
ನವದೆಹಲಿ (ನ.11) ಬಿಹಾರ ವಿಧಾನಸಭೆ ಚುನಾವಣೆ ಅಂತ್ಯಗೊಂಡಿದೆ. ಎರಡು ಹಂತದಲ್ಲಿ ನಡೆದ ಮತದಾನ ಇಂದು ಅಂತ್ಯಗೊಂಡಿದೆ. ಬಿಹಾರ ಚುನಾವಣೆ ದೇಶದ ಇತರ ಚುನಾವಣೆಗಳ ಮೇಲೂ ಪರಿಣಾಮ ಬೀರಲಿದೆ. ಕಾರಣ ಆಪರೇಶನ್ ಸಿಂದೂರ್ ನಡೆದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಹೀಗಾಗಿ ಇಡೀ ದೇಶವೇ ಕುತೂಹಲದಿಂದ ನೋಡುತ್ತಿದೆ. ಇದೀಗ ಬಹುತೇಕ ಮತಗಟ್ಟೆ ಸಮೀಕ್ಷೆಗಳ ಫಲಿತಾಂಶ ಪ್ರಕಟಗೊಂಡಿದೆ. ಎಲ್ಲಾ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಹುಮತ ನೀಡಿದೆ.ಕಾಂಗ್ರೆಸ್, ಆರ್‌ಜೆಡಿ ಸೇರಿದಂತೆ ಇತರ ಪಕ್ಷಗಳ ಮಹಾಘಟನಬಂದನ್ ಮತ್ತೆ ಸೊರಗಿದೆ. ಆದರೆ ತೀವ್ರ ಹೋರಾಟದ ಹಾದಿ ಹಿಡಿದು ಬಂದ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷ ಗರಿಷ್ಠ 5 ಸ್ಥಾನ ನೀಡಿದ್ದರೆ, ಬಹುತೇಕ ಸಮೀಕ್ಷೆಗಳು ಶೂನ್ಯ ಸ್ಥಾನ ನೀಡಿದೆ.
ಪೀಪಲ್ಸ್ ಫಲ್ಸ್ ಮತಗಟ್ಟೆ ಸಮೀಕ್ಷೆ
ಟೈಮ್ಸ್ ನೌ ಮತಗಟ್ಟೆ ಸಮೀಕ್ಷೆ
ಮ್ಯಾಟ್ರಿಜ್ ಮತಗಟ್ಟೆ ಸಮೀಕ್ಷೆ
ದೈನಿಕ್ ಭಾಸ್ಕರ್ ಮತಗಟ್ಟೆ ಸೆಮೀಕ್ಷೆ
ಪೀಪಲ್ಸ್ ಇನ್‌ಸೈಟ್ ಮತಗಟ್ಟೆ ಸೆಮೀಕ್ಷೆ
ಬಿಹಾರ ಚುನಾವಣೆ ತೀವ್ರ ಕುತೂಹಲ ಕೆರಳಿಸಿದ ಚುನಾವಣೆಯಾಗಿದೆ. ಬಿಹಾರದ ಬೆನ್ನಲ್ಲೇ ಕೆಲ ರಾಜ್ಯಗಳ ಚುನಾವಣೆ ನಡೆಯಲಿದೆ. ಹೀಗಾಗಿ ಬಿಹಾರ ಚುನಾವಣೆ ಫಲಿತಾಂಶ ಇತರ ರಾಜ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಬಿಹಾರದ 242 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಸರ್ಕಾರ ರಚಿಸಲು 122 ಸ್ಥಾನದ ಅವಶ್ಯತೆ ಇದೆ. ಎನ್‌ಡಿಎ ಹಾಗೂ ಜೆಡಿಯು ತಲಾ 101 ಸ್ಥಾನಗಳಿಗೆ ಸ್ಪರ್ಧಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ