
ಲಖನೌ(ಜೂ.02): ಮುಂದಿನ ವರ್ಷ ಎದುರಾಗಲಿರುವ ದೇಶದ ಅತಿದೊಡ್ಡ ರಾಜ್ಯ ಖ್ಯಾತಿಯ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಪಕ್ಷದಲ್ಲೇ ಆಕ್ರೋಶಗಳು ಭುಗಿಲೆದ್ದ ಮುನ್ಸೂಚನೆಗಳು ಕಂಡುಬಂದಿವೆ.
ಚೀನಾ ಲ್ಯಾಬ್‌ನಲ್ಲೇ ಕೊರೋನಾ ಹುಟ್ಟು, ಅಮೆರಿಕಾದ ಫಂಡಿಂಗ್: ಮೋಸ ಮಾಡಿದ್ದ ಡ್ರ್ಯಾಗನ್!
ಈ ಹಿನ್ನೆಲೆಯಲ್ಲಿ ಬಿಜೆಪಿಯ ಜನಪ್ರಿಯತೆಯನ್ನು ಮತ್ತೆ ವೃದ್ಧಿಸಲು ಬಿಜೆಪಿ ಹೈಕಮಾಂಡ್ ಮುಂದಾಗಿದ್ದು, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಮತ್ತು ಕೇಂದ್ರದ ಮಾಜಿ ಸಚಿವ ರಾಧಾ ಮೋಹನ್ ಸಿಂಗ್ ಅವರನ್ನು ಉತ್ತರ ಪ್ರದೇಶಕ್ಕೆ ರವಾನಿಸಿದೆ. ಮಂಗಳವಾರದಿಂದ ಈ ಇಬ್ಬರೂ ನಾಯಕರು ಪಕ್ಷದ ಆದಿತ್ಯನಾಥ್, ಶಾಸಕರು ಹಾಗೂ ಸಚಿವರ ಜತೆ ನಿರಂತರ ಸಮಾಲೋಚನೆ ನಡೆಸಿದ್ದಾರೆ. ಇದು ಮುಂದಿನ ಚುನಾವಣೆಯಲ್ಲಿ ನಾಯಕತ್ವದ ಬದಲಾಗಬಹುದೇ ಎಂಬ ಊಹಾಪೋಹಕ್ಕೆ ನಾಂದಿ ಹಾಡಿದೆ.
ಯೋಗಿ ಆಡಳಿತವು ಕೊರೋನಾ ಸ್ಥಿತಿಯ ಸಮರ್ಪಕ ನಿರ್ವಹಣೆ ಮಾಡಿಲ್ಲ ಎಂಬುದು ಒಂದು ಆರೋಪ. ಮತ್ತೊಂದೆಡೆ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯ ಭದ್ರಕೋಟೆಯಂಥ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಇದು ಯೋಗಿ ಮೇಲೆ ಕತ್ತಿ ತೂಗುವಂತೆ ಮಾಡಿದೆ ಎನ್ನಲಾಗಿದೆ.
ಉದ್ದಿಮೆಗಳಿಗೆ ಆಕ್ಸಿಜನ್ ನಿರ್ಬಂಧ 2 ದಿನದಲ್ಲಿ ತೆರವು ಸಾಧ್ಯತೆ!
ಯೋಗಿ ಆದಿತ್ಯನಾಥ್ ಅವರ ಅದಕ್ಷತೆಯಿಂದ 2ನೇ ಅಲೆಯ ವೇಳೆ ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಮಂದಿ ಬಲಿಯಾಗಿದ್ದಾರೆ. ಅಲ್ಲದೆ ಗಂಗಾ ನದಿಯಲ್ಲಿ ಶವಗಳು ತೇಲಿಬಂದಿದ್ದು, ಹಲವೆಡೆ ಸರಿಯಾಗಿ ಶವ ಸಂಸ್ಕಾರ ನೆರವೇರಿಸಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಎಲ್ಲಾ ವಿಚಾರಗಳನ್ನು ಇಟ್ಟುಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ವಿಪಕ್ಷಗಳು ಯೋಗಿ ಸರ್ಕಾರದ ಟೀಕಾಸ್ತ್ರ ಪ್ರಯೋಗಿಸುತ್ತಿವೆ. ಏತನ್ಮಧ್ಯೆ, ಬಿಜೆಪಿಯ ಶಾಸಕರು ತಾವು ಹೆಚ್ಚು ಮಾತನಾಡಿದರೆ ತಮ್ಮ ವಿರುದ್ಧವೂ ದೇಶದ್ರೋಹದ ಕೇಸ್ ದಾಖಲಾಗುತ್ತದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ