ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವೆ: ಭಗವಂತ ಖೂಬಾ

By Kannadaprabha News  |  First Published Jul 9, 2021, 10:13 AM IST
  • ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ರಾಜ್ಯ ಸಚಿವರಾಗಿ ಮಲ್ಲಿಕಾಜುನ ಖೂಬಾ
  • ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಖೂಬಾ ಮಾಹಿತಿ

 ನವದೆಹಲಿ (ಜು.09):  ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ರಾಜ್ಯ ಸಚಿವರಾಗಿ ಮಲ್ಲಿಕಾಜುನ ಖೂಬಾ ಅವರು ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಖೂಬಾ ತಿಳಿಸಿದ್ದಾರೆ.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿ, ಪ್ರಧಾನಿ ಮೋದಿ ಹೊಸ ಜವಾಬ್ದಾರಿ ನೀಡಿದ್ದಾರೆ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇನೆ. ನನಗೆ ವಹಿಸಿದ ಜವಾಬ್ದಾರಿಗೆ ಯಾವುದೇ ಚ್ಯುತಿ ಬರದಂತೆ ಕೆಲಸ ನಿರ್ವಹಣೆ ಮಾಡುತ್ತೇನೆ ಎಂದು ತಿಳಿಸಿದರು.

Tap to resize

Latest Videos

undefined

ಧರಂರನ್ನು ಮಣಿಸಿದ್ದ ಅಡ್ವಾಣಿ ಶಿಷ್ಯನಿಗೆ ಕೇಂದ್ರ ಮಂತ್ರಿ ಸ್ಥಾನ! ...

ಆಡಳಿತ ಇರುವುದೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು. ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತೇವೆ. ಹಿರಿಯರ ಸಲಹೆ, ಮಾರ್ಗದರ್ಶನ ಪಡೆದು ಕೆಲಸ ನಿರ್ವಹಣೆ ಮಾಡುತ್ತೇವೆ ಎಂದು ತಿಳಿಸಿದರು. ರಾಜ್ಯದವರೇ ಆಗಿದ್ದ ಡಾ.ಡಿ.ವಿ.ಸದಾನಂದ ಗೌಡ ಅವರ ಕೈಯಲ್ಲಿದ್ದ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಿಕ್ಕಿದ್ದಕ್ಕೆ ಖೂಬಾ ಸಂತಸ ವ್ಯಕ್ತಪಡಿಸಿದರು.

click me!