Bihar Elections 2025: ಬಹಿರಂಗ ಪ್ರಚಾರಕ್ಕೆ ತೆರೆ, ನಾಳೆ ಅಂತಿಮ ಸುತ್ತಿನ ಮತದಾನ, ನ.14ಕ್ಕೆ ಫಲಿತಾಂಶ

Kannadaprabha News, Ravi Janekal |   | Kannada Prabha
Published : Nov 10, 2025, 09:43 AM IST
Bihar elections 2025 live updates Campaign ends for phase 2 Bihar

ಸಾರಾಂಶ

Bihar elections 2025 live updates: ಬಿಹಾರ ವಿಧಾನಸಭಾ ಚುನಾವಣೆಯ ಅಬ್ಬರದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ನ. 11 ರಂದು ಎರಡನೇ ಹಂತದ ಮತದಾನ ನಡೆಯಲಿದೆ ಮತ್ತು ನವೆಂಬರ್ 14 ರಂದು ಫಲಿತಾಂಶ ಪ್ರಕಟವಾಗಲಿದೆ. ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಘಟಾನುಘಟಿ ನಾಯಕರು ಪ್ರಚಾರ ನಡೆಸಿದರೆ,

ಪಟನಾ (ನ.10): ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಭಾನುವಾರ ತೆರೆ ಬಿದ್ದಿದೆ. ರಾಜ್ಯದ 243 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ ಎರಡನೇ ಹಂತ ನ.11ರಂದು ನಡೆಯಲಿದ್ದು, ನ.14ರಂದು ಫಲಿತಾಂಶ ಪ್ರಕಟವಾಗಲಿದೆ.

ನ.6ರಂದು ನಡೆದ ಮೊದಲ ಸುತ್ತಿನಲ್ಲಿ 121 ಕ್ಷೇತ್ರಗಳಲ್ಲಿ ಶೇ.65ರಷ್ಟು ಮತದಾನವಾಗಿತ್ತು. 2ನೇ ಹಂತದಲ್ಲಿ 122 ಕ್ಷೇತ್ರಗಳಿಗೆ ಮತದಾರ ನಡೆಯಲಿದ್ದು, 1302 ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ.

ಪ್ರಚಾರಕ್ಕೆ ತೆರೆ:

ಎರಡನೇ ಹಂತದ ಚುನಾವಣೆ ಬಹಿರಂಗ ಪ್ರಚಾರಕ್ಕೆ ಭಾನುವಾರ ತೆರೆ ಬಿದ್ದಿದ್ದು, ಅಂತಿಮ ದಿನ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.

ಭರ್ಜರಿ ಪ್ರಚಾರ:

ಈ ವಿಧಾನಸಭಾ ಚುನಾವಣಾ ಪ್ರಚಾರವು ಎಲ್ಲ ಪಕ್ಷಗಳ ಪ್ರಭಾವಿಗಳ ಅಬ್ಬರದ ಪ್ರಚಾರಕ್ಕೆ ಸಾಕ್ಷಿಯಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು 14 ಪ್ರಚಾರ, ರೋಡ್‌ಶೋಗಳನ್ನು ನಡೆಸಿದರೆ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ, ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಅವರು 10 ರ್‍ಯಾಲಿಗಳಲ್ಲಿ ಭಾಗಿಯಾದರು. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ನಿತಿನ್‌ ಗಡ್ಕರಿ, ಶಿವರಾಜ್ ಸಿಂಗ್‌ ಚೌಹಾಣ್‌, ಯುಪಿ ಸಿಎಂ ಯೋಗಿ ಆದಿತ್ಯನಾಥ್‌, ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ, ಎಂಪಿ ಸಿಎಂ ಮೋಹನ್‌ ಯಾದವ್‌ ಸಹ ಬಿಜೆಪಿಗೆ ಮತಗಳಿಸುವಲ್ಲಿ ಶ್ರಮಿಸಿದರು.

ಕಾಂಗ್ರೆಸ್‌ ಪರ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಹಲವರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಅತ್ತ ಬಿಹಾರದ ವಿಪಕ್ಷ ಆರ್‌ಜೆಡಿ ಪರವಾಗಿ ತೇಜಸ್ವಿ ಯಾದವ್‌ ಸಹ ಮತದಾರನ ಸೆಳೆವ ಕೆಲಸ ಮಾಡಿದರು.

ನಿತೀಶ್‌ ಗೈರು:

ಚುನಾವಣಾ ಪ್ರಚಾರದುದ್ದಕ್ಕೂ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ಗೈರುಹಾಜರಿಯು ಎದ್ದು ಕಾಣುತ್ತಿತ್ತು. ಪ್ರಧಾನಿ ಮೋದಿ ಅವರ ಮೊದಲ ಪ್ರಚಾರದಲ್ಲಿ ಮತ್ತು ಒಂದೆರಡು ರೋಡ್‌ಶೋಗಳಲ್ಲಿ ಮಾತ್ರ ಭಾಗಿಯಾಗಿದ್ದರು. ಇದು ನಿತೀಶ್ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂಬ ಸುದ್ದಿಗೆ ಗ್ರಾಸವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ
ಸೆಂಟ್ರಲ್ ಮೆಟ್ರೋ ಮತ್ತು ಹೈಕೋರ್ಟ್ ನಿಲ್ದಾಣಗಳ ನಡುವೆ ನೀಲಿ ಮಾರ್ಗದ ಸುರಂಗದಲ್ಲಿ ಹಠಾತ್ ನಿಂತ ಮೆಟ್ರೋ ರೈಲು