ಬಿಲ್ಕಿಸ್‌ ಬಾನೋ ಕೇಸ್‌: ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆ ರದ್ದು ಮಾಡಿ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌

Published : Nov 16, 2026, 04:15 PM IST
Bilkis Bano

ಸಾರಾಂಶ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಬಿಲ್ಕಿಸ್ ಬಾನೋ ಸಾಮೂಹಿಕ ಅ**ಚಾರ ಮತ್ತು ಕೊ** ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಇಬ್ಬರು ಅಪರಾಧಿಗಳ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಜಾಮೀನು ಮಂಜೂರು ಮಾಡಿದೆ.

ನವದೆಹಲಿ (ನ.16): ದೇಶಾದ್ಯಂತ ಭಾರಿ ಸದ್ದು ಮಾಡಿದ್ದ ಬಿಲ್ಕಿಸ್ ಬಾನೋ ಸಾಮೂಹಿಕ ಅ**ಚಾರ ಮತ್ತು ಕೊ** ಪ್ರಕರಣದಲ್ಲಿ (Bilkis Bano and Murder Case) ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಇಬ್ಬರು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಬ್ಬರೂ ಅಪರಾಧಿಗಳು ಈಗಾಗಲೇ 17 ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿದ್ದಾರೆ ಮತ್ತು ಅವರಲ್ಲಿ ಒಬ್ಬರು ತೀವ್ರ ಅಂಗವೈಕಲ್ಯದಿಂದ (Severely disabled) ಬಳಲುತ್ತಿದ್ದಾರೆ ಎಂಬ ಅಂಶವನ್ನು ಪರಿಗಣಿಸಿ ಸರ್ವೋಚ್ಚ ನ್ಯಾಯಾಲಯವು ಅವರ ಶಿಕ್ಷೆಯನ್ನು ಅಮಾನತುಗೊಳಿಸಿದೆ.

ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ಮತ್ತು ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠವು, ಇಬ್ಬರು ಅಪರಾಧಿಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿ ಅಕ್ಟೋಬರ್ 28 ರಂದು ಈ ಮಹತ್ವದ ಆದೇಶ ಹೊರಡಿಸಿದೆ. 2017ರಲ್ಲಿ ಬಾಂಬೆ ಹೈಕೋರ್ಟ್ ತಮ್ಮ ದೋಷಾರೋಪಣೆ ಮತ್ತು ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿದಿದ್ದ ತೀರ್ಪನ್ನು ಪ್ರಶ್ನಿಸಿ ಇಬ್ಬರೂ ಅಪರಾಧಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಜಾಮೀನು ಪಡೆದಿರುವ ಇಬ್ಬರು ಅಪರಾಧಿಗಳು ಯಾರು?

ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿರುವ ಈ ಇಬ್ಬರು ಅಪರಾಧಿಗಳು, 2022ರ ಆಗಸ್ಟ್‌ನಲ್ಲಿ ಗುಜರಾತ್ ಸರ್ಕಾರದಿಂದ ಅವಧಿಪೂರ್ವ ಬಿಡುಗಡೆಯಾಗಿದ್ದ (Premature release) 11 ಅಪರಾಧಿಗಳ ಪಟ್ಟಿಯಲ್ಲಿ ಸೇರಿದ್ದರು. ಆದರೆ, 2024ರ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರದ ಆ ಆದೇಶವನ್ನು ರದ್ದುಗೊಳಿಸಿದ ಬಳಿಕ, ಎಲ್ಲಾ 11 ಅಪರಾಧಿಗಳು ಮತ್ತೆ ಜೈಲಿಗೆ ಮರಳಿದ್ದರು.

ತನ್ನ ಆದೇಶದಲ್ಲಿ ನ್ಯಾಯಪೀಠವು, ಇಬ್ಬರೂ ಮೇಲ್ಮನವಿದಾರರು 17 ವರ್ಷಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದಾರೆ. ಇವರಲ್ಲಿ ಒಬ್ಬರು ತೀವ್ರ ಅಂಗವೈಕಲ್ಯ ಹೊಂದಿದ್ದಾರೆ. ಮೇಲ್ಮನವಿಯಲ್ಲಿ ಸತ್ಯಾಂಶಗಳು ಮತ್ತು ಕಾನೂನು ಎರಡಕ್ಕೂ ಸಂಬಂಧಿಸಿದಂತೆ ವಿಚಾರಣೆ ನಡೆಸಿ ತೀರ್ಮಾನಿಸಬೇಕಾದ ಅಂಶಗಳಿವೆಎಂದು ಅಭಿಪ್ರಾಯಪಟ್ಟಿದೆ.

ಸುಪ್ರೀಂ ಕೋರ್ಟ್ ಹೇಳಿದ್ದೇನು?

ಎಲ್ಲರ ವಾದವನ್ನು ಆಲಿಸಿದ ನಂತರ, ಮೇಲ್ಮನವಿದಾರರು 17 ವರ್ಷಗಳಿಗೂ ಅಧಿಕ ಕಾಲ ಜೈಲಿನಲ್ಲಿದ್ದಾರೆ ಮತ್ತು ಅವರಲ್ಲಿ ಒಬ್ಬರು ತೀವ್ರ ಅಂಗವೈಕಲ್ಯ ಹೊಂದಿದ್ದಾರೆ ಎಂಬ ವಾಸ್ತವವನ್ನು ಹೇಳುವುದೇ ಸಾಕಾಗುತ್ತದೆ. ಖಂಡಿತವಾಗಿಯೂ ಮೇಲ್ಮನವಿಯಲ್ಲಿ ವಾಸ್ತವಾಂಶ ಮತ್ತು ಕಾನೂನಿನ ಆಧಾರದ ಮೇಲೆ ನಿರ್ಧರಿಸಬೇಕಾದ ವಿಷಯಗಳಿವೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳೀತ್ತು. ಈ ಎಲ್ಲಾ ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯವು ಇಬ್ಬರೂ ಅಪರಾಧಿಗಳ ಶಿಕ್ಷೆಯನ್ನು ಅಮಾನತುಗೊಳಿಸಿದ್ದು, ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯ (Trial Court) ವಿಧಿಸುವ ಷರತ್ತುಗಳಿಗೆ ಒಳಪಟ್ಟು ಜಾಮೀನು ನೀಡುವಂತೆ ಆದೇಶಿಸಿದೆ. ಇಬ್ಬರ ಮೇಲ್ಮನವಿಯ ಕುರಿತ ಮುಂದಿನ ವಿಚಾರಣೆ ನಿಯಮಾನುಸಾರ ನಡೆಯಲಿದೆ.

ಜಾಮೀನು ಅರ್ಜಿಗೆ ಎಎಸ್‌ಜಿ ತೀವ್ರ ವಿರೋಧ

ವಿಚಾರಣೆಯ ಸಂದರ್ಭದಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ (ASG) ರಾಜಾ ಠಾಕ್ರೆ ಅವರು ಇಬ್ಬರೂ ಅಪರಾಧಿಗಳ ಜಾಮೀನು ಅರ್ಜಿಯನ್ನು ಬಲವಾಗಿ ವಿರೋಧಿಸಿದರು. ಕೆಳ ನ್ಯಾಯಾಲಯಗಳು ದಾಖಲೆಯಲ್ಲಿರುವ ಎಲ್ಲಾ ಸಂಬಂಧಿತ ಸಾಕ್ಷ್ಯಗಳು ಮತ್ತು ಸತ್ಯಾಂಶಗಳನ್ನು ಪರಿಶೀಲಿಸಿದ ನಂತರವೇ ತೀರ್ಪು ನೀಡಿವೆ. ಅಪರಾಧದ ಗಂಭೀರತೆಯನ್ನು ಪರಿಗಣಿಸಿ ಇವರಿಗೆ ಜಾಮೀನು ನೀಡಬಾರದು ಎಂದು ಅವರು ವಾದ ಮಂಡಿಸಿದರು. ಆದರೆ, ಸುದೀರ್ಘ ಜೈಲುವಾಸ, ಓರ್ವ ಅಪರಾಧಿಯ ತೀವ್ರ ಅಂಗವೈಕಲ್ಯ ಮತ್ತು ಮೇಲ್ಮನವಿಯಲ್ಲಿ ಪರಿಶೀಲಿಸಬೇಕಾದ ಕಾನೂನು ಪ್ರಶ್ನೆಗಳನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತು.

ಯಾವ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆಯಾಗಿತ್ತು?

ವಿಚಾರಣಾ ನ್ಯಾಯಾಲಯವು ಇಬ್ಬರೂ ಅಪರಾಧಿಗಳನ್ನು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 143 (ಕಾನೂನುಬಾಹಿರ ಗುಂಪುಗಾರಿಕೆ), ಸೆಕ್ಷನ್ 147 (ಗಲಭೆ), ಸೆಕ್ಷನ್ 302 (ಕೊಲೆ) ಮತ್ತು ಸೆಕ್ಷನ್ 376 (ಅ**ಚಾರ) ಅಡಿಯಲ್ಲಿ ದೋಷಿಗಳೆಂದು ಘೋಷಿಸಿ, ದಂಡದೊಂದಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಪ್ರಕರಣದ ಹಿನ್ನೆಲೆ

ಈ ಪ್ರಕರಣವು ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಸಂಬಂಧಿಸಿದೆ. 2017ರ ಮೇ 4 ರಂದು ಬಾಂಬೆ ಹೈಕೋರ್ಟ್ 11 ಅಪರಾಧಿಗಳ ದೋಷಾರೋಪಣೆ ಮತ್ತು ಶಿಕ್ಷೆಯನ್ನು ಎತ್ತಿಹಿಡಿದಿತ್ತು. ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಗುಜರಾತ್ ಸರ್ಕಾರವು 2022ರ ಆಗಸ್ಟ್ 15 ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 11 ಅಪರಾಧಿಗಳನ್ನು ಅವಧಿಪೂರ್ವವಾಗಿ ಬಿಡುಗಡೆ ಮಾಡಿತ್ತು. ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

2024ರ ಜನವರಿ 8 ರಂದು ಮಹತ್ವದ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಗುಜರಾತ್ ಸರ್ಕಾರದ ಬಿಡುಗಡೆ ಆದೇಶಗಳನ್ನು ರದ್ದುಗೊಳಿಸಿತ್ತು. ಈ ಪ್ರಕರಣದ ವಿಚಾರಣೆಯನ್ನು ಗುಜರಾತ್‌ನಿಂದ ಮಹಾರಾಷ್ಟ್ರಕ್ಕೆ ವರ್ಗಾಯಿಸಲಾಗಿತ್ತು ಮತ್ತು ಮಹಾರಾಷ್ಟ್ರದ ನ್ಯಾಯಾಲಯದಲ್ಲಿ ಅಪರಾಧಿಗಳಿಗೆ ಶಿಕ್ಷೆ ವಿಧಿಸಲಾಗಿದೆ. ಹೀಗಾಗಿ ಶಿಕ್ಷೆಯಲ್ಲಿ ವಿನಾಯಿತಿ ನೀಡುವ ಅಧಿಕಾರ ಗುಜರಾತ್ ಸರ್ಕಾರಕ್ಕೆ ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದ ನ್ಯಾಯಾಲಯ, ಎಲ್ಲಾ ಅಪರಾಧಿಗಳಿಗೆ ಮತ್ತೆ ಜೈಲಿಗೆ ಶರಣಾಗುವಂತೆ ನಿರ್ದೇಶಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ಸ್ವಲ್ಪನಾದ್ರೂ ನಾಚಿಕೆ ಇರಲಿ' ಪುಸ್ತಕಗಳ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತೀವ್ರ ತರಾಟೆ
ಸಿಎಂ ವಿಜಯ್ ದಾಂಪತ್ಯ ಕೋಲಾಹಲ ಬಳಿಕ ಸಚಿವ ಆಧವ್ ಸಂಸಾರದಲ್ಲಿ ಬಿರುಕು, ಡಿವೋರ್ಸ್ ಅಧಿಕೃತ