
ಅಲಿಗಢ(ಸೆ.15): 2017ಕ್ಕೂ ಮುನ್ನ ಉತ್ತರ ಪ್ರದೇಶವನ್ನು ಭೂಗತ ಪಾತಕಿಗಳು ಆಳುತ್ತಿದ್ದರು. ಆದರೆ, ಈಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ಪರಿಸ್ಥಿತಿ ಬದಲಾಗಿದೆ. ದುಷ್ಕರ್ಮಿಗಳನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅಲಿಗಢದಲ್ಲಿ ರಾಜ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಮೋದಿ, ಈ ಮುನ್ನ ಬಡವರಿಗಾಗಿ ರೂಪಿಸಿದ ಸಮಾಜ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಲು ತಡೆಯೊಡ್ಡಲಾಗಿತ್ತು. ಆದರೆ, ಈಗ ಅಂತಹ ಯಾವುದೇ ರೀತಿಯ ಅಡೆತಡೆಗಳಿಲ್ಲ. ಯೋಜನೆಯ ಪ್ರಯೋಜನಗಳು ಅಗತ್ಯ ಇದ್ದವರಿಗೆ ತಲುಪುತ್ತಿವೆ ಎಂದು ಹೇಳಿದ್ದಾರೆ.
ಇದೇ ವೇಳೆ ಉತ್ತರ ಪ್ರದೇಶ ಡಿಫೆನ್ಸ್ ಇಂಡಸ್ಟ್ರಿಯಲ್ ಕಾರಿಡಾರ್ ವತಿಯಿಂದ ಆಯೋಜಿಸಿದ್ದ ವಸ್ತು ಪ್ರದರ್ಶನಕ್ಕೂ ಮೋದಿ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಮುಂಚೆಯಲ್ಲಾ ಶಸ್ತ್ರಾಸ್ತ್ರಗಳು, ಯದ್ಧ ವಿಮಾನಗಳು, ಡ್ರೋನ್‌ಗಳು ಮತ್ತಿತರ ರಕ್ಷಣಾ ಸಲಕರಣೆಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. ಈಗ ಅವುಗಳನ್ನು ದೇಶದಲ್ಲೇ ಉತ್ಪಾದಿಸುತ್ತಿರುವುದನ್ನು ಭಾರತ ಮಾತ್ರವಲ್ಲ ಇಡೀ ವಿಶ್ವವೇ ನೋಡುತ್ತಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ