
ನವದೆಹಲಿ: ಆನ್‌ಲೈನ್ ಬೆಟ್ಟಿಂಗ್ ಮತ್ತು ಗೇಮಿಂಗ್ ಪ್ಲಾಟ್‌ಫಾರ್ಮ್‌ಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ(ಇ.ಡಿ.)ವು ಕೆಲ ಕ್ರೀಡಾಪಟುಗಳು ಹಾಗೂ ನಟ-ನಟಿಯರ ನೂರಾರು ಕೋಟಿ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಮುಟ್ಟುಗೋಲು ಹಾಕುವ ಸಾಧ್ಯತೆ ಇದೆ.
ಈ ಪ್ರಕರಣ ಸಂಬಂಧ ಕಳೆದ ಕೆಲ ದಿನಗಳಿಂದ ಜಾರಿ ನಿರ್ದೇಶನಾಲಯವು ಕ್ರಿಕೆಟರ್‌ಗಳಾದ ಯುವರಾಜ್ ಸಿಂಗ್, ಸುರೇಶ್ ರೈನಾ, ರಾಬಿನ್ ಉತ್ತಪ್ಪ, ಶಿಖರ್ ಧವನ್, ನಟರಾದ ಸೋನು ಸೂದ್, ಮಿಮಿ ಚಕ್ರವರ್ತಿ, ಅಂಕುಶ್ ಹಝಾರಾ ಅವರನ್ನು ತನಿಖೆಗೆ ಒಳಪಡಿಸಿದೆ. ಅಲ್ಲದೆ ಕೆಲ ಆನ್‌ಲೈನ್ ಇನ್‌ಫ್ಲ್ಯೂಯೆನ್ಸರ್‌ಗಳನ್ನು ಈ ಕುರಿತು ಪ್ರಶ್ನೆ ಮಾಡಲಾಗಿದೆ. ನಟಿ ಊರ್ವಶಿ ರೌಟೇಲಾ ಅವರು 1ಎಕ್ಸ್‌ಬೆಟ್‌ನ ಭಾರತದ ರಾಯಭಾರಿಯಾಗಿದ್ದು, ಅವರಿಗೂ ಸಮನ್ಸ್ ನೀಡಲಾಗಿದೆ. ಆದರೆ, ವಿದೇಶದಲ್ಲಿರುವ ಕಾರಣ ಆಕೆ ಈವರೆಗೆ ಹೇಳಿಕೆ ನೀಡಿಲ್ಲ ಎನ್ನಲಾಗಿದೆ.
ಕುರಕಾವೋದಲ್ಲಿ ನೋಂದಣಿಯಾಗಿರುವ ‘1ಎಕ್ಸ್‌ಬೆಟ್’ ಕಂಪನಿಯು ಅಂತಾರಾಷ್ಟ್ರೀಯಮಟ್ಟದಲ್ಲಿ ಬೆಟ್ಟಿಂಗ್ ವ್ಯವಹಾರ ನಡೆಸುತ್ತಿದೆ. ಈ ಬೆಟ್ಟಿಂಗ್ ವೆಬ್‌ಸೈಟ್ ಹಾಗೂ ಆ್ಯಪ್ ಕುರಿತ ತನಿಖೆ ವೇಳೆ ಇದರ ಪರ ಪ್ರಚಾರಕ್ಕಾಗಿ ಹಲವು ಸೆಲೆಬ್ರಿಟಿಗಳು ಸಂಭಾವನೆ ಪಡೆದಿರುವುದು ಮತ್ತು ಆ ಸಂಭಾವನೆಯಲ್ಲಿ ಆಸ್ತಿಗಳನ್ನು ಖರೀದಿಸಿರವುದು ಬೆಳಕಿಗೆ ಬಂದಿತ್ತು. ಅಕ್ರಮ ಹಣ ವರ್ಗಾವಣೆ ಕಾನೂನಿನಡಿ ಈ ಆಸ್ತಿಯನ್ನು ಕ್ರಿಮಿನಲ್ ಚಟುವಟಿಕೆಗಳಿಂದ ಗಳಿಸಿದ ಆಸ್ತಿ ಎಂಬುದಾಗಿ ಪರಿಗಣಿಸಲು ಅವಕಾಶವಿದೆ ಎಂದು ಮೂಲಗಳು ತಿಳಿಸಿವೆ.
ಹೀಗಾಗಿ ಜಾರಿ ನಿರ್ದೇಶನಾಲಯವು ಶೀಘ್ರದಲ್ಲೇ ಹಲವು ಕ್ರೀಡಾಪಟುಗಳು ಹಾಗೂ ಸೆಲೆಬ್ರಿಟಿಗಳ ಯುಎಇ ಸೇರಿ ವಿದೇಶದಲ್ಲಿರುವ ಆಸ್ತಿಗಳನ್ನೂ ಜಪ್ತಿ ಮಾಡಿಕೊಳ್ಳುವ ನಿರೀಕ್ಷೆ ಇದೆ. ಈ ಆಸ್ತಿಗಳ ಪ್ರಮಾಣೀಕರಣ ಹಾಗೂ ಮೌಲ್ಯ ನಿರ್ಣಯ ಕಾರ್ಯ ಈಗಾಗಲೇ ನಡೆಯುತ್ತಿದೆ. ಜಪ್ತಿ ಆದೇಶ ಹೊರಬಿದ್ದ ಬಳಿಕ ನ್ಯಾಯಾಲಯಕ್ಕೆ ಆ ಆಸ್ತಿಗಳನ್ನು ಮುಟ್ಟುಗೋಲು ಹಾಕಲು ಜಾರ್ಜ್‌ಶೀಟ್ ಹಾಕಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ