ಬಿಹಾರದಲ್ಲಿ ಎನ್‌ಆರ್‌ಸಿ ಜಾರಿಯಿಲ್ಲ ಎಂದ ಸಿಎಂ ನಿತೀಶ್ ಕುಮಾರ್!

Published : Dec 20, 2019, 07:22 PM IST
ಬಿಹಾರದಲ್ಲಿ ಎನ್‌ಆರ್‌ಸಿ ಜಾರಿಯಿಲ್ಲ ಎಂದ ಸಿಎಂ ನಿತೀಶ್ ಕುಮಾರ್!

ಸಾರಾಂಶ

'ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿ ಮಾಡುವುದಿಲ್ಲ'| ಬಿಹಾರ ಸಿಎಂ ನಿತೀಶ್ ಕುಮಾರ್ ಭರವಸೆ| ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿದ್ದರಿಂದ ಟೀಕೆಗೆ ಗುರಿಯಾಗಿದ್ದ ನಿತೀಶ್ ಕುಮಾರ್| ರಾಜ್ಯದಲ್ಲಿ ಎನ್‌ಆರ್‌ಸಿ ಜಾರಿಗೆ ಅವಕಾಶವಿಲ್ಲ ಎಂದ ಬಿಹಾರ ಸಿಎಂ|

ಪಾಟ್ನಾ(ಡಿ.20): ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಬಿಹಾರದಲ್ಲಿ ಜಾರಿ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿದ್ದರಿಂದ ಬೆಂಬಲಿಗರಿಂದ ತೀವ್ರ ಟೀಕೆಗೆ ಗುರಿಯಾಗಿರುವ ನಿತೀಶ್ ಕುಮಾರ್, ಅಲ್ಪಸಂಖ್ಯಾತರ ಪರವಾಗಿ ಧೀರ್ಘಕಾಲ ಜೊತೆಯಲ್ಲಿರುವುದಾಗಿ ಭರವಸೆ ನೀಡಿದ್ದಾರೆ.

ಭಾರತದಲ್ಲಿರುವ ಅಕ್ರಮ ವಲಸಿಗರನ್ನು ಹೊರಹಾಕಲು 2024 ಡೆಡ್‌ಲೈನ್; ಎನ್‌ಆರ್‌ಸಿ ಜಾರಿ ಹೇಗೆ?

ಸಾರ್ವಜನಿಕ  ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿತೀಶ್ ಕುಮಾರ್, ರಾಜ್ಯದಲ್ಲಿ ಎನ್‌ಆರ್‌ಸಿ ಜಾರಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿದ್ದಕ್ಕಾಗಿ ಪ್ರತಿಪಕ್ಷಗಳು ನಿತೀಶ್ ಕುಮಾರ್ ಅವರ ಜಾತ್ಯತೀಯ ಸಿದ್ದಾಂತವನ್ನು ಪ್ರಶ್ನಿಸಿದ್ದವು. ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಾಂತ್ ಕಿಶೋರ್, ಪ್ರಧಾನ ಕಾರ್ಯದರ್ಶಿ ಪವನ್ ವರ್ಮಾ, ಮತ್ತಿತರ ನಾಯಕರು ಕೂಡ ನಿತೀಶ್ ನಿರ್ಧಾರದಿಂದ ಬೇಸರಗೊಂಡಿದ್ದಾರೆ.

‘NRCಯಿಂದ ದೇಶದ ಬಡ ಜನತೆ ಮತ್ತೆ ಸಂಕಷ್ಟಕ್ಕೆ ಹೋಗಬಹುದು’

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು