
ಗಯಾ (ಜು.26) ದೇಶದಲ್ಲಿ ಹೆಣ್ಣು ಮಕ್ಕಳು ಹಾಗೂ ಮಹಿಳೆ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ ಹೋಮ್ ಗಾರ್ಡ್ ನೇಮಕಾತಿಯ ದೈಹಿಕ ಪರೀಕ್ಷೆ ವೇಳೆ ಕುಸಿದು ಬಿದ್ದ ಯುವತಿಯನ್ನು ಆ್ಯಂಬುಲೆನ್ಸ್ ಮೂಲಕ ಆಸ್ರತ್ರೆಗೆ ಕರೆದೊಯ್ಯುವಾಗ ಸಾಮೂಹಿಕ ಅತ್ಯಾ*ರ ಎಸಗಿದ ಘಟನೆ ಬಿಹಾರದ ಗಯಾದಲ್ಲಿ ವರದಿಯಾಗಿದೆ. ಈ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹೋಮ್ ಗಾರ್ಡ್ ನೇಮಕಾತಿ ವೇಳೆ ಘಟನೆ
ಬೋಧ್ ಗಯಾದಲ್ಲಿ ಹೋಮ್ ಗಾರ್ಡ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಬೋಧ್ ಗಯಾ ಮೈದಾನದಲ್ಲಿ ದೈಹಿಕ ಪರೀಕ್ಷೆಗೆ ಅಭ್ಯರ್ಥಿಗಳು ಹಾಜರಾಗಿದ್ದರು. ಸಾವಿರಾರು ಅಭ್ಯರ್ಥಿಗಳು ನೇಮಕಾತಿ ಪರೀಕ್ಷೆಗೆ ಹಾಜರಾಗಿದ್ದರು. ಓಟ, ದೈಹಿಕ ಸಾಮರ್ಥ್ಯ ಸೇರಿದಂತೆ ಹಲವು ಪರೀಕ್ಷೆಗಳು ನಡೆಸಲಾಗಿತ್ತು. ಈ ವೇಳೆ 26 ವರ್ಷದ ಯುವತಿ ಅಸ್ವಸ್ಥಗೊಂಡು ಕುಸಿದು ಬಿದಿದ್ದಾರೆ.
ಆ್ಯಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ರವಾನೆ
ಅಸ್ವಸ್ಥಗೊಂಡು ಕುಸಿದು ಬಿದ್ದ ಯುವತಿಗೆ ನೀರು ಕುಡಿಸಿ ಚೇತರಿಕೆಗೆ ಹಲವು ಪ್ರಯತ್ನಗಳು ನಡೆದಿತ್ತು. ಆದರೆ ಯುವತಿ ಚೇತರಿಸಿಕೊಳ್ಳದ ಕಾರಣ ಆ್ಯಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಅಸ್ವಸ್ಥಳಾಗಿ ಆ್ಯಂಬುಲೆನ್ಸ್ ಮೂಲಕ ಸಾಗುತ್ತಿದ್ದ ಈಕೆಯ ಮೇಲೆ ಸಾಮೂಹಿಕವಾಗಿ ಅತ್ಯಾ*ರ ಎಸಲಾಗಿದೆ ಎಂದು ಯುವತಿ ಆರೋಪಿಸಿ ದೂರು ನೀಡಿದ್ದಾಳೆ. ಅಸ್ವಸ್ಥಳಾಗಿರುವ ವೇಳೆ ಆ್ಯಂಬುಲೆನ್ಸ್‌ನಲ್ಲಿ ಸಿಬ್ಬಂದಿಗಳು ತನ್ನ ಮೇಲೆ ಅತ್ಯಾ*ರ ಎಸಗಿದ್ದಾರೆ ಎಂದು ಆರೋಪಿಸಿದ್ದಾಳೆ.
ಇಬ್ಬರು ಆರೋಪಿಗಳ ಬಂಧಿಸಿದ ಪೊಲೀಸ್
ಯುವತಿ ಆರೋಪ ಬಿಹಾರ ಹೋಮ್ ಗಾರ್ಡ್ ವಿಭಾಗಕ್ಕೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿದೆ. ಹೋಮ್ ಗಾರ್ಡ್ ಭದ್ರತಾ ವಿಭಾಗದ ಪರೀಕ್ಷೆಗೆ ಹಾಜರಾಗಿದ್ದ ಯುವತಿ ಮೇಲೆ ಈ ರೀತಿ ನಡೆದಿರುವುದು ಇದೀಗ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.ಯುವತಿ ಆರೋಪದ ಬೆನ್ನಲ್ಲೇ ಪೊಲೀಸರು ಕಾರ್ಯಪ್ರವತ್ತರಾಗಿದ್ದಾರೆ. ಇಷ್ಟೇ ಅಲ್ಲ ಇಬ್ಬರು ಆರೋಪಿಗಳನ್ನು ಬಂದಿಸಿ ತನಿಖೆ ತೀವ್ರಗೊಳಿಸಿದ್ದಾರೆ.
ಬಿಹಾರ ಕಾನೂನು ಸುವ್ಯವಸ್ಥೆ ಕುರಿತು ಆಕ್ರೋಶ
ಬಿಹಾರದಲ್ಲಿ ಪದೇ ಪದೇ ಹಲವು ಪ್ರಕರಣಗಳು ವರದಿಯಾಗುತ್ತಿದೆ. ಬಿಹಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ವಿಪಕ್ಷಗಳು ಮಾತ್ರವಲ್ಲ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಕೂಡ ಅಸಮಾಧಾನ ಹೊರಹಾಕಿದ್ದಾರೆ. ಆರೋಪಿಗಳ ಮುಂದೆ ಬಿಹಾರ ಕೈಕಟ್ಟಿ ಕುಳಿತಿದೆ. ಸತತ ಪ್ರಕರಣಗಳು ದಾಖಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿಗೆ ಎಂದು ಚಿರಾಗ್ ಪಾಸ್ವಾನ್ ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ