ಅಮೆರಿಕದ ಉದ್ಯಮಿ, ಭಾರತ ವಿರೋಧಿ ಜಾರ್ಜ್ ಸೊರೋಸ್ ಫೌಂಡೇಶನ್‌ನಿಂದ ಹಣಕಾಸು ನೆರವು ಪಡೆಯುವ ಹಾಗೂ ಕಾಶ್ಮೀರ ಪ್ರತ್ಯೇಕ ರಾಷ್ಟ್ರವಾಗುವುದನ್ನು ಬೆಂಬಲಿಸಿದ ಸಂಸ್ಥೆಯೊಂದಿಗೆ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಂಟು ಹೊಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ನವದೆಹಲಿ: ಅಮೆರಿಕದ ಉದ್ಯಮಿ, ಭಾರತ ವಿರೋಧಿ ಜಾರ್ಜ್ ಸೊರೋಸ್ ಫೌಂಡೇಶನ್‌ನಿಂದ ಹಣಕಾಸು ನೆರವು ಪಡೆಯುವ ಹಾಗೂ ಕಾಶ್ಮೀರ ಪ್ರತ್ಯೇಕ ರಾಷ್ಟ್ರವಾಗುವುದನ್ನು ಬೆಂಬಲಿಸಿದ ಸಂಸ್ಥೆಯೊಂದಿಗೆ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಂಟು ಹೊಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ‘ಸೊರೋಸ್‌ರಿಂದ ನೆರವು ಪಡೆಯುವ ‘ಫೋರಂ ಆಫ್ ಡಿ ಡೆಮಾಕ್ರಟಿಕ್ ಲೀಡರ್ಸ್ ಇನ್ ಏಷ್ಯಾ ಪೆಸಿಫಿಕ್’ (ಎಫ್‌ಡಿಎಲ್-ಎಪಿ) ಸಂಸ್ಥೆ ಕಾಶ್ಮೀರವನ್ನು ಪ್ರತ್ಯೇಕ ರಾಷ್ಟ್ರವಾಗಿ ಪರಿಗಣಿಸುತ್ತದೆ. ಸೋನಿಯಾ ಗಾಂಧಿ ಇದರ ಸಹ ಅಧ್ಯಕ್ಷೆಯಾಗಿದ್ದಾರೆ. ಇದು ಭಾರತದ ಆಂತರಿಕ ವಿಷಯಗಳಲ್ಲಿ ವಿದೇಶಿ ಕಂಪನಿಗಳ ಪ್ರಭಾವವನ್ನು ತೋರಿಸುತ್ತದೆ’ ಎಂದು ಆರೋಪಿಸಿದೆ.
ಈ ವೇಳೆ, ಸೊರೋಸ್‌ರನ್ನು ಹಳೆಯ ಮಿತ್ರ ಎಂದು ಕರೆದಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಹೇಳಿಕೆಯನ್ನೂ ಬಿಜೆಪಿ ನೆನಪಿಸಿದೆ. ಈ ಮೊದಲು, ಭಾರತದ ಘನತೆಗೆ ಧಕ್ಕೆ ತರುವ ಕೆಲಸದಲ್ಲಿ ತೊಡಗಿರುವ, ಸೊರೋಸ್‌ರಿಂದ ನೆರವು ಪಡೆಯುವ ಮಾಧ್ಯಮ ಸಂಸ್ಥೆ ಒಸಿಸಿಆರ್‌ಪಿ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಅಮೆರಿಕ ಸೇರಿಕೊಂಡಿದೆ ಎಂದು ಆಡಳಿತ ಪಕ್ಷ ಆರೋಪಿಸಿತ್ತು.
ಇದನ್ನೂ ಓದಿ: ರಾಹುಲ್ ಗಾಂಧಿಯನ್ನು ದೇಶದ್ರೋಹಿ ಎಂದವರೇ ನಿಜವಾದ ದೇಶದ್ರೋಹಿ: ಸಿದ್ದರಾಮಯ್ಯ