ಸಿಎಂ ಬೊಮ್ಮಾಯಿ, ಶಿಂಧೆ ಜೊತೆಯಲ್ಲಿ ಶಾ ಸುದ್ದಿಗೋಷ್ಠಿ, ರಾಜಕೀಯ ಬೇಡ, ಕೋರ್ಟ್ ನಿರ್ಧಾರದ ಬಳಿಕ ಕ್ರಮ!

By Suvarna News  |  First Published Dec 14, 2022, 8:45 PM IST

ಬೆಳಗಾವಿ ಗಡಿ ವಿವಾದ ಕುರಿತು ಕರ್ನಾಟಕ ಸಿಎಂ ಬೊಮ್ಮಾಯಿ ಹಾಗೂ ಮಹಾರಾಷ್ಟ್ರ ಸಿಎಂ ಶಿಂಧೆ ಜೊತೆ ಮಹತ್ವದ ಸಭೆ ನಡೆಸಿದ ಅಮಿತ್ ಶಾ, ಬಳಿಕ ಮಾಧ್ಯಮದ ಜೊತೆ ಮಾತನಾಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಬಳಿಕ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
 


ನವದೆಹಲಿ(ಡಿ.14): ಬೆಳಗಾವಿ ಗಡಿ ವಿವಾದದ ಕುರಿತು ಮಹತ್ವದ ಬೆಳವಣಿಗೆಯಾಗಿದೆ. ಇಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಮಾಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಎಕನಾಥ್ ಶಿಂಧೆ ಜೊತೆ ಸಭೆ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಭಯ ರಾಜ್ಯಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಮಾತುಕತೆ ಬಳಿಕ ಬೊಮ್ಮಾಯಿ ಹಾಗೂ ಶಿಂಧೆ ಜೊತೆ ಸುದ್ದಿಗೋಷ್ಠಿ ನಡೆಸಿದ ಅಮಿತ್ ಶಾ, ಸಭೆಯ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಎರಡು ರಾಜ್ಯಗಳು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.  ಬೆಳಗಾವಿ ಗಡಿ ವಿವಾದ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಕೋರ್ಟ್ ತೀರ್ಪು ಬರುವವರೆಗೂ ಎರಡೂ ರಾಜ್ಯಗಳು ವಿವಾದಿತ ಗ್ರಾಮಗಳು, ಪಟ್ಟಣಗಳನ್ನು ತಮ್ಮದೆಂದು ಹೇಳಿಕೊಳ್ಳುವಂತಿಲ್ಲ ಎಂದು ಅಮಿತ್ ಶಾ ಸ್ಪಷ್ಟವಾಗಿ ಹೇಳಿದ್ದಾರೆ.

ಗಡಿ ಸಮಸ್ಯೆ ಏನೇ ಇದ್ದರೂ ಎರಡು ರಾಜ್ಯಗಳು ರಸ್ತೆಯಲ್ಲಿ ಗಲಾಟೆ ಮಾಡುವುದಲ್ಲ. ಇದು ಸಂವಿಧಾನದ ಅನುಸಾರವಾಗಿ ಮಾಡಬೇಕು. ಈ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿರುವ ಕಾರಣ, ಯಾವುದೇ ರಾಜ್ಯ ಈ ಜಾಗ ನಮ್ಮದು ಎಂದು ಹೇಳಿಕೊಳ್ಳುವಂತಿಲ್ಲ. ಇಂದಿನ ಸಭೆಯಲ್ಲಿ ಎರಡೂ ರಾಜ್ಯದಿಂದ ಒಟ್ಟು 6 ಸಚಿವರ ನಿಯೋಗ ಈ ಕುರಿತು ಮಹತ್ವದ ಚರ್ಚೆ ನಡೆಸಲಿದೆ. ಈ ಸಚಿವರ ಸಮಿತಿ ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಗಡಿ ವಿವಾದದ ಕುರಿತು ಸಭೆ ನಡೆಸಿ ಶಾಶ್ವತ ಪರಿಹಾರದ ಸೂತ್ರಗಳನ್ನು ಮಂದಿಡಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

Tap to resize

Latest Videos

ತಾರಕಕ್ಕೇರಿದ ಗಡಿ ಸಮಸ್ಯೆ, ಅಮಿತ್ ಶಾ ಭೇಟಿಯಾದ ಸಿಎಂ ಬೊಮ್ಮಾಯಿ!

ಮಹಾರಾಷ್ಟ್ರ ಹಾಗೂ ಕರ್ನಾಟಕ ಸಿಎಂ, ಉಪಮುಖ್ಯಮಂತ್ರಿ ಸೇರಿದಂತೆ ಹಲವರ ಜೊತೆ ಮಹತ್ವದ ಸಭೆ ನಡೆಸಲಾಗಿದೆ. ಎರಡೂ ರಾಜ್ಯಗಳು ಸಮಿತಿ ರಚಿಸಲು ಒಪ್ಪಿಕೊಂಡಿದೆ. ಸದ್ಯ ಕಾನೂನು ಸುವ್ಯವಸ್ಥೆ ಕಾಪಾಡಲು ಎರಡು ರಾಜ್ಯಗಳು ಕ್ರಮ ಕೈಗೊಳ್ಳಲು ಒಪ್ಪಿಕೊಂಡಿದೆ. ಇನ್ನು ಅನ್ಯ ಭಾಷಿಕರು, ಯಾತ್ರಿಕರು, ವ್ಯಾಪಾರಿಗಳಿಗೆ, ವಾಹನಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು, ಹಿರಿಯ ಐಪಿಎಸ್ ಅಧಿಕಾರಿಯನ್ನೊಳಗೊಂಡ ಸಮತಿಯನ್ನು ರಚಿಸಲು ಎರಡೂ ರಾಜ್ಯಗಳು ಒಪ್ಪಿಕೊಂಡಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

 

Addressing the media after the meeting on the Maharashtra-Karnataka border issue. Watch live! https://t.co/p9jN0m9ajB

— Amit Shah (@AmitShah)

 

ಎರಡು ರಾಜ್ಯಗಳ ವಾದಗಳನ್ನು ಆಲಿಸಿದ್ದೇನೆ. ಇದರಲ್ಲಿ ಹಿರಿಯ ನಾಯಕರೊಬ್ಬರ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ತೆರೆದು ಸುಳ್ಳು ಸುದ್ದಿ ಹರಡಲಾಗುತ್ತಿದೆ. ಇದರಿಂದ ಈ ಗಡಿ ವಿವಾದ ಈ ಮಟ್ಟಿಗೆ ಬಿಗಡಾಯಿಸಿದೆ. ನಕಲಿ ಟ್ವಿಟರ್ ಮೂಲಕ ಕರ್ನಾಟಕ ಹಾಗೂ ಮಹಾರಾಷ್ಟ್ರ ಜನರ ಭಾವನೆಯನ್ನು ಕೆರಳಿಸುವ ಯತ್ನ ನಡೆದಿದೆ. ಈ ಕುರಿತು ದೂರು ದಾಖಲಿಸಲಾಗಿದೆ. ಇಷ್ಟೇ ಅಲ್ಲ ಈ ಕುತಂತ್ರ ಮಾಡಿದವರನ್ನು ಬಹಿರಂಗಪಡಿಸಲಾಗುತ್ತದೆ ಎಂದು ಅಮಿತ್ ಶಾ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. 

ಎರಡು ರಾಜ್ಯದ ವಿಪಕ್ಷಗಳಲ್ಲಿ ಕೇಂದ್ರ ಗೃಹ ಸಚಿವನಾಗಿ ನಾನು ಮನವಿ ಮಾಡುತ್ತೇನೆ. ಗಡಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡಬೇಡ. ಅನ್ಯಭಾಷಿಕರಿಗೆ ಸಮಸ್ಯೆಯಾಗುತ್ತಿದೆ. ಗಡಿಯಲ್ಲಿ ಎಲ್ಲಾ ಭಾಷಿಕರು ಶಾಂತಿಯುತವಾಗಿ ಜೀವನ ನಡೆಸಬೇಕು. ಹೀಗಾಗಿ ಈ ವಿಚಾರದಲ್ಲಿ ಯಾವುದೇ ರಾಜಕೀಯ ಬೇಡ ಎಂದು ಅಮಿತ್ ಶಾ ಹೇಳಿದ್ದಾರೆ.

click me!