ತಮಿಳುನಾಡಲ್ಲಿ ವಾಯುಭಾರ ಕುಸಿತ: 5 ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ

By Kannadaprabha NewsFirst Published Feb 3, 2023, 7:15 AM IST
Highlights

ವಾಯುಭಾರ ಕುಸಿತ ಹಿನ್ನೆಲೆ ತಮಿಳುನಾಡಿನ 5 ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ನಾಗಪಟ್ಟಿನಂ, ಮೈಲಾಡುಥುರೈ, ಹಾಗೂ ತಿರುವರೂರ್‌ ಜಿಲ್ಲೆಗಳಲ್ಲಿ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

ಚೆನ್ನೈ: ವಾಯುಭಾರ ಕುಸಿತ ಹಿನ್ನೆಲೆ ತಮಿಳುನಾಡಿನ 5 ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ನಾಗಪಟ್ಟಿನಂ, ಮೈಲಾಡುಥುರೈ, ಹಾಗೂ ತಿರುವರೂರ್‌ ಜಿಲ್ಲೆಗಳಲ್ಲಿ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಪಶ್ಚಿಮ ದಿಕ್ಕಿನಲ್ಲಿ ಗಂಟೆಗೆ 15 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಇದು ಗರಿಷ್ಠ ಗಂಟೆಗೆ 65 ಕಿ.ಮೀ ವೇಗದಲ್ಲಿ ಚಲಿಸುವ ಸಾಧ್ಯತೆಗಳಿದೆ. ಈ ಹಿನ್ನೆಲೆ ಕನ್ಯಾಕುಮಾರಿ, ತಿರುನೆಲ್ವೇಲಿ , ತೂತ್ತುಕುಡಿ, ರಾಮನಾಥಪುರಂ ಹಾಗೂ ತೆಂಕಾಸಿಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಅಲ್ಲದೇ ನೈಋುತ್ಯ ಬಂಗಾಳ ಕೊಲ್ಲಿ, ಮನ್ನಾರ್‌ ಕೊಲ್ಲಿ, ಪುದುಚೇರಿ, ಕಾರೈಕಲ್‌ ಹಾಗೂ ಶ್ರೀಲಂಕಾ ಕರಾವಳಿ ಪ್ರದೇಶಗಳಲ್ಲಿ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಇನ್ನು ತಂಜಾವೂರು(Thanjavur), ತಿರುವರೂರ್‌ (Thiruvarur), ನಾಗಪಟ್ಟಿಣಂ (Nagapattinam), ಮೈಲಾಡುಥುರೈ (Myladuthurai), ಪುದುಕೊಟ್ಟೈ (Pudukottai), ಶಿವಗಂಗಾ ಹಾಗೂ ರಾಮನಾಥಪುರಂ (Ramanathapuram) ಜಿಲ್ಲೆಗಳ ಹಲವೆಡೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಚೆನ್ನೈ ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ವರ್ಷದ ಮೊದಲ ಮಳೆ

Chikkamagaluru: ಜನೆವರಿಯಲ್ಲೂ ಮಳೆ ಕಂಡು ಮಲೆನಾಡಿಗರು ಕಂಗಾಲು!

click me!