ಹಿಂದುಳಿದ ವರ್ಗಗಳಿಗೆ ಶೇ. 65ರಷ್ಟು ಮೀಸಲಾತಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್‌!

By Santosh Naik  |  First Published Jul 29, 2024, 11:45 AM IST

ಹಿಂದುಳಿದ ವರ್ಗಗಳಿಗೆ ಬಿಹಾರದ 65% ಕೋಟಾವನ್ನು ರದ್ದುಗೊಳಿಸಿದ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.
 


ನವದೆಹಲಿ (ಜು.29): ಬಿಹಾರದಲ್ಲಿ ಹಿಂದುಳಿದ ವರ್ಗಗಳ ಶೇ 65ರಷ್ಟು ಕೋಟಾವನ್ನು ರದ್ದುಗೊಳಿಸಿದ್ದ ಪಾಟ್ನಾ ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಶೇ.50ರಿಂದ ಶೇ.65ಕ್ಕೆ ಹೆಚ್ಚಿಸಿರುವುದನ್ನು ರದ್ದುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ಬಿಹಾರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್‌ ತೀರ್ಪಿನಿಂದ ಬಿಹಾರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ದಾಖಲಾತಿಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಸರ್ಕಾರ ಹೆಚ್ಚಳ ಮಾಡಿತ್ತು. ಈ ನಿರ್ಧಾರಕ್ಕೆ ಪಾಟ್ನಾ ಹೈಕೋರ್ಟ್ ತಡೆ ನೀಡಿತ್ತು. ಈಗ ಪಾಟ್ನಾ ಹೈಕೋರ್ಟ್‌ ನೀಡಿದ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹಿಂದುಳಿದ ವರ್ಗಗಳು, ಎಸ್‌ಸಿ , ಎಸ್‌ಟಿಗಳಿಗೆ ಸರ್ಕಾರಿ ಉದ್ಯೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳ ಮೀಸಲಾತಿಯನ್ನು ಶೇಕಡಾ 50 ರಿಂದ 65 ಕ್ಕೆ ಬಿಹಾರ ಸರ್ಕಾರ ಹೆಚ್ಚಿಸಿತ್ತು. ಪಾಟ್ನಾ ಹೈಕೋರ್ಟ್‌ ಆದೇಶದ ವಿರುದ್ಧ ಬಿಹಾರ ಸರ್ಕಾರದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್‌ನಲ್ಲಿ ಪಟ್ಟಿ ಮಾಡಿತ್ತು.

click me!