ಬೈಡೆನ್‌, ಮೋದಿ ಮೊದಲ ಮಾತುಕತೆ: ಅಮೆರಿಕ ನೂತನ ಅಧ್ಯಕ್ಷ ಶುಭ ಕೋರಿದ ಪಿಎಂ!

Published : Nov 18, 2020, 09:10 AM ISTUpdated : Nov 18, 2020, 09:11 AM IST
ಬೈಡೆನ್‌, ಮೋದಿ ಮೊದಲ ಮಾತುಕತೆ: ಅಮೆರಿಕ ನೂತನ ಅಧ್ಯಕ್ಷ ಶುಭ ಕೋರಿದ ಪಿಎಂ!

ಸಾರಾಂಶ

ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡೆನ್‌ಗೆ ಕರೆ ಮಾಡಿ ಶುಭ ಕೋರಿ| ಕಮಲಾ ಹ್ಯಾರಿಸ್‌ಗೂ ಶುಭಾಶಯ ತಿಳಿಸಿದ ಮೋದಿ| ಉಭಯ ತರಾಷ್ಟ್ರದ ನಾಯಕರ ನಡುವೆ ಮಹತ್ವದ ಮಾತುಕತೆ

ನವದೆಹಲಿ(ನ.18) ಪಿಎಂ ಮೋದಿ ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡೆನ್‌ಗೆ ಕರೆ ಮಾಡಿ ಶುಭ ಕೋರಿದ್ದಾರೆ. ಟ್ವೀಟ್ ಮೂಲಕ ಪಿಎಂ ಈ ಮಾಹಿತಿಯನ್ನು ನೀಡಿದ್ದಾರೆ. 

ಚುನಾವಣೆ ಮುಗಿದರೂ ನಿಲ್ಲದ ಟೀಕೆ: ಬೈಡೆನ್ ವಿರುದ್ಧ ಗಂಭೀರ ಆರೋಪ!

ತಮ್ಮ ಟ್ವೀಟ್‌ನಲ್ಲಿ ಪಿಎಂ ಮೋದಿ ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡೆನ್‌ಗೆ ಕರೆ ಮಾಡಿ ಶುಭ ಕೋರಿದ್ದೇನೆ. ನಾವು ಭಾರತ ಹಾಗೂ ಅಮೆರಿಕ ನಡುವಿನ ಕಾರ್ಯತಂತ್ರದ ಸಹಭಾಗಿತ್ವಕ್ಕೆ ನಮ್ಮ ದೃಢವಾದ ನಿರ್ಧಾರವನ್ನು ತಳೆದಿದ್ದೇವೆ. ಕೋವಿಡ್ -19 ಸಾಂಕ್ರಾಮಿಕ, ಹವಾಮಾನ ಬದಲಾವಣೆ, ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಸಹಕಾರ ಸೇರಿದಂತೆ ಉಭಯ ರಾಷ್ಟ್ರಗಳ ಆದ್ಯತೆಯ ಬಗ್ಗೆ ಚರ್ಚಿಸಲಾಗಿದೆ ಎಂದಿದ್ದಾರೆ.

ಅಮೆರಿಕ ಮೇಲೆ ಕೋವಿಡ್‌ ಲಾಕ್‌ಡೌನ್‌ ತೂಗುಕತ್ತಿ!

ಇದೇ ವೇಳೆ ಅಮೆರಿಕ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಕಮಲಾ ಹ್ಯಾರಿಸ್ ಅವರಿಗೆ ನಾನು ಆತ್ಮೀಯ ಅಭಿನಂದನೆಗಳನ್ನು ತಿಳಿಸಿದ್ದೇನೆ. ಅವರ ಯಶಸ್ಸು ಇಂಡೋ-ಯುಎಸ್ ಸಂಬಂಧಗಳಿಗೆ ಅಪಾರ ಶಕ್ತಿಯ ಮೂಲವಾಗಿದೆ ಮಾತ್ರವಲ್ಲದೆ, ಭಾರತೀಯ-ಅಮೇರಿಕನ್ ಸಮುದಾಯದ ಸದಸ್ಯರಿಗೆ ಹೆಮ್ಮೆ ಮತ್ತು ಸ್ಫೂರ್ತಿಯ ಸಂಗತಿಯಾಗಿದೆ ಎಂದು ಪಿಎಂ ಮೋದಿ ತಿಳಿಸಿದ್ದಾರೆ.
    
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?
ಗೆಳೆಯರ ಜೊತೆ ಟ್ರಿಪ್ ಹೋಗಿದ್ದ ಬೆಂಗಳೂರು ನಿವಾಸಿ ಗೋವಾ ನೈಟ್ ಕ್ಲಬ್ ದುರಂತದಲ್ಲಿ ಮೃತ