
ಬೆಂಗಳೂರು (ಅ.09) ಬೆಂಗಳೂರಿನಿಂದ ಹಲವು ನಗರಗಳಿಗೆ ವಂದೇ ಭಾರತ್ ರೈಲು ಸೇವೆ ನೀಡುತ್ತಿದೆ. ಇದೀಗ ಬೆಂಗಳೂರಿಗೆ ಮತ್ತೊಂದು ವಂದೇ ಬಾರತ್ ರೈಲು ಸೇವೆ ಆರಂಭಗೊಳ್ಳುತ್ತಿದೆ. ಕೇಂದ್ರ ಸರ್ಕಾರ ಹೊಸ ವಂದೇ ಭಾರತ್ ರೈಲಿಗೆ ಅನುಮೋದನೆ ನೀಡಿದೆ. ಬೆಂಗಳೂರು ಹಾಗೂ ಕೇರಳದ ಎರ್ನಾಕುಲಂ ನಗರ ಸಂಪರ್ಕಿಸಲು ರೈಲು ಇದಾಗಿದೆ. ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರ ಬೇಡಿಕೆಯನ್ನು ಕೇಂದ್ರ ರೈಲ್ವೇ ಸಚಿವೆ ಅಶ್ವಿನಿ ವೈಷ್ಣವ್ ಪರಿಗಣಿಸಿದ್ದಾರೆ. ಇದರ ಬೆನ್ನಲ್ಲೇ ಅನುಮೋದನೆ ನೀಡಲಾಗಿದೆ.
ನವೆಂಬರ್ ತಿಂಗಳ ಮಧ್ಯ ಭಾಗದಲ್ಲಿ ವಂದೇ ಭಾರತ್ ರೈಲು ಸೇವೆ ಆರಂಭಗೊಳ್ಳಲಿದೆ. ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ರೈಲು ಸೇವೆ ಕೇರಳದ ತ್ರಿಶೂರ್, ಪಾಲಕ್ಕಾಡ್ ಮೂಲಕ ಸಾಗಲಿದೆ. ಹೀಗಾಗಿ ಕೇರಳ ಹಾಗೂ ಬೆಂಗಳೂರು ಸಾರಿಗೆ ಸಂಪರ್ಕ ಮತ್ತಷ್ಟು ಸುಲಭವಾಗುತ್ತಿದೆ.
ದೀಪಾವಳಿ ಸೇರಿದಂತೆ ಹಬ್ಬದ ದಿನಗಳಲ್ಲಿ ಈ ಭಾಗದ ರೈಲು ಪ್ರಯಾಣ ದುಸ್ತರವಾಗುತ್ತದೆ. ಪ್ರಯಾಣಿಕರ ಸಂಖ್ಯೆ, ಹೆಚ್ಚುವರಿ ರೈಲುಗಳಿಂದ ಟ್ರಾಫಿಕ್ ಸಮಸ್ಯೆ, ರೈಲು ಕ್ರಾಸಿಂಗ್ ಸೇರಿದಂತೆ ಹಲವು ಕಾರಣಗಳಿಂದ ಪ್ರಯಾಣ ಕಷ್ಟವಾಗುತ್ತಿದೆ. ಹೀಗಾಗಿ ವಂದೇ ಭಾರತ್ ರೈಲಿಗೆ ಆಗ್ರಹ ಕೇಳಿಬಂದಿತ್ತು. ಇದರ ಹಿನ್ನಲೆಯಲ್ಲಿ ಕೇಂದ್ರ ರೈಲ್ವೇ ಸಚಿವಾಲಯ ವಂದೇ ಭಾರತ್ ರೈಲು ಅನುಮೋದನೆ ನೀಡಿದೆ. ಮನವಿ ಸ್ವೀಕರಿಸಿ ವಂದೇ ಭಾರತ್ ರೈಲು ಸೇವೆಗೆ ಅನುಮೋದನೆ ನೀಡಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಪ್ರಧಾನಿ ನರೇಂದ್ರ ಮೋದಿ ರಾಜೀವ್ ಚಂದ್ರಶೇಖರ್ ಧನ್ಯವಾದ ತಿಳಿಸಿದ್ದಾರೆ.
ಆಗಸ್ಟ್ ತಿಂಗಳಲ್ಲಿ ರೈಲ್ವೇ ಸಚಿವಾಲಯ ಬೆಂಗಳೂರು-ಬೆಳಗಾವಿ ಸಂಪರ್ಕಿಸುವ ವಂದೇ ಭಾರತ್ ರೈಲು ಸೇವೆ ಆರಂಭಿಸಿದೆ. ಹೊಸ ವಂದೇ ಭಾರತ್ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಇದರಿಂದ ಬೆಂಗಳೂರು ಹಾಗೂ ಬೆಳಗಾವಿ ನಡುವಿನ ಪ್ರಯಾಣ ಸಮಯವೂ ಕಡಿಮೆಯಾಗಿದೆ. ಪ್ರಯಾಣಿಕರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿನಿಂದ ಇದೀಗ ಹೆಚ್ಚಿನ ಪ್ರಯಾಣಿಕರು ಸಂತಸ ಹಂಚಿಕೊಂಡಿದ್ದಾರೆ. ಪ್ರಯಾಣಿಕರ ಮೊದಲ ಆಯ್ಕೆ ವಂದೇ ಭಾರತ್ ರೈಲಾಗಿ ಮಾರ್ಪಟ್ಟಿದೆ. ವಂದೇ ಭಾರತ್ ರೈಲು ಭರ್ತಿಯಾಗಿದ್ದರೆ ಇತರ ರೈಲುಗಳಲ್ಲಿ ಟಿಕೆಟ್ ಮಾಡುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ