲಿಗೆಳೆಯಲಾದ ಐಸಿಸ್‌ ಉಗ್ರರ ಗುಂಪು ರೂಪಿಸಿತ್ತು ಎಂಬ ಸ್ಫೋಟಕ ವಿಷಯ ಬೆಳಕಿಗೆ ಬಂದಿದೆ. 

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಭೇದಿಸಲಾದ ಬಳ್ಳಾರಿ ಐಸಿಸ್‌ ಮಾಡ್ಯೂಲ್‌ ಮತ್ತು ಆ ಸಂಬಂಧ ಬಂಧಿತ ಕರ್ನಾಟಕದ ನಾಲ್ವರು ಸೇರಿದಂತೆ 7 ಜನರ ವಿರುದ್ಧ ರಾಷ್ಟ್ರೀಯ ತನಿಖಾ ದಳ ಆರೋಪಪಟ್ಟಿ ದಾಖಲಿಸಿದ್ದು ಅದರಲ್ಲಿ ಈ ಗಂಭೀರ ವಿಷಯ ಬೆಳಕಿಗೆ ಬಂದಿದೆ. ಕರ್ನಾಟಕದ ಮೊಹಮ್ಮದ್‌ ಸುಲೈಮಾನ್‌ ಮಿನಾಜ್‌, ಮೊಹಮ್ಮದ್‌ ಮುನಿರುದ್ದೀನ್‌, ಸಯ್ಯದ್‌ ಸಮೀರ್‌, ಮೊಹಮ್ಮದ್‌ ಮುಜಮ್ಮಿಲ್‌, ಮಹಾರಾಷ್ಟ್ರದ ಇಕ್ಬಾಲ್‌ ಷೇಕ್‌, ಜಾರ್ಖಂಡ್‌ನ ಮೊಹಮ್ಮದ್‌ ಶಹಬಾಜ್‌ ಮತ್ತು ದೆಹಲಿಯ ಶಯಾನ್‌ ರೆಹಮಾನ್‌ ವಿರುದ್ಧ ಎನ್‌ಐಎ ಆರೋಪಪಟ್ಟಿ ದಾಖಲಿಸಿದೆ.

ಪೋಕ್ಸೋ ಪ್ರಕರಣ: ಬಿಎಸ್‌ವೈಗಾಗಿ ದೆಹಲಿಯಲ್ಲಿ ಸಿಐಡಿ ಅಧಿಕಾರಿಗಳ ತಂಡದಿಂದ ತಲಾಶ್‌!

ಭಾರೀ ದುಷ್ಕೃತ್ಯ: ಬಂಧಿತ ವ್ಯಕ್ತಿಗಳು ಭಾರತದ ವಿರುದ್ಧ ಧರ್ಮಯುದ್ಧ ಸಾರಿ ದೇಶದಲ್ಲಿ ಇಸ್ಲಾಮಿಕ್‌ ಆಡಳಿತ ಸ್ಥಾಪಿಸುವ ಗುರಿ ಹೊಂದಿದ್ದರು. ಇದಕ್ಕಾಗಿ 2025ರ ವೇಳೆಗೆ ದೇಶದ ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 50 ಸ್ಲೀಪರ್‌ಸೆಲ್‌ (ಸಮಾಜದ ಮಖ್ಯವಾಹಿನಿಯಲ್ಲಿ ಇದ್ದುಕೊಂಡೇ ರಹಸ್ಯವಾಗಿ ಉಗ್ರ ಚಟುವಟಿಕೆ ನಡೆಸುವವರು) ಸ್ಥಾಪಿಸುವ ಗುರಿ ಹಾಕಿಕೊಂಡಿದ್ದರು. ಈ ಸ್ಲೀಪರ್‌ಸೆಲ್‌ಗಳ ಮೂಲಕ ಯೋಧರು, ಪೊಲೀಸರು ಮತ್ತು ನಿರ್ದಿಷ್ಟ ಸಮುದಾಯದ ಧಾರ್ಮಿಕ ನಾಯಕರ ಮೇಲೆ ದಾಳಿಯ ಗುರಿಯನ್ನು ಹಾಕಿಕೊಳ್ಳಲಾಗಿತ್ತು. 

ಈ ಎಲ್ಲಾ ಕೃತ್ಯಗಳಿಗಾಗಿ ‘ಮುಜಾಹಿದೀನ್‌’ ಎಂದು ಕರೆಯಲ್ಪಡುವ ಕಾರ್ಯಕರ್ತರ ಪಡೆ ಕಟ್ಟುತ್ತಿದ್ದರು. ಅವರನ್ನು ತಮ್ಮ ಐಸಿಸ್‌ ಸಂಘಟನೆಗೆ ಸೇರ್ಪಡೆ ಮಾಡಿಕೊಳ್ಳುವ ಕೃತ್ಯದಲ್ಲಿ ಇವರೆಲ್ಲಾ ಸಕ್ರಿಯರಾಗಿ ಭಾಗಿಯಾಗಿದ್ದರು ಎಂದು ಎನ್‌ಐಎ ತನ್ನ ಆರೋಪಪಟ್ಟಿಯಲ್ಲಿ ದಾಖಲಿಸಿದೆ. ಕಳೆದ ವರ್ಷ ಬಂಧಿತರ ಮನೆ ಮೇಲೆ ನಡೆಸಿದ ದಾಳಿಯ ವೇಳೆ ಸ್ಫೋಟಕ ಪದಾರ್ಥ, ಹರಿತ ಶಸ್ತ್ರಾಸ್ತ್ರ, ಐಸಿಸ್‌ ಸಿದ್ದಾಂತದ ಕರಪತ್ರ, ಜಿಹಾದ್‌, ಆತ್ಮಾಹುತಿ ದಾಳಿ ಕುರಿತ ಪುಸ್ತಕಗಳನ್ನು ಎನ್‌ಐಎ ವಶಪಡಿಸಿಕೊಂಡಿತ್ತು.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಯಡಿಯೂರಪ್ಪ ಮೊರೆ

ಆರೋಪ ಏನು?
- ಕಳೆದ ಡಿಸೆಂಬರಲ್ಲಿ ಬಳ್ಳಾರಿ ಐಸಿಸ್‌ ಮಾಡ್ಯೂಲ್‌ ಭೇದಿಸಿದ್ದ ಎನ್‌ಐಎ
- ಇದೀಗ ಆ ಶಂಕಿತ ಉಗ್ರರ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ
- 2025ರ ವೇಳೆಗೆ ದೇಶದ ಪ್ರತಿ ಜಿಲ್ಲೆಯಲ್ಲೂ 50 ಸ್ಲೀಪರ್‌ ಸೆಲ್‌ ಸ್ಥಾಪನೆಗೆ ಸಂಚು
- ಆ ಸೆಲ್‌ ಬಳಸಿ ಸೇನೆ, ಪೊಲೀಸರು ಧಾರ್ಮಿಕ ನಾಯಕರ ಮೇಲೆ ದಾಳಿಗೆ ಹೊಂಚು
- ದೇಶದಲ್ಲಿ ಇಸ್ಲಾಮಿಕ್‌ ಆಡಳಿತ ಸ್ಥಾಪಿಸುವ ಗುರಿ ಹೊಂದಿದ್ದ ತಂಡ: ಎನ್‌ಐಎ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ
ನಾನು ಮೋಸ ಮಾಡಿಲ್ಲ, ಗಾಸಿಪ್‌ ನಂಬಬೇಡಿ ಎಂದ Palash Muchhal; ಮದುವೆ ಕ್ಯಾನ್ಸಲ್‌ ಎಂದ Smriti Mandhana