Covid 19: ಎಚ್ಚರ! ಕೊರೋನಾ ಇನ್ನೂ ಮುಗಿದಿಲ್ಲ: ಕೇಂದ್ರ

Kannadaprabha News   | Asianet News
Published : Nov 12, 2021, 12:24 AM IST
Covid 19: ಎಚ್ಚರ! ಕೊರೋನಾ ಇನ್ನೂ ಮುಗಿದಿಲ್ಲ: ಕೇಂದ್ರ

ಸಾರಾಂಶ

*ರಾಜ್ಯ ಆರೋಗ್ಯ ಮಂತ್ರಿಗಳ ಜತೆ ಕೇಂದ್ರ ಸಭೆ *ವಿಶ್ವಾದ್ಯಂತ ಪ್ರಕರಣ ಹೆಚ್ಚುತ್ತಿವೆ *ಕೊರೋನಾ ಮುಗೀತು ಅಂತ ಅಂದುಕೊಳ್ಳಬೇಡಿ: ಮಾಂಡವೀಯ *12 ಕೋಟಿ ನಾಗರಿಕರು ಇನ್ನೂ 2ನೇ ಡೋಸ್‌ ಪಡೆದಿಲ್ಲ *ಬಸ್‌, ರೈಲು ನಿಲ್ದಾಣಗಳಲ್ಲೂ ಲಸಿಕೆ ಹಾಕಿ *ಲಸಿಕಾಕರಣಕ್ಕೆ ವೇಗ ನೀಡಲು ಕಟ್ಟುನಿಟ್ಟಿನ ಸೂಚನೆ

ನವದೆಹಲಿ(ನ.12):  ಕೊರೋನಾ ಪ್ರಕರಣಗಳ (Corona Cases) ಸಂಖ್ಯೆ ದೇಶದಲ್ಲಿ ಭಾರಿ ಪ್ರಮಾಣದಲ್ಲಿ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಕೋವಿಡ್‌ ಮುಗಿದೇ ಹೋಯಿತು ಎಂಬಂತೆ ವರ್ತಿಸುತ್ತಿರುವ ನಾಗರಿಕರು ಹಾಗೂ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆಯ ಗಂಟೆ ಬಾರಿಸಿದೆ. ಕೋವಿಡ್‌ ಮುಕ್ತಾಯವಾಯಿತು ಎಂದು ಯಾವುದೇ ಕಾರಣಕ್ಕೂ ಭಾವಿಸಬೇಡಿ. ಜಾಗತಿಕವಾಗಿ ಪ್ರಕರಣಗಳು ಏರುಮುಖವಾಗಿವೆ. ಶೇ.80ರಷ್ಟುಜನರಿಗೆ ಲಸಿಕೆ ನೀಡಲಾಗಿರುವ ಸಿಂಗಾಪುರ (Singapore) , ಬ್ರಿಟನ್‌ (Britain), ರಷ್ಯಾ (Russia) ಹಾಗೂ ಚೀನಾದಲ್ಲೂ (China) ಪ್ರಕರಣಗಳು ಹೆಚ್ಚಾಗುತ್ತಿವೆ. ಕೊರೋನಾ ವಿರುದ್ಧದ ಹೋರಾಟದ ಅಂತಿಮಘಟ್ಟದಲ್ಲಿ ನಾವಿದ್ದೇವೆ ಎಂದು ಹೇಳಿದೆ.

ಕೊರೋನಾ ಮುಗಿಯುವ ಮುನ್ನವೇ  ಶಸ್ತ್ರಾಸ್ತ್ರಗಳನ್ನು ಕೆಳಗಿಡುವುದು ಬೇಡ

ಕೋವಿಡ್‌ ಲಸಿಕಾಕರಣ (Covid Vaccination) ಹಾಗೂ ಮುನ್ನೆಚ್ಚರಿಕೆ ಕ್ರಮ ಎರಡನ್ನೂ ಪಾಲಿಸಬೇಕು ಎಂದು ರಾಜ್ಯಗಳ ಆರೋಗ್ಯ ಸಚಿವರ ಜತೆ ಗುರುವಾರ ನಡೆಸಿದ ವಿಡಿಯೋ ಕಾನ್ಫರೆನ್ಸ್‌ (video conference) ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯ (Mansukh Mandaviya) ಸಲಹೆ ಮಾಡಿದರು. ನಾವು ಕೊರೋನಾ ವಿರುದ್ಧದ ಹೋರಾಟದ ಅಂತಿಮ ಘಟ್ಟದಲ್ಲಿದ್ದೇವೆ. ಈ ಹಂತದಲ್ಲಿ ನಿರ್ಲಕ್ಷ್ಯ ಸಲ್ಲದು. ಲಸಿಕೆ ಹಾಗೂ ಹಾಗೂ ನಿಯಮ ಪಾಲನೆ ಕೋವಿಡ್‌ ವಿರುದ್ಧ ನಮಗಿರುವ ಎರಡು ಪ್ರಬಲ ಅಸ್ತ್ರಗಳು. ಕೊರೋನಾ ಮುಗಿಯುವ ಮುನ್ನವೇ ನಮ್ಮ ಶಸ್ತ್ರಾಸ್ತ್ರಗಳನ್ನು ಕೆಳಗಿಡುವುದು ಬೇಡ ಎಂದು ಕಿವಿ ಮಾತು ಹೇಳಿದರು.

ಲಸಿಕೆ ಪಡೆಯುವಂತೆ ಮಕ್ಕಳೇ ಪೋಷಕರ ಮನವೊಲಿಸಲಿ

ದೇಶದಲ್ಲಿ ನ.2ರಂದು ಆರಂಭವಾಗಿರುವ ಒಂದು ತಿಂಗಳ ಕಾಲದ ಮನೆಮನೆಗೆ ಲಸಿಕೆ ಅಭಿಯಾನದ ಪ್ರಗತಿ ಪರಿಶೀಲಿಸಿ ಆರೋಗ್ಯ ಸಚಿವರ ಜತೆ ಮಾತನಾಡಿದ ಮಾಂಡವೀಯ, ಅಭಿಯಾನ ಮುಕ್ತಾಯವಾಗುವುದರೊಳಗೆ ಅರ್ಹರಿಗೆ ಮೊದಲ ಡೋಸ್‌ ಲಸಿಕೆ ಪೂರ್ಣಗೊಳಿಸಬೇಕು. ಇದಕ್ಕಾಗಿ ಜನರ ಮನವೊಲಿಸಬೇಕು ಎಂದು ಹೇಳಿದರು. 12 ಕೋಟಿಗಿಂತ ಅಧಿಕ ಮಂದಿ ಈವರೆಗೆ ಎರಡನೇ ಡೋಸ್‌ ಪಡೆದಿಲ್ಲ. ಜನರು ಲಸಿಕೆ ಪಡೆಯಲು ಮುಂದಾಗುವಂತೆ ಮಾಡಲು ಮಕ್ಕಳನ್ನು ಬಳಸಿಕೊಳ್ಳಬೇಕು. ಲಸಿಕೆ ಪಡೆಯುವಂತೆ ಮಕ್ಕಳೇ ಪೋಷಕರ ಮನವೊಲಿಸುವಂತಾಗಬೇಕು. ಈ ಕಾರ್ಯಕ್ಕೆ ಮಕ್ಕಳನ್ನು ಬಳಸಿಕೊಳ್ಳಿ ಎಂದು ಹೇಳಿದರು.

ದೀಪಾವಳಿ ಮುಗಿಯುತ್ತಿದ್ದಂತೆ ಬೆಂಗ್ಳೂರಲ್ಲಿ ಕೊರೋನಾ ಹೆಚ್ಚಳ..!

ಬಸ್‌, ರೈಲು ನಿಲ್ದಾಣಗಳಲ್ಲಿ ಲಸಿಕೆ ವಿತರಣೆ ಆರಂಭಿಸೋಣ. ಈಗಾಗಲೇ ಕೆಲವು ರಾಜ್ಯಗಳಲ್ಲಿ ಈ ಕಾರ್ಯ ಆರಂಭವಾಗಿದೆ. ಬಸ್‌, ರೈಲು, ರಿಕ್ಷಾ ಇಳಿದವರನ್ನು ಮನವೊಲಿಸಿ ಲಸಿಕೆ ನೀಡಲಾಗುತ್ತಿದೆ. ಇದರ ಜತೆಗೆ ಪ್ರತಿ ವರ್ಗಕ್ಕೂ ಒಂದೊಂದು ದಿನ ನಿಗದಿಗೊಳಿಸಿ ಲಸಿಕೆ ನೀಡಿ. ಉದಾಹರಣೆಗೆ ವ್ಯಾಪಾರಿಗಳು, ಅಂಗಡಿ- ಮಳಿಗೆಗಳ ನೌಕರರು, ರಿಕ್ಷಾ ಎಳೆಯುವವರು ಹಾಗೂ ಆಟೋ ಚಾಲಕರಿಗೆಂದು ಒಂದೊಂದು ದಿನ ಮೀಸಲಿಡಿ ಎಂದು ತಿಳಿಸಿದರು.ಕರ್ನಾಟಕದ (Karnataka) ಪರವಾಗಿ ಕೆ. ಸುಧಾಕರ್‌ (K Sudhakar) ಅವರು ಕೇಂದ್ರ ಸಚಿವರ ಸಭೆಯಲ್ಲಿ ಭಾಗಿಯಾಗಿದ್ದರು.

 ನ್ಯೂಜಿಲೆಂಡ್‌ನಲ್ಲಿ ಏಕಾಏಕಿ ಕೋವಿಡ್‌ ಸ್ಫೋಟ!

ಈವರೆಗೆ ಅತ್ಯಂತ ಕಡಿಮೆ ಕೊರೋನಾ ಕೇಸು (Covid Cases) ದಾಖಲಾಗಿದ್ದ ನ್ಯೂಜಿಲೆಂಡ್‌ನಲ್ಲಿ (New Zealand) ಏಕಾಏಕಿ ಕೊರೋನಾ ಸ್ಫೋಟಗೊಂಡಿದೆ. ಶನಿವಾರ ಒಂದೇ ದಿನ 206 ಕೇಸ್‌ಗಳು ದಾಖಲಾಗಿವೆ. ಇದು ಕೋವಿಡ್‌ ಸಾಂಕ್ರಾಮಿಕ ಆರಂಭದ ಬಳಿಕ ದಾಖಲಾದ ಅತ್ಯಂತ ಗರಿಷ್ಠ ಸಂಖ್ಯೆ. ಈ 206 ಪ್ರಕರಣಗಳ ಪೈಕಿ ನ್ಯೂಜಿಲೆಂಡ್‌ನ ಪ್ರಮುಖ ನಗರ ಮತ್ತು ರಾಜಧಾನಿ ಆಕ್ಲೆಂಡ್‌ ಒಂದರಲ್ಲೇ 200 ಕೇಸ್‌ಗಳು ದಾಖಲಾಗಿವೆ. ಇದು ದೇಶದಲ್ಲಿ ಆತಂಕ ಮೂಡಿಡಿದೆ.

Covid19 Vaccine| ಮುಂದಿನ ವಾರದಿಂದ ಮಕ್ಕಳಿಗೂ ಕೋವಿಡ್‌ ಲಸಿಕೆ?

ಈ ಹಿಂದೆ 1 ಕೇಸ್‌ ದಾಖಲಾಗುತ್ತಿದ್ದಂತೆ, ನ್ಯೂಜಿಲೆಂಡ್‌ ಸರ್ಕಾರ ಸಂಪೂರ್ಣ ಲಾಕ್‌ಡೌನ್‌ (Lockdown) ಘೋಷಿಸಿತ್ತು ಹಾಗೂ ಗಡಿಯಲ್ಲಿ ಸಾಕಷ್ಟು ನಿರ್ಬಂಧಗಳನ್ನು ವಿದೇಶಿಗರ ಮೇಲೆ ಅದು ಹೇರಿತ್ತು. ಈ ಮೂಲಕ ಕೋವಿಡ್‌ ಮೇಲೆ ನಿಯಂತ್ರಣ ಸಾಧಿಸಿತ್ತು.ಆದಾಗ್ಯೂ ತನ್ನ 50 ಲಕ್ಷ ಜನಕ್ಕೆ ಲಸಿಕೆ ನೀಡಲು ನ್ಯೂಜಿಲೆಂಡ್‌ ಸರ್ಕಾರ ಹರಸಾಹಸ ಪಡುತ್ತಿದೆ. ಡೆಲ್ಟಾಕೊರೋನಾ ತಳಿ (Delta Covid Varient) ಭೀತಿಯಿಂದ ಜನತೆ ಸುಮಾರು 3 ತಿಂಗಳಿನಿಂದ ನಿರ್ಬಂಧದ ನಡುವೆಯೇ ಬದುಕುತ್ತಿದ್ದಾರೆ. ಸೋಮವಾರ ನಿರ್ಬಂಧ ಸಡಿಲಿಸುವ ಸಾಧ್ಯತೆ ಇತ್ತು. ಆದರೆ ಅದರ ನಡುವೆಯೇ ಇದೀಗ ಡೆಲ್ಟಾರೂಪಾಂತರಿ ವೈರಸ್‌ ಸ್ಫೋಟಗೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?