ಖ್ಯಾತ ಭರತನಾತ್ಯ ಕಲಾವಿದೆ ಹಾಗೂ ಪದ್ಮ ಪ್ರಶಸ್ತಿ ಪುರಷ್ಕೃತೆ ಯಾಮಿನಿ ಕೃಷ್ಣಮೂರ್ತಿ ನಿಧನ

By Kannadaprabha News  |  First Published Aug 4, 2024, 8:19 AM IST

ಖ್ಯಾತ ಭರತನಾತ್ಯ ಕಲಾವಿದೆ ಹಾಗೂ ಪದ್ಮ ಪ್ರಶಸ್ತಿ ಪುರಷ್ಕೃತೆ ಯಾಮಿನಿ ಕೃಷ್ಣಮೂರ್ತಿ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಶನಿವಾರ ಕೊನೆಯುಸಿರೆಳೆದಿದ್ದಾರೆ.


ನವದೆಹಲಿ (ಆ.4): ಖ್ಯಾತ ಭರತನಾತ್ಯ ಕಲಾವಿದೆ ಹಾಗೂ ಪದ್ಮ ಪ್ರಶಸ್ತಿ ಪುರಷ್ಕೃತೆ ಯಾಮಿನಿ ಕೃಷ್ಣಮೂರ್ತಿ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಶನಿವಾರ ಕೊನೆಯುಸಿರೆಳೆದಿದ್ದಾರೆ.

84 ವರ್ಷ ವಯಸ್ಸಿನ ಇವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಕಳೆದ 7 ತಿಂಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಮ್ಯಾನೇಜರ್ ಹಾಗೂ ಕಾರ್ಯದರ್ಶಿಯಾಗಿದ್ದ ಗಣೇಶ್ ಮಾಹಿತಿ ನೀಡಿದ್ದಾರೆ.

Latest Videos

undefined

ಅಪರ್ಣಾ ಮಾತಲ್ಲಿ ಕನ್ನಡ ಕೇಳೋದೇ ಒಂದು ಖುಷಿ: ಮಜಾ ಟಾಕೀಸ್‌ನ ದಿನಗಳ ನೆನೆದು ಕಣ್ಣೀರಾದ ಇಂದ್ರಜಿತ್ ಲಂಕೇಶ್

ಕಲಾವಿದೆಯ ಮೃತ ದೇಹವನ್ನು ಅವರೇ ಸ್ಥಾಪಿಸಿರುವ ‘ಯಾಮಿನಿ ಸ್ಕೂಲ್ ಆಫ್‌ ಡ್ಯಾನ್ಸ್‌’ಗೆ ಭಾನುವಾರ ಬೆಳಗ್ಗೆ 9 ಗಂಟೆಗೆ ತಂದು ಅಂತಿಮ ದರ್ಶನಕ್ಕೆ ಇಡಲಾಗುತ್ತದೆ.

ಆಂದ್ರಪ್ರದೇಶ ಮೂಲದವರಾದ ಯಾಮಿನಿ, 2016ರಲ್ಲಿ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣಕ್ಕೆ ಭಾಜನರಾಗಿದ್ದಾರೆ.

click me!