ಒಡಿಶಾದ ಕಟಕ್ ಜಿಲ್ಲೆಯಲ್ಲಿ ಬೆಂಗಳೂರು-ಕಾಮಾಕ್ಯ ಎಸಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹಳಿತಪ್ಪಿದ ಪರಿಣಾಮವಾಗಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 25 ಜನರು ಗಾಯಗೊಂಡಿದ್ದಾರೆ. ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯ ಕೈಗೊಂಡಿದ್ದಾರೆ.
ನವದೆಹಲಿ (ಮಾ.30): ಕಟಕ್ ಜಿಲ್ಲೆಯ ನೆರ್ಗುಂಡಿ ನಿಲ್ದಾಣದ ಬಳಿ ಭಾನುವಾರ ಬೆಂಗಳೂರು-ಕಾಮಾಕ್ಯ ಎಸಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ 11 ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ ಒಬ್ಬರು ಸಾವು ಕಂಡಿದ್ದರೆ, 25 ಮಂದಿ ಗಾಯಗೊಂಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಭಾರತೀಯ ರೈಲ್ವೆ ಪ್ರಕಟಣೆ ನೀಡಿದ್ದು , "2025 ಮಾರ್ಚ್ 30ರಂದು (ಭಾನುವಾರ) ಬೆಳಿಗ್ಗೆ ಸುಮಾರು 11:54 ಕ್ಕೆ ಕಟಕ್-ನೆರ್ಗುಂಡಿ ರೈಲ್ವೆ ವಿಭಾಗದ ನೆರ್ಗುಂಡಿ ನಿಲ್ದಾಣದ ಬಳಿ 12551 ಬೆಂಗಳೂರು-ಕಾಮಾಕ್ಯ ಎಸಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ 11 ಬೋಗಿಗಳು ಹಳಿತಪ್ಪಿವೆ. ಇಲ್ಲಿಯವರೆಗೆ ಯಾವುದೇ ಗಾಯಗಳು ಅಥವಾ ಸಾವುನೋವುಗಳು ವರದಿಯಾಗಿಲ್ಲ" ಎಂದು ತಿಳಿಸಿತ್ತು.
ಖುರ್ದಾ ರಸ್ತೆಯ ವಿಭಾಗೀಯ ರೈಲ್ವೆ ವ್ಯವಸ್ಥಾಪಕ (DRM) ಮತ್ತು ಪೂರ್ವ ಕರಾವಳಿ ರೈಲ್ವೆಯ ಜನರಲ್ ಮ್ಯಾನೇಜರ್ ಸೇರಿದಂತೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಅಪಘಾತ ಪರಿಹಾರ ಮತ್ತು ವೈದ್ಯಕೀಯ ರೈಲನ್ನು ಸಹಾಯಕ್ಕಾಗಿ ಕಳುಹಿಸಲಾಗಿದೆ. "ಸಿಕ್ಕಿಬಿದ್ದ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ಸಾಗಿಸಲು ಪ್ರಯತ್ನಗಳು ನಡೆಯುತ್ತಿವೆ" ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಪೂರ್ವ ಕರಾವಳಿ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಸಿಪಿಆರ್‌ಒ) ಅಶೋಕ್ ಕುಮಾರ್ ಮಿಶ್ರಾ, ಅಲ್ಲಿಗೆ ಎಲ್ಲಾ ವ್ಯವಸ್ಥೆಗಳನ್ನು ಕ್ರೋಢೀಕರಿಸಲಾಗಿದೆ ಮತ್ತು ಎನ್‌ಡಿಆರ್‌ಎಫ್ (ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ) ಮತ್ತು ಅಗ್ನಿಶಾಮಕ ಸೇವೆಗಳನ್ನು ಎಚ್ಚರಿಸಲಾಗಿದೆ ಎಂದು ದೃಢಪಡಿಸಿದರು. "ಸ್ಥಳಕ್ಕೆ ಪರಿಹಾರ ರೈಲನ್ನು ಕಳುಹಿಸಲಾಗಿದೆ ಮತ್ತು ನಮ್ಮ ಆನ್-ಗ್ರೌಂಡ್ ತಂಡಗಳು ಸಹ ಇವೆ" ಎಂದು ಅವರು ಹೇಳಿದರು.
ಬೆಂಗಳೂರು-ಕಾಮಾಕ್ಯ ಎಕ್ಸ್‌ಪ್ರೆಸ್ ಪ್ರಯಾಣಿಕ ರೈಲು ಅವಘಡ, ಹಳಿ ತಪ್ಪಿ ಹಲವರಿಗೆ ಗಂಭೀರ ಗಾಯ
"ಸಿಕ್ಕಿಬಿದ್ದ ಪ್ರಯಾಣಿಕರನ್ನು ಅವರ ಗಮ್ಯಸ್ಥಾನಕ್ಕೆ ತಲುಪಿಸಲು ವಿಶೇಷ ರೈಲು ವ್ಯವಸ್ಥೆ ಮಾಡಲಾಗುತ್ತಿದೆ. ರೈಲು ಪ್ರಯಾಣಿಕರು ಮತ್ತು ಅವರ ಕುಟುಂಬಗಳಿಗೆ ನಾವು ಸಹಾಯವಾಣಿ ಸಂಖ್ಯೆಗಳನ್ನು ನೀಡಿದ್ದೇವೆ. ಭುವನೇಶ್ವರ, ಭದ್ರಕ್ ಮತ್ತು ಕಟಕ್ ರೈಲು ನಿಲ್ದಾಣಗಳಲ್ಲಿ ಸಹಾಯ ಕೇಂದ್ರಗಳನ್ನು ಸಹ ಸ್ಥಾಪಿಸಲಾಗಿದೆ" ಎಂದು ECoR ವಕ್ತಾರರು ತಿಳಿಸಿದ್ದಾರೆ.
ಮಂಗಳೂರು-ಮುಂಬೈ ಇನ್ನು ಕೇವಲ 12 ಗಂಟೆ, ಶೀಘ್ರದಲ್ಲೇ ಹೊಸ ವಂದೇ ಭಾರತ್ ರೈಲು