
ನವದೆಹಲಿ(ಡಿ.13): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಕಾರ್ಯಚಟುವಟಿಕೆಗೆ ಮತ್ತೊಂದು ಹಿನ್ನಡೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ದಾಳಿ ಎದುರಿಸಿದ್ದ ಜೆಪಿ ನಡ್ಡಾಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಸ್ವತಃ ಜೆಪಿ ನಡ್ಡ ಟ್ವಿಟರ್ ಮೂಲಕ ಕೊರೋನಾ ಮಾಹಿತಿ ಬಹಿರಂಗ ಪಡಿಸಿದ್ದಾರೆ.
ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿ: ಕೇಂದ್ರ ವರ್ಸಸ್ ಮಮತಾ!.
ಕೊರೋನಾ ಲಕ್ಷಣಗಳು ಕಾಣಿಸಿಕೊಂಡ ಕಾರಣ ತಕ್ಷಣವೇ ಪರೀಕ್ಷೆ ಮಾಡಿಸಿದ್ದೇನೆ. ಈ ವೇಳೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಯಾವುದೇ ಸಮಸ್ಯೆ ಇಲ್ಲ, ಆರೋಗ್ಯವಾಗಿದ್ದೇನೆ ಎಂದು 60 ವರ್ಷದ ಜೆಪಿ ನಡ್ಡ ಹೇಳಿದ್ದಾರೆ. ಜೆಪಿ ನಡ್ಡ ಇದೀಗ ತಮ್ಮ ಮನೆಯಲ್ಲೇ ಐಸೋಲೇಶನ್‌ಗೆ ಒಳಗಾಗಿದ್ದಾರೆ.
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಜೆಪಿ ನಡ್ಡಾ, ತನ್ನ ಸಂಪರ್ಕಕ್ಕೆ ಬಂದವರೆಲ್ಲಾ ಮುಂಜಾಗ್ರತೆ ವಹಿಸಬೇಕಾಗಿ ಮನವಿ ಮಾಡಿದ್ದಾರೆ. ನಡ್ಡಾ ಕೊರೋನಾ ತಗುಲಿರುವುದು ದೃಢವಾಗುತ್ತಿದ್ದಂತೆ ಬಿಜೆಪಿ ನಾಯಕರು ಶೀಘ್ರವೇ ಗುಣಮುಖರಾಗಿ ಎಂದು ಆಶಿಸಿದ್ದಾರೆ.
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಬಿಜಿಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಲವು ನಾಯಕರು ಟ್ವೀಟ್ ಮೂಲಕ ಶೀಘ್ರ ಗುಣಮುಖರಾಗಲು ಆಶಿಸಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ