ಕಾರ್ಮಿಕ ಮುಷ್ಕರ, ಬ್ಯಾಂಕಿಂಗ್ ಸೇವೆ ಅನುಮಾನ!

Published : Nov 26, 2020, 08:17 AM IST
ಕಾರ್ಮಿಕ ಮುಷ್ಕರ, ಬ್ಯಾಂಕಿಂಗ್ ಸೇವೆ ಅನುಮಾನ!

ಸಾರಾಂಶ

ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳ ದೇಶವ್ಯಾಪಿ ಮುಷ್ಕರ| ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ ಈ ಕಾರ್ಮಿಕ ಮುಷ್ಕರಕ್ಕೆ ಬೆಂಬಲ| ಬ್ಯಾಂಕ್ ಸೇವೆ ವ್ಯತ್ಯಯ

ಬೆಂಗಳೂರು(ನ.26): ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳು ಗುರುವಾರ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಇದೇ ವೇಳೆ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ ಈ ಕಾರ್ಮಿಕ ಮುಷ್ಕರಕ್ಕೆ ಬೆಂಬಲ ನೀಡಿದೆ. ಹೀಗಾಗಿ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಆದರೆ ದೇಶದ ಪಪ್ರಮುಖ ಬ್ಯಾಂಕ್‌ಗಳ ಪೈಕಿ ಒಂದಾದ ಎಸ್‌ಬಿಐ ಎಂದಿನಂತೆ ಕಾರ್ಯ ನಿರ್ವಹಿಸಲಿದೆ. ಭಾರತೀಯ ಮಜದೂರ್ ಸಂಘವನ್ನು ಹೊರತುಪಡಿಸಿ ಹತ್ತು ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಮುಷ್ಕರದಲ್ಲಿ ಭಾಗಿಯಾಗಲಿದ್ದು, 25 ಕೋಟಿ ಕಾರ್ಮಿಕರು ಮುಷ್ಕರಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. 

ಇದೇ ವೇಳೆ ಸಾರ್ವಜನಿಕ ಹಾಗೂ ಖಾಸಗಿ ಬ್ಯಾಂಕುಗಳ ಮೂವತ್ತು ಸಾವಿರ ಉದ್ಯೋಗಿಗಳು ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ. 

ಕೇಂದ್ರ ಸರ್ಕಾರ ಇತ್ತೀಚೆಗೆ ಲೋಕ ಸಭೆಯಲ್ಲಿ ಮೂರು ಕಾರ್ಮಿಕ ಕಾಯ್ದೆಗಳನ್ನು ಪಾಸ್ ಮಾಡಿತ್ತು. ಈ ಕಾಯ್ದೆಗಳು ಕಾರ್ಪೋರೇಟ್ ಸ್ನೇಹಿಯಾಗಿವೆ. ಶೇ. 75 ರಷ್ಟು ಕಾರ್ಮಿಕರಿಗೆ ಕಾನೂನಾತ್ಮಕ ರಕ್ಷಣೆ ದೊರಕುವುದಿಲ್ಲ ಎಂದು ಕಾರ್ಮಿಕ ಸಂಘಟನೆಗಳು ಆರೋಪಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Actress Assault Case: ಆರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಘೋಷಿಸಿದ ಕೇರಳ ಕೋರ್ಟ್‌
ಎರಡು ಹಂತಗಳಲ್ಲಿ ನಡೆಯಲಿದೆ ಜನಗಣತಿ, 11,718 ಕೋಟಿ ಮೀಸಲಿಟ್ಟ ಸರ್ಕಾರ; ಇದೇ ಮೊದಲ ಬಾರಿಗೆ ಡಿಜಿಟಲ್‌ ಮೂಲಕ ಗಣತಿ!