ಮೂರು ರಾಮಲಲ್ಲಾ ಮೂರ್ತಿ ಕೆತ್ತನೆ, ಒಂದು ಮಾತ್ರ ರಾಮಮಂದಿರದಲ್ಲಿ ಪ್ರತಿಷ್ಠಾಪನೆ!

Published : Sep 30, 2023, 06:22 PM IST
ಮೂರು ರಾಮಲಲ್ಲಾ ಮೂರ್ತಿ ಕೆತ್ತನೆ, ಒಂದು ಮಾತ್ರ ರಾಮಮಂದಿರದಲ್ಲಿ ಪ್ರತಿಷ್ಠಾಪನೆ!

ಸಾರಾಂಶ

ಆಯೋಧ್ಯೆ ರಾಮಮಂದಿರದ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಜನವರಿ 22ಕ್ಕೆ ರಾಮ ಮಂದಿ ಉದ್ಘಾಟಿಸಲು ಎಲ್ಲಾ ತಯಾರಿ ನಡೆಯುತ್ತಿದೆ. ಜನವರಿ 22 ರಂದುು ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲು ಮೂರು ರಾಮ ಲಲ್ಲಾ ವಿಗ್ರಹ ಕೆತ್ತನೆ ಕಾರ್ಯ ನಡೆಯುತ್ತಿದೆ. ಇದರಲ್ಲಿ ಒಂದು ಮಾತ್ರ ಪ್ರತಿಷ್ಠಾಪನೆ ಮಾಡಲಾಗುತ್ತದೆ. 

ಆಯೋಧ್ಯೆ(ಸೆ.30) ಆಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರದ ಕೆಳಮಹಡಿಯನ್ನು ಉದ್ಘಾಟಿಸಲಿದ್ದಾರೆ. ಇದೇ ದಿನ ಗರ್ಭಗುಡಿಯಲ್ಲಿ ಶ್ರೀರಾಮನ  ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಈ ಪ್ರತಿಷ್ಠಾಪನೆಗೆ ಮೂರು ರಾಮಲಲ್ಲಾ ವಿಗ್ರಹ ಕೆತ್ತನೆಗೆ ಸೂಚನೆ ನೀಡಲಾಗಿತ್ತು. ಇದರಿಂದ ಮೂರು ಶ್ರೀ ರಾಮ ಲಲ್ಲಾ ವಿಗ್ರಹ ಕೆತ್ತನೆ ಕಾರ್ಯ ಅಂತಿಮ ಹಂತದಲ್ಲಿದೆ. ಆದರೆ ಈ ಪೈಕಿ ಒಂದು ವಿಗ್ರಹ ಮಾತ್ರ ಪ್ರತಿಷ್ಠಾಪನೆ ಮಾಡಲಾಗುತ್ತದೆ.

ಆಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣದಲ್ಲಿ ಹಲವು ಸೂಕ್ಷ್ಮ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಪೈಕಿ ಮೂರ್ತಿಗಳ ಪ್ರತಿಷ್ಠಾಪನೆ, ಕೆತ್ತನೆ ಕಾರ್ಯದಲ್ಲಿ ಅತೀವ ಮುತುವರ್ಜಿ ವಹಿಸಲಾಗಿದೆ. ಕಾರಣ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಿರುವ ಶ್ರೀರಾಮನ ವಿಗ್ರಹದಲ್ಲಿ ಎಳ್ಳಿನಷ್ಟು ವ್ಯತ್ಯಾಸವಾಗದಂತೆ ಎಚ್ಚರವಹಿಸಲಾಗುತ್ತಿದೆ. ಹೀಗಾಗಿ ಮೂರು ರಾಮ ಲಲ್ಲಾ ವಿಗ್ರಹ ಕೆತ್ತನೆಗೆ ಸೂಚನೆ ನೀಡಲಾಗಿದೆ.

ರಾಮಮಂದಿರ ಉದ್ಘಾಟನೆಗೆ ದಿನಗಣನೆ: ಅಯೋಧ್ಯೆ ತಲುಪಿದ ಮಂಗಳೂರು ನಾಗಲಿಂಗ ಪುಷ್ಪ !

ಕೆತ್ತನೆ ಕಾರ್ಯದಲ್ಲಿ ಪರಿಣಿತರಾಗಿರುವ ಮೂವರಿಗೆ ಈ ಜವಾಬ್ದಾರಿ ನೀಡಲಾಗಿದೆ.  ಮೂವರ ಶ್ರೀರಾಮ ಲಲ್ಲಾ ವಿಗ್ರಹ ಕೆತ್ತನೆ ಕಾರ್ಯ ಮಾಡುತ್ತಿದ್ದಾರೆ. ಮೂರ್ತಿ ಕೆತ್ತನೆ ಅಂತಿಮ ಹಂತದಲ್ಲಿದೆ. ಈ ಪೈಕಿ ಮೂರರಲ್ಲಿ ಅತ್ಯುತ್ತಮ ರಾಮ ಲಲ್ಲಾ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಇನ್ನುಳಿದ 2 ವಿಗ್ರಹಗಳನ್ನು ಆಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಾಯಣದ ಕುರುಹುಗಳ ವಸ್ತುಸಂಗ್ರಹಾಲಯದಲ್ಲಿ ಇಡಲಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವರ್ಷ ಜ.22ರಂದು ಉದ್ಘಾಟನೆ ಮಾಡಲಿದ್ದಾರೆ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ. ಅಂದೇ ಗರ್ಭಗುಡಿಯಲ್ಲಿ ಶ್ರೀರಾಮನ ವಿಗ್ರಹವನ್ನೂ ಪ್ರತಿಷ್ಠಾಪಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ರಾಮನ ಸುಂದರ ಮೂರ್ತಿಯನ್ನು ಕೆತ್ತಿದ್ದು ಅದನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗುವುದು.

ಈ ಹಿಂದಿನ ವರದಿಗಳ ಪ್ರಕಾರ ಡಿಸೆಂಬರ್‌ ಅಂತ್ಯದ ವೇಳೆಗೆ ರಾಮಮಂದಿರ ಮೊದಲ ಹಂತ ಪೂರ್ಣಗೊಳ್ಳಲಿದ್ದು, 2023ರ ಸಂಕ್ರಾತಿ ದಿನದಂದು ಗರ್ಭಗುಡಿಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಹೇಳಲಾಗಿತ್ತು.  ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆಗೆ ಇನ್ನೂ 6 ತಿಂಗಳು ಬಾಕಿ ಇರುವಾಗಲೇ ಸಮಾರಂಭದಲ್ಲಿ ಭಾಗಿಯಾಗಲು ಜನರು ನಗರದ ಹೋಟೆಲ್‌ ಮತ್ತು ಟ್ರಾವೆಲ್‌ ಏಜೆನ್ಸಿಗಳಲ್ಲಿ ಮುಂಗಡವಾಗಿ ಬುಕಿಂಗ್‌ ಶುರು ಮಾಡಿದ್ದಾರೆ.

ರಾಮಮಂದಿರ ಉದ್ಘಾಟನೆಯಾಗುವ ಮುನ್ನವೇ ಅಯೋಧ್ಯೆ ವಿಮಾನ ನಿಲ್ದಾಣ ಸಿದ್ಧ

ಅಯೋಧ್ಯೆ ಜಿಲ್ಲಾಧಿಕಾರಿ ಗೌರವ್‌ ದಯಾಳ್‌ ಅತಿಥಿಗಳಿಗೆ ಉತ್ತಮ ಸ್ವಾಗತ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಮಾಡುವಂತೆ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳ ಮಾಲೀಕರ ಸಭೆ ಕರೆದಿದ್ದ ವೇಳೆ ಈ ಬಗ್ಗೆ ತಿಳಿಸಿರುವ ಮಾಲೀಕರು ‘ಕೆಲವರು 10 ರಿಂದ 12 ದಿನಗಳ ಕಾಲ ದಿನಗಳವರೆಗೆ ಕೊಠಡಿಗಳನ್ನು ಕಾಯ್ದಿರಿಸುತ್ತಿದ್ದಾರೆ. ದೆಹಲಿ, ಬಾಂಬೆ ಮತ್ತು ಇತರ ಪ್ರಮುಖ ನಗರಗಳಿಂದ ಕರೆ ಬರುತ್ತಿವೆ’ ಎಂದಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ
25 ಜನರು ಸಾವನ್ನಪ್ಪಿದ ಪಬ್‌ ಮಾಲೀಕರ ರೆಸಾರ್ಟ್‌ ಧ್ವಂಸ