
ಕಟಕ್(ಮಾ.30) ಭಾರತೀಯ ರೈಲ್ವೇ ಇಲಾಖೆ ಪ್ರಯಾಣಿಕರ ಸುರಕ್ಷತೆಗಾಗಿ ಹಲವು ಕ್ರಮಗಳನ್ನು ಕೈಗೊಂಡಿದೆ. ಆದರೆ ಅವಘಡಗಳ ನಿಲ್ಲುತ್ತಿಲ್ಲ. ಇದೀಗ ಮತ್ತೊಂದು ರೈಲು ಅವಘಡ ಸಂಭವಿಸಿದೆ. ಬೆಂಗಳೂರಿನಿಂದ ಹೊರಕ ಕಾಮಾಕ್ಯ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದೆ. ಕಾಮಾಕ್ಯಾ ಎಕ್ಸ್‌ಪ್ರೆಸ್ ರೈಲಿನ 11 ಬೋಗಿಗಳು ಹಳಿ ತಪ್ಪಿ ಅವಘಡ ಸಂಭವಿಸಿದೆ.ಒಡಿಶಾದ ಚೌದ್ವಾರ್ ಬಳಿ ಈ ಅವಘಡ ಸಂಭವಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆ ರೈಲ್ವೇ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ವೇಗವಾಗಿ ಸಾಗುತ್ತಿದ್ದ ರೈಲು ಹಳಿ ತಪ್ಪಿದೆ. ಹೀಗಾಗಿ ಅವಘಡದ ತೀವ್ರತೆ ಹೆಚ್ಚಾಗಿದೆ. ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ 11ಕ್ಕೂ ಹೆಚ್ಚು ಬೋಗಿಗಳು ಹಳಿ ತಪ್ಪಿದೆ. ಈ ಅವಘಡದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒರ್ವ ಪ್ರಯಾಣಿಕ ಮೃತಪಟ್ಟಿರುವುದಾಗಿ ವರದಿಯಾಗಿದೆ. 11.54ರ ವೇಳೆ ಈ ಅವಘಡ ಸಂಭವಿಸಿದೆ.
ಮಂಗಳೂರು-ಮುಂಬೈ ಇನ್ನು ಕೇವಲ 12 ಗಂಟೆ, ಶೀಘ್ರದಲ್ಲೇ ಹೊಸ ವಂದೇ ಭಾರತ್ ರೈಲು
ಚೌದ್ವಾರ್ ಬಳಿಕ ನಿರ್ಗುಂಡಿ ಬಳಿ ಈ ಅವಘಡ ಸಂಭವಿಸಿದೆ. ರಕ್ಷಣಾ ಕಾರ್ಯಗಳು ಭರದಿಂದ ಸಾಗಿದೆ. ಆದರೆ ತೀವ್ರ ಉರಿ ಬಿಸಿಲು ಹಾಗೂ ಅವಘಡದ ಪರಿಣಾಮ ಪ್ರಯಾಣಿಕರು ಆತಂಕಗೊಂಡಿದ್ದಾರೆ. ಹಲವರು ಅಸ್ವಸ್ಥಗೊಂಡಿದ್ದಾರೆ. ಹಲವು ಪ್ರಯಾಣಿಕರು ನೀರು ಕೇಳುತ್ತಿದ್ದು, ವ್ಯವಸ್ಥೆ ಮಾಡಲಾಗುತ್ತಿದೆ.
B-6 ರಿಂದ B-14ರ ವರೆಗಿನ ಬೋಗಿಗಳು ಹಳಿ ತಪ್ಪಿದೆ. ಹಳಿ ತಪ್ಪಿದ ಬೋಗಿಗಳು ಪಕ್ಕದ ಕಾಡು ಹಾಗೂ ಜಮಿನಿನ ಮೇಲೆ ಬಿದ್ದಿದೆ. ಅಪಘಾತದ ತೀವ್ರತೆ ಹೆಚ್ಚಿರುವ ಕಾರಣ ಆತಂಕ ಪ್ರಯಾಣಿಕರ ಕುಟುಂಬಸ್ಥರ ಆತಂಕವೂ ಹಚ್ಚಾಗುತ್ತಿದೆ. ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ಹಲವು ರೈಲುಗಳ ಪ್ರಯಾಣ ರದ್ದುಗೊಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ