
ಪಟನಾ (ಸೆ.9): ನಕಲಿ ವೈದ್ಯನೊಬ್ಬ ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಿ ಶಸ್ತ್ರಚಿಕಿತ್ಸೆ ಮಾಡಿದ್ದರಿಂದ 15 ವರ್ಷದ ಬಾಲಕ ಮೃತಪಟ್ಟ ಘಟನೆ ಬಿಹಾರದ ಸಾರಣ್‌ನಲ್ಲಿ ನಡೆದಿದೆ. ಕೃಷ್ಣಕುಮಾರ್ (15) ಮೃತಪಟ್ಟ ಬಾಲಕ.
ಕೃಷ್ಣಕುಮಾರ್ ಹಲವು ಬಾರಿ ವಾಂತಿ ಮಾಡಿಕೊಂಡಿದ್ದರಿಂದ ಆತನ ಪೋಷಕರು ಸಾರಣ್‌ನ ಗಣಪತಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ಆಸ್ಪತ್ರೆಯಲ್ಲಿ ವೈದ್ಯನಾಗಿದ್ದ ಅಜಿತ್ ಕುಮಾರ್ ಪುರಿ ನಕಲಿ ವೈದ್ಯನಾಗಿದ್ದು, ಇದರ ಅರಿವಿರದೇ ಅವರು ಈ ಆಸ್ಪತ್ರೆಗೆ ಬಂದಿದ್ದರು.
ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಸಂಪಾದ ವಸಂತ ನಾಡಿಗೇರ ಹೃದಯಾಘಾತದಿಂದ ನಿಧನ!
ಆರಂಭದಲ್ಲಿ ಅಜಿತ್, ಬಾಲಕನಿಗೆ ವಾಂತಿ ನಿಲ್ಲಲು ಚಿಕಿತ್ಸೆ ನೀಡಿದ್ದ ಹಾಗೂ ಪಿತ್ತಕೋಶದಲ್ಲಿ ಕಲ್ಲು ಆಗಿದ್ದರಿಂದ ಶಸ್ತ್ರಚಿಕಿತ್ಸೆ ಮಾಡಬೇಕೆಂದು ನಿರ್ಧರಿಸಿದ್ದ. ಬಳಿಕ ಶಸ್ತ್ರಚಿಕಿತ್ಸೆ ಕೊಠಡಿಗೆ ಕರೆದುಕೊಂಡು ಹೋಗಿ ಯೂಟ್ಯೂಬಲ್ಲಿ ವಿಡಿಯೋ ನೋಡಿ ಶಸ್ತ್ರಚಿಕಿತ್ಸೆ ಮಾಡಿದ್ದ. ಆಗ ಬಾಲಕನಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಆ್ಯಂಬುಲೆನ್ಸ್‌ನಲ್ಲಿ ಪಟನಾದಲ್ಲಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ.
ಆದರೆ ಬಾಲಕ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಹೆದರಿದ ಅಜಿತ್ ಕುಮಾರ್ ಹಾಗೂ ಆತನ ಸಿಬ್ಬಂದಿ ಪಟನಾ ಆಸ್ಪತ್ರೆಯಲ್ಲಿ ಬಾಲಕನ ಶವವನ್ನು ಬಿಟ್ಟು ಪರಾರಿಯಾಗಿದ್ದಾರೆ.ಈ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ನಕಲಿ ವೈದ್ಯ ಅಜಿತ್ ಕುಮಾರ್ ಹಾಗೂ ಆತನ ಸಿಬ್ಬಂದಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ