
ಲಖನೌ/ವಾರಾಣಸಿ(ಮಾ.18): ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಪತ್ನಿ ನೀತಾ ಅಂಬಾನಿ ಅವರನ್ನು ಅತಿಥಿ ಉಪನ್ಯಾಸಕರಾಗಿ ನೇಮಕ ಮಾಡಲು ಬನರಾಸ್ ಹಿಂದೂ ವಿಶ್ವವಿದ್ಯಾಲಯ ಮುಂದಾಗಿದೆ.
ಕೆಲಸಗಾರರ ಮತ್ತು ಕುಟುಂಬಗಳ ವ್ಯಾಕ್ಸೀನ್ ಖರ್ಚು ವಹಿಸಿಕೊಂಡ ರಿಲಯನ್ಸ್
ಸಾಮಾಜಿಕ ವಿಜ್ಞಾನ ವಿಭಾಗದಲ್ಲಿ 3 ಅತಿಥಿ ಉಪನ್ಯಾಸಕರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ ಒಂದು ಸ್ಥಾನಕ್ಕೆ ನೀತಾ ಅಂಬಾನಿಗೆ ಪ್ರಸ್ತಾವನೆ ರವಾನಿಸಲಾಗಿದೆ. ಇನ್ನುಳಿದ 2 ಸ್ಥಾನಗಳಿಗಾಗಿ ಉದ್ಯಮಿ ಗೌತಮ್ ಅದಾನಿ ಪತ್ನಿ ಪ್ರೀತಿ ಅದಾನಿ ಹಾಗೂ ಲಕ್ಷ್ಮೇ ಮಿತ್ತಲ್ ಪತ್ನಿ ಉಷಾ ಮಿತ್ತಲ್ ಅವರ ಹೆಸರುಗಳನ್ನು ಪರಿಗಣಿಸಲಾಗುತ್ತಿದೆ ಎನ್ನಲಾಗಿದೆ. ಆದರೆ ವಿವಿಯ ಈ ಪ್ರಸ್ತಾಪಕ್ಕೆ ಕೆಲ ವಿದ್ಯಾರ್ಥಿಗಳು ತೀವ್ರ ಆಕ್ಷೆಪ ವ್ಯಕ್ತಪಡಿಸಿದ್ದಾರೆ.
ಈ ನಡುವೆ ನೀತಾ ಅಂಬಾನಿ ಅವರನ್ನು ಸಾಮಾಜಿಕ ವಿಜ್ಞಾನದ ಅತಿಥಿ ಉಪನ್ಯಾಸಕಿಯಾಗಿ ನೇಮಿಸಿಕೊಳ್ಳುವ ಕುರಿತಾಗಿ ಈವರೆಗೆ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಸ್ಪಷ್ಟಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ