
ಚೆನ್ನೈ(ಮೇ.05): ತಮಿಳುನಾಡಿನ ಧರ್ಮಪುರಂ ಆಧೀನಂ ಪೀಠದಲ್ಲಿ ಸ್ವಾಮೀಜಿಗಳನ್ನು ಪಲ್ಲಕ್ಕಿಯಲ್ಲಿ ಕೂರಿಸಿ ನಡೆಸುವ ಮೆರವಣಿಗೆಯನ್ನು ರಾಜ್ಯದ ಡಿಎಂಕೆ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಬಂಧವು ಸ್ವಾಮೀಜಿಗಳು, ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳನ್ನು ಕೆರಳಿಸಿದ್ದು, ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆ ನೀಡಿವೆ.
ಸ್ವಾಮೀಜಿಗಳನ್ನು (ಮನುಷ್ಯರೊಬ್ಬರನ್ನು) ಪಲ್ಲಕ್ಕಿ ಮೇಲೆ ಕೂರಿಸಿ ಅದನ್ನು ಭಕ್ತರು ಹೊರುವುದರಿಂದ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತದೆ ಎಂದು ಕೆಲವು ಸಂಘಟನೆಗಳು ದೂರು ನೀಡಿದ್ದವು. ಇದನ್ನು ಪರಿಗಣಿಸಿದ್ದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಸರ್ಕಾರ ಪಲ್ಲಕ್ಕಿ ಮೆರವಣಿಗೆ ನಿಷೇಧಿಸಿತ್ತು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ಧಾರ್ಮಿಕ ಆಚರಣೆಗಳಿಗೆ ಸ್ಟಾಲಿನ್ ಅಡ್ಡಿ ಉಂಟು ಮಾಡುತ್ತಿದ್ದಾರೆ. ನಿರ್ಬಂಧ ಸಡಿಲಿಸದಿದ್ದರೆ ನಾನೇ ಪಲ್ಲಕ್ಕಿ ಹೊರುವೆ’ ಎಂದು ಗುಡುಗಿದ್ದಾರೆ. ಇನ್ನು ಮದುರೈ ಆಧೀನಂ ಪೀಠದ ಮಠಾಧೀಶ ಜ್ಞಾನಸಂಬಂಧ ದೇಶಿಕ ಸ್ವಾಮೀಜಿಗಳು ಕೂಡ, ‘ಬ್ರಿಟಿಷರು ಕೂಡ ಈ ಆಚರಣೆಗೆ ಅಡ್ಡಿ ಮಾಡಿರಲಿಲ್ಲ. ಈಗೇಕೆ ಅಡ್ಡಿ? ಸರ್ಕಾರಗಳು ಧಾರ್ಮಿಕತೆಗೆ ಗೌರವ ನೀಡಬೇಕು’ ಎಂದಿದ್ದಾರೆ.
ಇದರ ಬೆನ್ನಲ್ಲೇ ಧರ್ಮಪುರಂ ಆಧೀನಂ ಮಠಾಧೀಶರೊಂದಿಗೆ ಮುಖ್ಯಮಂತ್ರಿ ಸ್ಟಾಲಿನ್ ಮಾತುಕತೆ ನಡೆಸಲಿದ್ದಾರೆ ಎಂದು ಮುಜರಾಯಿ ಸಚಿವ ಪಿ.ಕೆ. ಶೇಖರ್‌ಬಾಬು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ