
ಪಶ್ಚಿಮ ಬಂಗಾಳದಲ್ಲಿ ಬಾಂಗ್ಲಾದೇಶದ ನುಸುಳುಕೋರರನ್ನು ಮತದಾರರ ಪಟ್ಟಿ ಪರಿಷ್ಕರಣೆ (SIR) ಮಾಡುವ ಮೂಲಕ ಹೊರಕ್ಕೆ ದಬ್ಬಿರುವುದು ಗೊತ್ತೇ ಇದೆ. ಮಮತಾ ಬ್ಯಾನರ್ಜಿ ಅವರ ವೋಟ್ ಬ್ಯಾಂಕ್ ಆಗಿದ್ದ ಈ ನುಸುಳುಕೋರರು, ಪಶ್ಚಿಮ ಬಂಗಾಳದಲ್ಲಿ ಇನ್ನಿಲ್ಲದ ಭಯೋತ್ಪಾದನಾ ಕೃತ್ಯ ಸೇರಿದಂತೆ ದೇಶ ವಿಧ್ವಂಸಕ ಕೃತ್ಯದಲ್ಲಿ ತೊಡಗಿದ್ದರು. ಮಮತಾ ಬ್ಯಾನರ್ಜಿ ಅವರ ಆಪ್ತರಾಗಿದ್ದ ಈ ನುಸುಳುಕೋರರಿಗೆ ರಕ್ಷಣೆ ಒದಗಿಸುತ್ತಿದ್ದ ದೀದಿ, ಅಲ್ಲಿಯ ಹಿಂದೂಗಳ ಪರಿಸ್ಥಿತಿಯನ್ನು ಅಲ್ಲೋಲ ಕಲ್ಲೋಲ ಮಾಡಿದ್ದರು. ತಮ್ಮ ವೋಟ್ಬ್ಯಾಂಕ್ ಹೋಗುತ್ತೆ ಎನ್ನುವಕಾರಣಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡದಂತೆ ಕೋರ್ಟ್ ಮೆಟ್ಟಿಲೆಲ್ಲಾ ಏರಿದ್ದರೂ ಸಾಧ್ಯವಾಗಿರಲಿಲ್ಲ. ಕೊನೆಗೆ, ನುಸುಳುಕೋರರು ಬಂಗಾಳ ಬಿಟ್ಟು ಹೋಗುವಂತಾಯಿತು.
ಮುಸ್ಲಿಂ ನುಸುಳುಕೋರರರಿಗೆ ಯಾವ ಮುಸ್ಲಿಂ ರಾಷ್ಟ್ರಗಳೂ ಸ್ವಾಗತ ಕೋರುವುದಿಲ್ಲ. ಬಾಂಗ್ಲಾದೇಶಿಗರಿಗೂ ಹಾಗೆಯೇ ಆಗಿದೆ. ನುಸುಳುಕೋರರಾಗಿ ಸದ್ಯ ಇರುವುದು ದಕ್ಷಿಣ ಭಾರತದಲ್ಲಿ ಅದರಲ್ಲಿಯೂ ಕರ್ನಾಟಕದಲ್ಲಿ ತುಂಬು ಹೃದಯದ ಸ್ವಾಗತ ಎನ್ನುವ ವಿಷಯಗಳು ಕೇಳಿಬರುತ್ತಿದೆ. ಇತ್ತ ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಯದಂತೆ ಸರ್ಕಾರ ಭಾರಿ ಪ್ರಯತ್ನ ಮಾಡುತ್ತಿದೆ. ಕೋರ್ಟ್ಗೆ ಹೋಗಲಿದೆ. ಇದಾಗಲೇ ಈ ಬಗ್ಗೆ ಮೀಟಿಂಗ್ ಕೂಡ ನಡೆದಿದೆ. ಇದರ ಬೆನ್ನಲ್ಲೇ ನುಸುಳುಕೋರರು ಕರ್ನಾಟಕವನ್ನು ಪ್ರವೇಶಿಸುತ್ತಿರುವ ಆಘಾತಕಾರಿ ವಿಡಿಯೋ ವೈರಲ್ ಆಗ್ತಿದೆ.
ಇದಾಗಲೇ ಬಾಂಗ್ಲಾ ವಲಸಿಗರು ಹುಬ್ಬಳ್ಳಿ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳತ್ತ ಮುಖ ಮಾಡುತ್ತಿರುವ ವಿಡಿಯೋಗಳು ವೈರಲ್ ಆಗುತ್ತವೆ. ಇತ್ತೀಚೆಗೆ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೆಲ ಶಂಕಿತರನ್ನು ರೈಲ್ವೆ ಪೊಲೀಸರು ಕೇವಲ ಆಧಾರ್ ಕಾರ್ಡ್ ಪರಿಶೀಲಿಸಿ ಬಿಟ್ಟು ಕಳುಹಿಸಿದ್ದರು. ಅವರು ಬಾಗಲಕೋಟೆಗೆ ಕೂಲಿ ಕೆಲಸಕ್ಕೆ ಹೋಗುತ್ತಿರುವುದಾಗಿ ತಿಳಿಸಿದ್ದರು. ಆದರೆ, ನಕಲಿ ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸಿ ವಲಸಿಗರು ಬರುತ್ತಿರುವ ಸಾಧ್ಯತೆ ಇರುವುದರಿಂದ ಸಮಗ್ರ ತನಿಖೆ ನಡೆಸಬೇಕು ಎನ್ನುವುದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹವಾಗಿದೆ. ಏಕೆಂದರೆ ಪಶ್ಚಿಮ ಬಂಗಾಳದಲ್ಲಿಯೂ ಇವರಿಗೆಲ್ಲಾ ಮಮತಾ ಬ್ಯಾನರ್ಜಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಟ್ಟಿದ್ದರು. ಇಲ್ಲಿಯೂ ಆ ರೀತಿ ಆಗಿರುವ ಸಾಧ್ಯತೆ ಇದೆ, ಇದರಿಂದ ರಾಜ್ಯಕ್ಕೆ ಭಾರಿ ಸಂಕಷ್ಟ ಎದುರಾಗಲಿದ್ದು, ಭದ್ರತೆ ದೃಷ್ಟಿಯಿಂದ ಇದು ಅತ್ಯಂತ ಕಠಿಣ ಪರಿಸ್ಥಿತಿಯಾಗಿದೆ ಎಂದು ಹಿಂದೂ ಪರ ಸಂಘಟನೆಗಳು ಹೇಳುತ್ತಿವೆ.
ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಗೆ ತಂಡೋಪತಂಡವಾಗಿ ಬಾಂಗ್ಲಾದೇಶಿಯರು ಬಂದಿರುವ ಅನುಮಾನ ವ್ಯಕ್ತವಾಗುತ್ತಿದೆ. ಅದಕ್ಕೆ ಪುರಾವೆ ಎನ್ನುವಂತೆ ಅವರನ್ನು ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ತಪಾಸಣೆ ನಡೆಸಿದಾಗ, ಅವರು ಪಶ್ಚಿಮ ಬಂಗಾಳದಿಂದ ಬಂದಿದ್ದು, ಕೂಲಿ ಕೆಲಸಕ್ಕೆ ಬಾಗಲಕೋಟೆಗೆ ಹೋಗುತ್ತಿರುವುದಾಗಿ ಹೇಳಿದ್ದರು! ಆದರೆ ಆಧಾರ ಕಾರ್ಡ್ ತೋರಿಸಿದ್ದರಿಂದ ಅವರನ್ನು ರೈಲ್ವೆ ಪೊಲೀಸರು ಬಿಟ್ಟು ಕಳುಹಿಸಿದ್ದರು. ಇದೀಗ ಭಾರಿ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಕೇವಲ ಆಧಾರ ಕಾರ್ಡ್ ನೋಡಿ ಬಿಟ್ಟು ಕಳುಹಿಸಿದರೆ ಸಾಲದು, ಏಕೆಂದರೆ ನಕಲಿ ಆಧಾರ ಕಾರ್ಡ್ ಮಾಡಿಸಿಕೊಂಡು ಅನೇಕರು ಬರುತ್ತಿದ್ದಾರೆ. ಹೀಗಾಗಿ ಪಶ್ಚಿಮ ಬಂಗಾಳದಿಂದ ಯಾರೆಲ್ಲಾ ಹುಬ್ಬಳ್ಳಿಗೆ ಬರುತ್ತಾರೆ ಅವರನ್ನು ಸಮಗ್ರ ತನಿಖೆ ಮಾಡಬೇಕು ಅಂತ ಆಗ್ರಹಿಸಿದ್ದಾರೆ.
ಹಿಂದೂ ಪರ ಸಂಘಟನೆ ಪ್ರತಿಭಟನೆ ಜೋರಾದಂತೆ, ಕಾಟಾಚಾರಕ್ಕೆ ಪೊಲೀಸರು ರೈಲಿನಲ್ಲಿ ಬರುವವರ ತಪಾಸಣೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ನೂರಾರು ಪ್ರಯಾಣಿಕರು ಬಂದಿದ್ದರಿಂದ ಪೊಲೀಸರು ಯಾರನ್ನು ಕೂಡ ಸರಿಯಾಗಿ ತಪಾಸಣೆ ಮಾಡಲು ಸಾಧ್ಯವಾಗಲಿಲ್ಲ. ಹಿಂದೂಪರ ಸಂಘಟನೆಗಳ ಆರೋಪಗಳ ಬಗ್ಗೆ ರೈಲ್ವೆ ಇಲಾಖೆ ಅಧಿಕಾರಿಗಳು ಅಧಿಕೃತವಾಗಿ ಯಾವುದೇ ಮಾಹಿತಿ ನೀಡದೇ ಇದ್ದರು ಕೂಡ, ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರುತ್ತೇವೆ. ಅವರ ಸೂಚನೆ ಮೇರೆಗೆ ಮುಂದಿನ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.ಹೀಗೆ ಕಾಟಾಚಾರಕ್ಕೆ ಅವರ ತಪಾಸಣೆ ಒಂದೆಡೆಯಾದರೆ, SIR ಗೆ ಕಾಂಗ್ರೆಸ್ ಸರ್ಕಾರದ ವಿರೋಧ ಇನ್ನೊಂದೆಡೆ. ಇದು ಕರ್ನಾಟಕ ದೀದೀ ನಾಡು ಪಶ್ಚಿಮ ಬಂಗಾಳ ಆಗುತ್ತದೆಯೇ ಎನ್ನುವ ಆತಂಕ ಹಲವರಲ್ಲಿ ಮನೆಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ