ಅಸ್ಸಾಂ ಚುನಾವಣೆ: 70 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!

Published : Mar 05, 2021, 09:21 PM IST
ಅಸ್ಸಾಂ ಚುನಾವಣೆ:  70 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!

ಸಾರಾಂಶ

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಇದೀಗ ಅಸ್ಸಾಂ ವಿಧಾನಸಭೆ ಚುನಾವಣೆಗೆ ಬಿಜೆಪಿ 70 ಸ್ಥಾನಗಳಿಗೆ ಅಭ್ಯರ್ಥಿ ಹೆಸರು ಅಂತಿಮಗೊಳಿಸಿದೆ.  ಸಿಎಂ ಸೊನೊವಾಲ್ ಸೇರಿದಂತೆ ಘಟಾನುಘಟಿ ನಾಯಕರು ಹೆಸರನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಅಸ್ಸಾಂ(ಮಾ.05):  ಪಂಚಾ ರಾಜ್ಯಗಳ ಚುನಾವಣೆಗೆ ಬಿಜೆಪಿ ಕೂಡ ಭರ್ಜರಿ ತಯಾರಿ ನಡೆಸುತ್ತಿದೆ. ಇದೀಗ ಅಸ್ಸಾಂ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. 70 ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದೆ. 

ಪಶ್ಚಿಮ ಬಂಗಾಳ ಚುನಾವಣೆ: 291 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ ಮಮತಾ ಬ್ಯಾನರ್ಜಿ!

ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಮಜುಲಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರೆ, ಇನ್ನು ಹಿಮಂತ ಬಿಸ್ವಾ ಶರ್ಮಾ ಜಲ್ಕುಬರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಅಸ್ಸಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಅಸ್ಸಾಂ ಗಣ ಪರಿಷದ್(AGP) ಹಾಗೂ ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್(UPPL) ಪಕ್ಷ  ಒಕ್ಕೂಟವಾಗಿ ಸ್ಪರ್ಧಿಸಲಿದೆ.   AGP ಪಕ್ಷ 26 ಸ್ಥಾನಗಳಿಗೆ ಸ್ಪರ್ಧಿಸಿದರೆ, UPPL ಪಕ್ಷ 8 ಸ್ಥಾನಗಳಿಗೆ ಸ್ಪರ್ಧಿಸಲಿದೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ. 

126 ಸ್ಥಾನಗಳ ಪೈಕಿ ಉಳಿದ 70 ಸ್ಥಾನಗಳಿಗೆ ಬಿಜೆಪಿ ಸ್ಪರ್ಧಿಸಲಿದೆ. ಇದೀಗ ಪಂಚ ರಾಜ್ಯಗಳ ಚುನಾವಣೆ ಕಾವು ಏರುತ್ತಿದೆ. ಬಿಜೆಪಿ ಅಳೆದು ತೂಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ