Malleshwaram Bomb Blast Case: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಗ್ರ ಅರೆಸ್ಟ್‌!

Published : Jul 03, 2025, 11:09 PM ISTUpdated : Jul 03, 2025, 11:14 PM IST
Bengaluru Malleshwaram Bomb Blast Suspect Abubakar Arrested After 30 Years rav

ಸಾರಾಂಶ

2013ರ ಮಲ್ಲೇಶ್ವರಂ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಶಂಕಿತ ಉಗ್ರ ಅಬೂಬಕರ್‌ನನ್ನು 30 ವರ್ಷಗಳ ನಂತರ ತಮಿಳುನಾಡು ಉಗ್ರ ನಿಗ್ರಹ ಪಡೆ ಬಂಧಿಸಿದೆ. ಬಾಂಬ್ ತಯಾರಿಕೆಯಲ್ಲಿ ಪರಿಣತಿ ಹೊಂದಿದ್ದ ಅಬೂಬಕರ್, ಹಲವು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

ಬೆಂಗಳೂರು (ಜು.3): 2013ರಲ್ಲಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಶಂಕಿತ ಉಗ್ರ ಅಬೂಬಕರ್‌ನನ್ನು ತಮಿಳುನಾಡು ಉಗ್ರ ನಿಗ್ರಹ ಪಡೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಬಂಧಿಸಿದೆ. ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪಾತಕಿ ಜೊತೆಗೆ ಆತನ ಸಹಚರ ಮಹಮ್ಮದ್ ಅಲಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಲ್ಲೇಶ್ವರಂ ಬಾಂಬ್‌ ಸ್ಫೋಟಿಸಿದ್ದ ಉಗ್ರ:

ಬಾಂಬ್ ತಯಾರಿಕೆಯಲ್ಲಿ ಪರಿಣತಿ ಹೊಂದಿದ್ದ ಅಬೂಬಕರ್, 1995ರಿಂದಲೇ ಹಲವು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ. 2013ರ ಮಲ್ಲೇಶ್ವರಂ ಬಾಂಬ್ ಸ್ಫೋಟದಲ್ಲಿ ಈತನ ಕೈವಾಡದ ಬಗ್ಗೆ ಸಾಕ್ಷ್ಯಗಳು ದೊರೆತಿದ್ದವು. ಇದರ ಜೊತೆಗೆ, ದೇಶದ ವಿವಿಧೆಡೆ ನಡೆದ ಬಾಂಬ್ ಸ್ಫೋಟಗಳು ಮತ್ತು ಪ್ರಮುಖ ಹಿಂದೂಪರ ಸಂಘಟನೆಯ ಮುಖಂಡರ ಕೊಲೆ ಪ್ರಕರಣಗಳಲ್ಲಿ ಈತನ ಪಾತ್ರವಿರುವ ಬಗ್ಗೆ ತನಿಖೆಯಲ್ಲಿ ಬಹಿರಂಗವಾಗಿತ್ತು.

ಅಂದು ಏನಾಗಿತ್ತು?

ಏಪ್ರಿಲ್ 17, 2013 ರಂದು, ವಿಧಾನಸಭೆ ಚುನಾವಣೆಗೂ ಮುನ್ನ ಮಲ್ಲೇಶ್ವರಂನ ಕರ್ನಾಟಕ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ 11 ಪೊಲೀಸರು ಸೇರಿದಂತೆ ಕನಿಷ್ಠ 16 ಜನರು ಗಾಯಗೊಂಡಿದ್ದರು. ವ್ಯಾನ್ ಮತ್ತು ಕಾರಿನ ನಡುವೆ ನಿಲ್ಲಿಸಿದ್ದ ಮೋಟಾರ್ ಸೈಕಲ್‌ನಲ್ಲಿ ಬಾಂಬ್ ಇಡಲಾಗಿತ್ತು. ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್ ಉಮ್ಮಾ ಜೊತೆಗೆ ಕೈಜೋಡಿಸಿರುವ ತಮಿಳುನಾಡಿನ 20 ಕ್ಕೂ ಹೆಚ್ಚು ಜನರು ಮಲ್ಲೇಶ್ವರಂ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದರು. ಘಟನೆ ಬಳಿಕ ಶಂಕಿತ ಉಗ್ರ ಅಬೂಬಕರ್ ತಲೆಮರೆಸಿಕೊಂಡಿದ್ದ. ಉಗ್ರನಿಗಾಗಿ ಕಾರ್ಯಾಚರಣೆ ಮುಂದುವರಿಸಿದ್ದ ತನಿಖಾ ತಂಡಗಳು ಕೊನೆಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

ತಮಿಳುನಾಡು ಉಗ್ರ ನಿಗ್ರಹ ಪಡೆ ಸದ್ಯ ತನಿಖೆಯನ್ನು ತೀವ್ರಗೊಳಿಸಿದ್ದು, ಈ ಬಂಧನವು ಭಯೋತ್ಪಾದಕ ಜಾಲದ ಮೇಲೆ ಮಹತ್ವದ ಹೊಡೆತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಪುಟಿನ್‌ಗೆ ರಷ್ಯನ್ ಭಾಷೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ, ಭಾರಿ ಮೆಚ್ಚುಗೆ