Latest Videos

ಬಿಜೆಪಿಯ ಸ್ಟಾರ್ ನಾಯಕಿ ಸ್ಮೃತಿ ಇರಾನಿಗೆ ಹೀನಾಯ ಸೋಲು; ಗೆದ್ದ ಕಾಂಗ್ರೆಸ್

By Mahmad RafikFirst Published Jun 4, 2024, 3:04 PM IST
Highlights

Amethi Lok sabha Election Results: ಸ್ಮೃತಿ ಇರಾನಿ ಸಹ ಅಮೇಥಿಯಲ್ಲಿ ಸ್ಪರ್ಧೆ ಮಾಡುವಂತೆ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿದ್ದರು. ಅಂತಿಮವಾಗಿ ಕಾಂಗ್ರೆಸ್ ಸ್ಥಳೀಯ ಮುಖಂಡ ಕಿಶೋರಿ ಲಾಲ್ ಶರ್ಮಾ ಅವರಿಗೆ ಟಿಕೆಟ್ ನೀಡಿತ್ತು.

ಲಕ್ನೋ: ಬಿಜೆಪಿ ಸ್ಟಾರ್ ನಾಯಕಿ, ಮೋದಿ ಸಂಪುಟದ ಸಚಿವೆ ಸ್ಮೃತಿ ಇರಾನಿ (Smriti Irani) ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ (Amethi Lok Sabha Constituency) ಹೀನಾಯವಾಗಿ ಸೋತಿದ್ದಾರೆ. 2019ರ ಚುನಾವಣೆಯಲ್ಲಿ ರಾಹುಲ್ ಗಾಂಧಿ (Congress Leader Rahul Gandhi) ವಿರುದ್ಧ ಸ್ಮೃತಿ ಇರಾನಿ ಗೆದ್ದಿದ್ದರು. 2014ರಲ್ಲಿ ಸ್ಮೃತಿ ಇರಾನಿ ಅವರನ್ನು ದೆಹಲಿಯಿಂದ ಅಮೇಥಿಗೆ ಕರೆದುಕೊಂಡು ಬರಲಾಗಿತ್ತು. 2014ರ ಚುನಾವಣೆಯಲ್ಲಿಯೂ ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಸ್ಮೃತಿ ಇರಾನಿ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ (PM Narendra Modi Cabinet) ಸಚಿವೆ ಸ್ಥಾನ ನೀಡಲಾಗಿತ್ತು. ಈ ಬಾರಿ ಗೆಲ್ಲುವ ಹುಮ್ಮಸ್ಸಿನಲ್ಲಿದ್ದ ಸ್ಮೃತಿ ಇರಾನಿ ಅಮೇಥಿಯಲ್ಲಿ ಮನೆ ಸಹ ಮಾಡಿಕೊಂಡಿದ್ದರು. 

ಈ ಬಾರಿ ರಾಹುಲ್ ಗಾಂಧಿ ಅವರೇ ಅಮೇಥಿಯಿಂದ ಸ್ಪರ್ಧೆ ಮಾಡ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇತ್ತ ಸ್ಮೃತಿ ಇರಾನಿ ಸಹ ಅಮೇಥಿಯಲ್ಲಿ ಸ್ಪರ್ಧೆ ಮಾಡುವಂತೆ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿದ್ದರು. ಅಂತಿಮವಾಗಿ ಕಾಂಗ್ರೆಸ್ ಸ್ಥಳೀಯ ಮುಖಂಡ ಕಿಶೋರಿ ಲಾಲ್ ಶರ್ಮಾ ಅವರಿಗೆ ಟಿಕೆಟ್ ನೀಡಿತ್ತು. ಸ್ಮೃತಿ ಇರಾನಿ 90 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋತಿದ್ದು, ಅಧಿಕೃತ ಘೋಷಣೆಯೊಂದು ಬಾಕಿ ಉಳಿದಿದೆ. 

Breaking: ಟಿಡಿಪಿ ನಾಯಕ ಚಂದ್ರಬಾಬು ನಾಯ್ಡುಗೆ ಕರೆ ಮಾಡಿದ ಪ್ರಧಾನಿ ಮೋದಿ!

ಕಿಶೋರಿ ಲಾಲ್ ಶರ್ಮಾ ಗೆಲುವು

ಮಧ್ಯಾಹ್ನ 2ಗಂಟೆಯ ಚುನಾವಣೆ ಆಯೋಗದ ಮಾಹಿತಿ ಪ್ರಕಾರ, ಸ್ಮೃತಿ ಇರಾನಿ 2,39,981 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್‌ನ ಕಿಶೋರಿ ಲಾಲ್‌ ಶರ್ಮಾ 3,35,943 ಮತಗಳನ್ನು ಪಡೆದುಕೊಂಡಿದ್ದಾರೆ. ಸ್ಮೃತಿ ಇರಾನಿ ವಿರುದ್ಧ ಪ್ರತಿ ಸುತ್ತಿನಲ್ಲಿಯೂ ಕಿಶೋರಿ ಲಾಲ್‌ ಶರ್ಮಾ ಮುನ್ನಡೆ ಕಾಯ್ದುಕೊಳ್ಳುತ್ತಾ ಬಂದಿದ್ರು. ಇತ್ತ ರಾಯ್‌ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಗೆಲುವು ದಾಖಲಿಸಿದ್ದಾರೆ. 

18ನೇ ಲೋಕಸಭೆಯ 543 ಸದಸ್ಯರನ್ನು ಆಯ್ಕೆ ಮಾಡಲು ಭಾರತದಲ್ಲಿ 19 ಏಪ್ರಿಲ್ 2024 ರಿಂದ 1 ಜೂನ್ 2024 ರವರೆಗೆ ಸಾರ್ವತ್ರಿಕ ಚುನಾವಣೆಗಳು ನಡೆದಿದ್ದವು. ಚುನಾವಣೆಗಳು ಏಳು ಹಂತಗಳಲ್ಲಿ ನಡೆದಿದ್ದು ಇಂದು ಫಲಿತಾಂಶ ಪ್ರಕಟವಾಗಿದೆ. ಚುನಾವಣೆಗೂ ಮುನ್ನವೇ ಸೂರತ್‌ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.  ಅಧಿಕಾರಕ್ಕೆ ಏರಲು 272 ಸೀಟ್‌ಗಳ ಗೆಲುವು ಮ್ಯಾಜಿಕ್‌ ನಂಬರ್‌ ಆಗಿದೆ. ಈ ಬಾರಿ ಒಟ್ಟು ಶೇ. 66.33ರಷ್ಟು ಮತದಾನವಾಗಿದೆ.

ಬಿಜೆಪಿಗೆ ಕೇರಳದಲ್ಲಿ ಗುಡ್ ನ್ಯೂಸ್, ಸುರೇಶ್ ಗೋಪಿಗೆ ಗೆಲುವು ಬಹುತೇಕ ಖಚಿತ!

ಬಿಜೆಪಿ  ಏಕಾಂಗಿಯಾಗಿ 441 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರೆ, ಕಾಂಗ್ರೆಸ್‌ 328 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.  ಬಹುತೇಕ ಎಲ್ಲಾ ಎಕ್ಸಿಟ್‌ ಪೋಲ್‌ಗಳು ಕೂಡ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಅಧಿಕಾರಯುತವಾಗಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ ಎನ್ನುವ ಸಮೀಕ್ಷೆ ನೀಡಿದ್ದವು. ದೈನಿಕ್‌ ಭಾಸ್ಕರ್‌ ನೀಡಿದ್ದ 316 ಸೀಟ್‌ಗಳು ಎಕ್ಸಿಟ್‌ ಪೋಲ್‌ನಲ್ಲಿ ಎನ್‌ಡಿಎಯ ಕನಿಷ್ಠವಾಗಿದ್ದರೆ,  ಟುಡೇಸ್‌ ಚಾಣಕ್ಯದ 400 ಸೀಟ್‌ಗಳು ಗರಿಷ್ಠವಾಗಿದ್ದವು.

click me!